ಬೆಂಗಳೂರು: ಚುನಾವಣಾ ಸಮೀಕ್ಷೆಗಳ ವರದಿಗಳನ್ನು ಮೀರಿ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಭಾರಿ ಗೆಲುವು ಸಾಧಿಸಿದೆ. ಬರೋಬ್ಬರಿ 135 ಸ್ಥಾನಗಳ್ಲಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಇನ್ನು ಬಿಜೆಪಿ ಈ ರೀತಿ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಫಲಿತಾಶದಿಂದ ಬಿಜೆಪಿ(BJP) ನಾಯಕರಿಗೆ ಶಾಕ್ ಆಗಿದೆ. ಅಲ್ಲದೇ ಹೀನಾಯ ಸೋಲಿಗೆ ಬಿಜೆಪಿ ಕಾರಣಗಳನ್ನು ಹುಡುಕುತ್ತಿದೆ. ಹೌದು.. ಸೋಲಿಗೆ ಒಂದೊಂದೇ ಕಾರಣ ಹುಡುಕುವಲ್ಲಿ ಬಿಜೆಪಿ ಮಗ್ನವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಬಿಜೆಪಿ ಪಡೆದುಕೊಂಡಿದೆ. ಹಾಗಾದ್ರೆ, ಇನ್ನುಳಿದ ಕಾರಣಗಳೇನು ಎನ್ನುವುದು ಈ ಕೆಳಗಿನಂತಿದೆ ನೋಡಿ.
ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ, ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಪ್ರಲ್ಹಾದ್ ಜೋಶಿ ಹೇಳಿದ್ದಿಷ್ಟು
ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿರುವ ಬಿಜೆಪಿ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಪಡೆದಿದೆ. ಅಯಾಯ ಜಿಲ್ಲೆಗಳ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿ ಮಾಡಿ ಪ್ರಯೋಗ ಮಾಡಿದ್ದೇ ಸೋಲಿಗೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಉಸ್ತುವಾರಿ ಸಚಿವರು ಜಿಲ್ಲೆಗಳಿಂದ ನಿಖರ ಮಾಹಿತಿ ತೆಗೆಯುವಲ್ಲಿ ವಿಫಲವಾಗಿದ್ದು, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಉಸ್ತುವಾರಿ ಸಚಿವರು ಆಸಕ್ತಿ ತೋರಿಸಿಲ್ಲ. ಹೀಗಾಗಿ ಜಿಲ್ಲೆಗಳ ವಾಸ್ತವ ಸ್ಥಿತಿ ಮಾಹಿತಿ ಪಡೆಯುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ.
Published On - 2:18 pm, Tue, 16 May 23