ಬೆಂಗಳೂರು: ರಾಜ್ಯದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ (Karnataka Assembly Elections 202) ನಡೆಯಲಿದ್ದು, ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಬುಧವಾರ ಬಹಿರಂಗಪಡಿಸಿದರು. ಈ ಬಾರಿ ಎಷ್ಟು ಮಂದಿ ಹೊಸ ಮತದಾರರಿದ್ದಾರೆ? ಮನೆಯಿಂದಲೇ ಮತದಾನ ಮಾಡುವವರು ಎಷ್ಟು ಮಂದಿ? ಎಷ್ಟು ನಗದು, ಉಡುಗೊರೆ ವಸ್ತುಗಳ ಜಪ್ತಿ ಮಾಡಲಾಗಿದೆ ಇತ್ಯಾದಿ ವಿವರಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದರು. ಚುನಾವಣಾಧಿಕಾರಿ ನೀಡಿರುವ ಪೂರ್ಣ ಮಾಹಿತಿ ಇಲ್ಲಿದೆ.
ಒಬ್ಬರು ಮತದಾನ ಸಿಬ್ಬಂದಿ, ಪೊಲೀಸರು, ಪೋಲಿಂಗ್ ಏಜೆಂಟ್ ಮನೆಯಿಂದಲೇ ಮತದಾನ ಪ್ರಕ್ರಿಯೆಗಾಗಿ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಲಿದ್ದಾರೆ. ಮತಪತ್ರದ ಮೂಲಕ ಮತದಾನ ಮಾಡಬಹುದಾಗಿದೆ. ಮನೆಯಿಂದಲೇ ಮತದಾನದ ವಿಡಿಯೋಗ್ರಾಫ್ ಮಾಡಲಾಗುವುದು ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಅನಧಿಕೃತ ರ‍್ಯಾಲಿಗಳ ಸಂಬಂಧ ಈವರೆಗೆ 53 ಎಫ್ಐಆರ್ ದಾಖಲಿಸಲಾಗಿದೆ. ಗುಂಪು ಘರ್ಷಣೆ ಸಂಬಂಧ 15 ಎಫ್ಐಆರ್ ಹಾಗೂ ದ್ವೇಷ ಭಾಷಣ ಸಂಬಂಧ 5 ಎಫ್ಐಆರ್ ಸೇರಿದಂತೆ ಒಟ್ಟು 673 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 265 ಕೋಟಿ ರೂ. ಹಣ ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:31 pm, Wed, 26 April 23