Karnataka Assembly Elections 2023: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧಾರ ಸ್ವಾರ್ಥದಿಂದ ಕೂಡಿದೆ: ಅರುಣ್ ಸಿಂಗ್ ವಾಗ್ದಾಳಿ

|

Updated on: Apr 14, 2023 | 2:01 PM

ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಕಾಂಗ್ರೆಸ್​ನಲ್ಲಿ ಭವಿಷ್ಯ ಇಲ್ಲ. ಕಾಂಗ್ರೆಸ್ ಸೇರಲು ನಿರ್ಧರಿಸಿ ಬಹಳ ದೊಡ್ಡ ತಪ್ಪು‌ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹೋದ ಮೇಲೆ ಲಕ್ಷ್ಮಣ ಸವದಿ ಪಶ್ಚಾತ್ತಾಪ ಪಡುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

Karnataka Assembly Elections 2023: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧಾರ ಸ್ವಾರ್ಥದಿಂದ ಕೂಡಿದೆ: ಅರುಣ್ ಸಿಂಗ್ ವಾಗ್ದಾಳಿ
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
Follow us on

ಬೆಂಗಳೂರು: ಯಾರೋ ನಾಲ್ಕು ಜನ ಪಕ್ಷ ಬಿಟ್ಟು ಹೋದರೆ ಏನೂ ನಷ್ಟ ಆಗಲ್ಲ. ಆದ್ರೆ ಹೋಗುವವರು ದುಡುಕಿನ ನಿರ್ಧಾರ ತೆಗೆದುಕೊಂಡು ಹೋಗಿದ್ದಾರೆ. ಅಂಥವರಿಗೆ ನಮ್ಮ ಪಕ್ಷದ ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ. ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಲು 20 ವರ್ಷವಾಗಬಹುದು. ಎಂಎಲ್​ಸಿ ಲಕ್ಷ್ಮಣ ಸವದಿಯವರು (Laxman Savadi) 10 ವರ್ಷವಾದರೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಮುಖ ನೋಡುತ್ತಾರೋ ಇಲ್ವೋ ಗೊತ್ತಿಲ್ಲ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ನಿರ್ಧಾರ ಸ್ವಾರ್ಥದಿಂದ ಕೂಡಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Sing) ಎಂದು ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಬಾರಿ ಚುನಾವಣೆಯಲ್ಲಿ ಹೊಸ ಜನರೇಷನ್​ಗೆ ಅವಕಾಶ ಕೊಟ್ಟಿದ್ದೇವೆ. ಬಿಜೆಪಿಯನ್ನು ಹೊಸ ತಲೆಮಾರಿನ ಪಾರ್ಟಿಯನ್ನಾಗಿ ಮಾಡುತ್ತಿದ್ದೇವೆ. ಹೀಗಾಗಿ ಹೊಸ ಮುಖಗಳಿಗೆ ಅವಕಾಶ ನೀಡಿದ್ದೇವೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಕಾಂಗ್ರೆಸ್​ನಲ್ಲಿ ಭವಿಷ್ಯ ಇಲ್ಲ. ಕಾಂಗ್ರೆಸ್ ಸೇರಲು ನಿರ್ಧರಿಸಿ ಬಹಳ ದೊಡ್ಡ ತಪ್ಪು‌ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ಎಂಎಲ್​ಸಿ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರುವುದು ಪಕ್ಕಾ: ಡಿಕೆ ಶಿವಕುಮಾರ್​

ಕಾಂಗ್ರೆಸ್ ಪಕ್ಷಕ್ಕೆ ಹೋದ ಮೇಲೆ ಲಕ್ಷ್ಮಣ ಸವದಿ ಪಶ್ಚಾತ್ತಾಪ ಪಡುತ್ತಾರೆ. ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಸೋತಿದ್ದರು. ಸವದಿಯನ್ನು ಎಂಎಲ್‌ಸಿ ಮಾಡಿ ಉಪಮುಖ್ಯಮಂತ್ರಿ ಮಾಡಿದ್ದೇವು. ಲಕ್ಷ್ಮಣ ಸವದಿ ಜಗಳಗಂಟ ಪಕ್ಷಕ್ಕೆ ಹೋಗಿದ್ದಾರೆ ಎಂದು ಹೇಳಿದರು.

ಲಕ್ಷ್ಮಣ ಸವದಿ ಕಾಂಗ್ರೆಸ್​ಗೆ ಹೋಗುತ್ತಿರುವುದು ದುಃಖ ತರಿಸಿದೆ

ಲಕ್ಷ್ಮಣ ಸವದಿ ಕಾಂಗ್ರೆಸ್​ಗೆ ಹೋಗ್ತಿರೋದು ದುಃಖ ತರಿಸಿದೆ. ಲಕ್ಷ್ಮಣ ಸವದಿ ಜೊತೆ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಲಕ್ಷ್ಮಣ ಸವದಿಗೆ ಕಾಂಗ್ರೆಸ್​ನಲ್ಲಿ ಭವಿಷ್ಯ ಕಾಣಿಸಿದೆ, ಹೋಗಿದ್ದಾರೆ. ಕಾಂಗ್ರೆಸ್​ಗೆ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಗತಿಯಿಲ್ಲ. ಅದಕ್ಕಾಗಿ ಬೇರೆ ಪಕ್ಷಗಳಿಂದ ಕೆಲವರನ್ನು ಸೇರಿಸಿಕೊಳ್ಳುತ್ತಿದ್ದಾರೆ. ಸಹಜವಾಗಿಯೇ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುತ್ತಾರೆ. ಕಾರ್ಯಕರ್ತರು ಪಕ್ಷದ ಪರವಾಗಿದ್ದಾರೆ ಸಾಕು ಬಿಜೆಪಿ ಗೆಲ್ಲಲಿದೆ. ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ