AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿದ ಬಿಜೆಪಿ: ಅವು ಇಲ್ಲಿವೆ

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ್ಲಿ ಗೆಲ್ಲುವ ಮೂಲಕ ಪ್ರಚಂಡ ಬಹುಮತ ಪಡೆದುಕೊಮಡಿದೆ. ಇನ್ನು ಬಿಜೆಪಿ ಕೇವಲ 66 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಹೀನಾಯ ಸೋಲಿಗೆ ಬಿಜೆಪಿ ಕೆಲ ಕಾರಣಗಳನ್ನು ಕಂಡುಕೊಂಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿದ ಬಿಜೆಪಿ: ಅವು ಇಲ್ಲಿವೆ
ರಮೇಶ್ ಬಿ. ಜವಳಗೇರಾ
|

Updated on:May 16, 2023 | 2:22 PM

Share

ಬೆಂಗಳೂರು:  ಚುನಾವಣಾ ಸಮೀಕ್ಷೆಗಳ ವರದಿಗಳನ್ನು ಮೀರಿ ಕರ್ನಾಟಕದಲ್ಲಿ ಕಾಂಗ್ರೆಸ್ (Congress)​ ಭಾರಿ ಗೆಲುವು ಸಾಧಿಸಿದೆ. ಬರೋಬ್ಬರಿ 135 ಸ್ಥಾನಗಳ್ಲಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಇನ್ನು ಬಿಜೆಪಿ ಈ ರೀತಿ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಫಲಿತಾಶದಿಂದ ಬಿಜೆಪಿ(BJP) ನಾಯಕರಿಗೆ ಶಾಕ್ ಆಗಿದೆ. ಅಲ್ಲದೇ ಹೀನಾಯ ಸೋಲಿಗೆ ಬಿಜೆಪಿ ಕಾರಣಗಳನ್ನು ಹುಡುಕುತ್ತಿದೆ. ಹೌದು.. ಸೋಲಿಗೆ ಒಂದೊಂದೇ ಕಾರಣ ಹುಡುಕುವಲ್ಲಿ ಬಿಜೆಪಿ ಮಗ್ನವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಬಿಜೆಪಿ ಪಡೆದುಕೊಂಡಿದೆ. ಹಾಗಾದ್ರೆ, ಇನ್ನುಳಿದ ಕಾರಣಗಳೇನು ಎನ್ನುವುದು ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ, ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಪ್ರಲ್ಹಾದ್​ ಜೋಶಿ ಹೇಳಿದ್ದಿಷ್ಟು

ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿರುವ ಬಿಜೆಪಿ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಪಡೆದಿದೆ. ಅಯಾಯ ಜಿಲ್ಲೆಗಳ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿ ಮಾಡಿ ಪ್ರಯೋಗ ಮಾಡಿದ್ದೇ ಸೋಲಿಗೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಉಸ್ತುವಾರಿ ಸಚಿವರು ಜಿಲ್ಲೆಗಳಿಂದ ನಿಖರ ಮಾಹಿತಿ ತೆಗೆಯುವಲ್ಲಿ ವಿಫಲವಾಗಿದ್ದು, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಉಸ್ತುವಾರಿ ಸಚಿವರು ಆಸಕ್ತಿ ತೋರಿಸಿಲ್ಲ. ಹೀಗಾಗಿ ಜಿಲ್ಲೆಗಳ ವಾಸ್ತವ ಸ್ಥಿತಿ ಮಾಹಿತಿ ಪಡೆಯುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ.

ಬಿಜೆಪಿ ಕಂಡುಕೊಂಡ ಕಾರಣಗಳು

  • ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಪ್ರಯೋಗ ಬಿಜೆಪಿಗೆ ಹೊಡೆತ ಕೊಟ್ಟಿದ್ದು, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಉಸ್ತುವಾರಿ ಸಚಿವರು ಆಸಕ್ತಿ ತೋರಿಸಿಲ್ಲ
  • ನಿಗಮ ಮತ್ತು ಮಂಡಳಿಗಳ ಸೂಕ್ತವಲ್ಲದ ನೇಮಕಾತಿಯಿಂದಲೂ ಪಕ್ಷಕ್ಕೆ ನಷ್ಟವಾಗಿದೆ. ಬೆಂಗಳೂರು ವ್ಯಾಪ್ತಿಗೆ ಸಂಬಂಧಿಸಿದ ನಿಗಮ-ಮಂಡಳಿಗೆ ಹೊರಗಿನವರ ನೇಮಕಾತಿಯಿಂದ ಕೂಡಾ ಸಮಸ್ಯೆಯಾಗಿದೆ.
  • ಬೆಂಗಳೂರಿನಲ್ಲಿ ಮಾತ್ರ ಪ್ರಧಾನಿ ಮೋದಿ ವರ್ಚಸ್ಸು ಪಕ್ಷಕ್ಕೆ ವರ್ಕೌಟ್ ಆಗಿದೆ. ಮೋದಿ ಅಲೆ ಇದೆ ಎಂದು ಅತಿಯಾಗಿ ನಂಬಿಕೊಂಡಿದ್ದು ಕೂಡಾ ಹಿನ್ನೆಡೆಗೆ ಕಾರಣವಾಗಿದೆ.
  • ಹಳೆ ಮೈಸೂರು ಭಾಗದಲ್ಲಿ 1:10 ಮತ ಪ್ರಮಾಣ ಹೆಚ್ಚಳವಾದರೂ ಲಾಭವಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಜೆಡಿಎಸ್ ಮತಗಳನ್ನು ಕಸಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಲಾಭ
  • ನಿಗಮ-ಮಂಡಳಿಗಳ ನೇಮಕಾತಿ ವಿಚಾರದಲ್ಲಿನ ವಿಳಂಬ ನೀತಿಯಿಂದಾಗಿ ಬೇಸತ್ತಿದ್ದ ಕಾರ್ಯಕರ್ತರು
  • ಕೆಲವು ಕಡೆ ಅಭ್ಯರ್ಥಿಗಳ ಬದಲಾವಣೆಯಿಂದ ಕೈಕೊಟ್ಟ ಗೆಲ್ಲುವ ಅವಕಾಶ
  • ಬಿಜೆಪಿ ಲೆಕ್ಕಾಚಾರ ಬದಲಿಸಿದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸ್ಕೀಮ್ ಗಳು
  • ಮತದಾನದ ಕೊನೆಯ 10 ದಿನಗಳಲ್ಲಿ ಅಂಡರ್ ಕರೆಂಟ್ ರೀತಿ ವರ್ಕ್ ಆದ ಗ್ಯಾರಂಟಿ ಸ್ಕೀಮ್ ಗಳು
  • ಮಹಿಳಾ ಮತದಾರರು, ಸ್ತ್ರೀ ಶಕ್ತಿ ಸಂಘಗಳು ಮತ್ತಿತರ ಕಡೆ ಅಂಡರ್ ಕರೆಂಟ್ ಆದ ಗ್ಯಾರಂಟಿ ಸ್ಕೀಮ್ ಗಳು.

Published On - 2:18 pm, Tue, 16 May 23

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್