Karnataka Oath-Ttaking: ನಾಳೆ ಸಿಎಂ, ಡಿಸಿಎಂ ಪ್ರಮಾಣವಚನ; ಸಂಚಾರ ಬದಲಾವಣೆ ವಿವರ ಇಲ್ಲಿದೆ

ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಅವುಗಳ ಹಾಗೂ ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ.

Karnataka Oath-Ttaking: ನಾಳೆ ಸಿಎಂ, ಡಿಸಿಎಂ ಪ್ರಮಾಣವಚನ; ಸಂಚಾರ ಬದಲಾವಣೆ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
|

Updated on:May 19, 2023 | 5:36 PM

ಬೆಂಗಳೂರು: ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ (Oath-Ttaking Ceremony) ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ವಾಹನ ಸಂಚಾರ ಮಾರ್ಗದಲ್ಲಿ‌ ಬದಲಾವಣೆ ಮಾಡಲಾಗಿದೆ.

ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಅವುಗಳ ಹಾಗೂ ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ.

  1. ಸ್ಟೀನ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಭಂದಿಸಿದ್ದು, ರಸ್ತೆ ಬಳಕೆದಾರರು ಕ್ಲೀನ್ಸ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲೆ ರಸ್ತೆ ಅಥವಾ ಕ್ಲೀನ್ಸ್ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.
  2. ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳನ್ನು ಪಟ್ಟಾ ಜಂಕ್ಷನ್‌ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗು ಇತರೆ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ಎಡ ತಿರುವು ಪಡೆದು ಕೆ.ಆರ್.ಸರ್ಕಲ್ ಮುಖೇನ ಸಂಚರಿಸಬಹುದು.
  3. ಸಿಟಿಓ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರವನ್ನು ನಿರ್ಭಂದಿಸಿದ್ದು, ರಸ್ತೆ ಬಳಕೆದಾರರು
  4. ಕಬ್ಬನ್ ರಸ್ತೆಯ ಮುಖೇನ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಅಥವಾ ಮಣಿಪಾಲ್ ಸೆಂಟರ್‌ ಕಡೆಗೆ ಸಂಚರಿಸಬಹುದು.
  5. ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
  6. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸೆಂಟ್ ಜೋಸೆಫ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
  7. ಇತರೆ ವಾಹನಗಳನ್ನು ಬಿಬಿಎಂಪಿ ಮುಖ್ಯ ಕಛೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗು ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಬಹುದು.
  8. ಆರ್.ಆರ್.ಎಂ.ಆರ್ ರಸ್ತೆ ಹಾಗು ಕಸ್ತೂರ್ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.
  9. ಕಾರ್ಯಕ್ರಮಕ್ಕೆ ಆಗಮಿಸುವ ಆಹ್ವಾನಿತರು ತಮ್ಮ ತಮ್ಮ ವಾಹನಗಳಿಂದ ಇಳಿದು ಕೆ.ಬಿ. ರಸ್ತೆ,ಆರ್.ಆರ್.ಎಂ.ಆರ್ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್‌ಗಳ ಮೂಲಕ ನಡೆದು ಒಳಗೆ ಪ್ರವೇಶಿಸಬೇಕಾಗಿರುತ್ತೆ. ಹಾಗು ತಮ್ಮ ವಾಹನಗಳನ್ನು ಮೇಲ್ಕಂಡ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಲು ಮನವಿ ಮಾಡಲಾಗಿದೆ.
  10. ಸಾರ್ವಜನಿಕರು ಕೆಜಿ ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ, ರಿಚ್ ಮಂಡ್ ಸರ್ಕಲ್ ಬಳಿ/ಕ್ವೀನ್ಸ್ ಸರ್ಕಲ್ ಬಳಿ ವಾಹನದಿಂದ ಇಳಿದು ತಮ್ಮ ವಾಹನಗಳನ್ನು ಅರಮನೆ ಮೈದಾನದಲ್ಲಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
  11. ಸಮಾರಂಭ ಸ್ಥಳದಲ್ಲಿ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತುಗಳನ್ನು ಬೆಂಕಿಪಟ್ಟಣ, ಲೈಟರ್, ಇತ್ಯಾದಿಗಳನ್ನು ಕೊಂಡೊಯ್ಯಬಾರದು.
  12. ರಸ್ತೆ ಬಳಕೆದಾರರು ಸಂಚಾರ ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸಬೇಕು
  13. ನಗರದ ಯಾವುದಾದರೂ ರಸ್ತೆಯಲ್ಲಿ ವಾಹನ ಕೆಟ್ಟು ನಿಂತಲ್ಲಿ ಅಥವಾ ಅಪಘಾತ ಸಂಭವಿಸಿದಲ್ಲಿ ಗಮನಿಸಿದ ಕೂಡಲೇ ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080-22943030 ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿಕೆ
  14. ಮುಖ್ಯ ಕೆಲಸಗಳಿಗೆ ಹಾಗು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಇಚ್ಛಿಸುವವರು ಸಾಕಷ್ಟು ಮುಂಚೆಯೇ ಪ್ರಯಾಣವನ್ನು ಪ್ರಾರಂಭಿಸಲು ಮನವಿ
  15. ಸಿಇಟಿ ಪರೀಕ್ಷೆಗೆ ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚನೆ ನೀಡಲಾಗಿದೆ.
  16. ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಿದ್ದಲ್ಲಿ, ರಸ್ತೆಯಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ
  17. ಮಧ್ಯಾಹ್ನದ ಸಿಇಟಿ ಪರೀಕ್ಷೆಗೆ ಸೆಂಟ್ ಜೋಸೆಫ್ ಪಿಯು ಇಂಡಿಯನ್ ಕಾಲೇಜು, ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಸೆಂಟ್ ಮಾರ್ಕ್ಸ್ ರಸ್ತೆ, ವಿಠಲ್ ಮಲ್ಯ ರಸ್ತೆ ಮೂಲಕ ಬಂದು ಯೂಬಿ ಸಿಟಿಯ ಮುಂಭಾಗದ ಗೇಟ್‌ನಿಂದ ಕಾಲೇಜಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
  18. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಸೆಂಟ್ ಜೋಸೆಫ್ ಪಿಯು ಕಾಲೇಜಿನ ಅಧಿಕಾರಿಗಳು ಸೆಂಟ್ ಜೋಸೆಫ್ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಗತ್ಯ ಉಟೋಪಚಾರವನ್ನು ಏರ್ಪಡಿಸಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Fri, 19 May 23