ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಥಾನಪಲ್ಲಟವಾಗುತ್ತಾರೆ ಎಂಬ ಊಹಾಪೋಹಗಳ ಮಧ್ಯೆ ಸೈಲೆಂಟ್ ಮೋಡ್ನಲ್ಲಿದ್ದ ಕರ್ನಾಟಕ ರಾಜ್ಯ ಬಿಜೆಪಿ (Karnataka BJP) ಉಸ್ತುವಾರಿ ನಾಯಕ ಅರುಣ್ ಸಿಂಗ್ (Arun Singh) ಅವರು ಆ ಬಗ್ಗೆ ಮಾತನಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರ (CM Basavaraj Bommai) ನೇತೃತ್ವದಲ್ಲೇ ಮುಂದಿನ ಅಸೆಂಬ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಬದಲು ಮಾಡುತ್ತಾರೆ ಎನ್ನುವ ವಿಚಾರದಲ್ಲಿ ಸತ್ಯಾಂಶ ಇಲ್ಲ. ಸಿಎಂ ಬದಲಾವಣೆ ಹೇಳಿಕೆ ಕೇವಲ ಕಾಂಗ್ರೆಸ್ ಸೃಷ್ಟಿ. ಕರ್ನಾಟಕ ಕಾಂಗ್ರೆಸ್ ಒಳಜಗಳದಿಂದ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. ಸಿಎಂ ಚೇಂಜ್ ಆಗ್ತಾರೆ ಅಂತಿದ್ದಾರೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರುಗಳು. ಸಿದ್ದರಾಮಯ್ಯ ಹಾಗೂ ಡಿಕೆ ಶಿ ತಮ್ಮ ಮಧ್ಯೆ ಜಗಳಗಳಲ್ಲಿ ನಿರತರಾಗಿದ್ದಾರೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ರೀತಿಯ ಅಭಿವೃದ್ಧಿ ಕಾರ್ಯ ನಡೆದಿದೆ. ಬೊಮ್ಮಾಯಿ ಅವರು ಕಾಮನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಸ್ಥಾನದಿಂದ ಬೊಮ್ಮಾಯಿ ಇಳಿಸುವ ಪ್ರಶ್ನೆಯೇ ಇಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
Also Read: