ಬೆಂಗಳೂರಿನಲ್ಲಿ ನಾಳೆ ಮಳೆ ಸಾಧ್ಯತೆ; ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಡ್ಡಿಯ ಆತಂಕ

ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಳೆಯ ಅಡಚಣೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ನಾಳೆ ಮಳೆ ಸಾಧ್ಯತೆ; ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಡ್ಡಿಯ ಆತಂಕ
ಸಾಂದರ್ಭಿಕ ಚಿತ್ರ
Follow us
|

Updated on: May 19, 2023 | 5:46 PM

ಬೆಂಗಳೂರು: ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ (Oath-Ttaking Ceremony) ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಳೆಯ ಅಡಚಣೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶನಿವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಶನಿವಾರ ಮೋಡಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:Karnataka Oath-Ttaking: ನಾಳೆ ಸಿಎಂ, ಡಿಸಿಎಂ ಪ್ರಮಾಣವಚನ; ಸಂಚಾರ ಬದಲಾವಣೆ ವಿವರ ಇಲ್ಲಿದೆ

ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮೇ 20 ಮತ್ತು 21 ರಂದು ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಇಲಾಖೆ ಗುರುವಾರ ತಿಳಿಸಿತ್ತು. ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ ಎಂದು ಇಲಾಖೆ ಹೇಳಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ