ನೂತನ ಸರ್ಕಾರದಿಂದ ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ

ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ ನಡೆಸಲು ನೂತನ ಸರ್ಕಾರ ನಿರ್ಧಾರ ಕೈಗೊಂಡಿದೆ. ಅಧಿವೇಶನದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಸರ್ಕಾರದಿಂದ ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ
ಸಿದ್ದರಾಮಯ್ಯ
Follow us
ಆಯೇಷಾ ಬಾನು
|

Updated on: May 21, 2023 | 7:33 AM

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ(Siddaramaiah Government) ರಚನೆಯಾಗಿದ್ದು ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ(Assembly Session) ನಡೆಸಲು ನೂತನ ಸರ್ಕಾರ ನಿರ್ಧಾರ ಕೈಗೊಂಡಿದೆ. ಅಧಿವೇಶನದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಗೂ ಹೊಸ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಎರಡು ದಿನ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧನೆ ಮಾಡಲಾಗುತ್ತೆ. ಹಂಗಾಮಿ ಸ್ಪೀಕರ್ ಆಗಿ R.V.ದೇಶಪಾಂಡೆ ಕಾರ್ಯನಿರ್ವಹಣೆ ಮಾಡಲಿದ್ದು ಮೂರನೇ ದಿನ ಹೊಸ ಸ್ಪೀಕರ್ ನೇಮಕ ಪ್ರಕ್ರಿಯೆ ನಡೆಯಲಿದೆ.

ಅತ್ಯಂತ ಹಿರಿಯ ಶಾಸಕರಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಅಧ್ಯಕ್ಷರಾಗಿ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುವಂತೆ ಮನವಿ ಮಾಡಲಾಗುವುದು. ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು.

ಇದನ್ನೂ ಓದಿ: KJ George: ಜನಕ್ಕೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲು ಅಣಿಯಾಗುತ್ತಿರುವುದು ಹೆಚ್ಚು ಸಂತಸ ನೀಡುತ್ತಿದೆ: ಕೆಜೆ ಜಾರ್ಜ್

ಮಹಿಳೆಯರ ಬ್ಯಾಂಕ್ ಖಾತೆಗೆ 2 ಸಾವಿರ ಗ್ಯಾರಂಟಿ: ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಅಧಿಕೃತ ಆದೇಶ

ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತರಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಆದೇಶ ಹೊರಬಿದ್ದಿದೆ. ಆ ಮೂಲಕ ಕರ್ನಾಟಕ ರಾಜ್ಯದ ಪ್ರತಿ ಮನೆಯ ಯಜಮಾನಿಯ ಬ್ಯಾಂಗ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಬೀಳುವುದು ಗ್ಯಾರಂಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ದೊರಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಬಿಎಂ ಚಂದ್ರಶೇಖರ್ ತಾತ್ವಿಕ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ