ಸೋಲಿನ ಹೊಣೆ ಹೊತ್ತುಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕ ವಿಧಾನಸಭೆ ಚುನಾವಣೆ 2023 ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಇತ್ತ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಇದರ ಹೊಣೆಯನ್ನು ಸಿಎಂ ಬೊಮ್ಮಾಯಿ ಹೊತ್ತುಕೊಂಡಿದ್ದಾರೆ.

ಸೋಲಿನ ಹೊಣೆ ಹೊತ್ತುಕೊಂಡ ಸಿಎಂ ಬಸವರಾಜ ಬೊಮ್ಮಾಯಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆ ಹೊತ್ತ ಸಿಎಂ ಬಸವರಾಜ ಬೊಮ್ಮಾಯಿ
Follow us
Rakesh Nayak Manchi
|

Updated on:May 13, 2023 | 9:08 PM

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆ 2023 ಫಲಿತಾಂಶ (Karnataka Assembly Election Results 2023) ಹೊರಬಿದ್ದಿದ್ದು, ಕಾಂಗ್ರೆಸ್ (Congress)​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಇತ್ತ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿ (BJP) ಹೀನಾಯ ಸೋಲು ಅನುಭವಿಸಿದೆ. ಇದರ ಹೊಣೆಯನ್ನು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೊತ್ತುಕೊಂಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಲಿನ ಹೊಣೆ ನಾನೇ ವಹಿಸುತ್ತೇನೆ ಎಂದಿದ್ದಾರೆ.

ಬಿಜೆಪಿ ಸೋಲಿಗೆ ಹಲವಾರು ಕಾರಣಗಳಿವೆ. ಸೋಲಿನ‌ ಪರಾಮರ್ಶೆ ಮಾಡಿಕೊಳ್ಳುತ್ತೇವೆ. ಹಿರಿಯ ನಾಯಕರ ಜೊತೆ ಕುಳಿತು ಚರ್ಚೆ ನಡೆಸುತ್ತೇವೆ. ಸೋಲಿನ ಕಾರಣಗಳ ಕುರಿತು ಅವಲೋಕನ‌ ಮಾಡಿಕೊಳ್ಳುತ್ತೇವೆ. ಮುಂದಿನ‌ ಲೊಕಸಭಾ ಚುನಾವಣೆ ವೇಳೆಗೆ ಪುಟಿದೇಳುತ್ತೇವೆ ಎಂದರು.

ಇದನ್ನೂ ಓದಿ: Karnataka Election Results: ಬಿಜೆಪಿಗೆ ಮತ್ತೆ ಮುಚ್ಚಿತು ದಕ್ಷಿಣದ ಹೆಬ್ಬಾಗಿಲು; ಕಮಲ ಪಡೆಯ ಏರಿಳಿತದ ಹಾದಿ ಹೀಗಿದೆ ನೋಡಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ ಹಿನ್ನೆಲೆ ಮುಖ್ಯಮಂತ್ರಿ ಸ್ಥಾನಕ್ಕೆ ಬಸರಾಜ ಬೊಮ್ಮಾಯಿ ರಾಜೀನಾಮೆಗೆ ಮುಂದಾಗಿದ್ದಾರೆ. ಇಂದು ಸಂಜೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಸತತ ನಾಲ್ಕನೇ ಬಾರಿಗೆ ಬಸವರಾಜ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ 63,384 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಯಾಸೀರ್ ಖಾನ್ ಪಠಾಣ್ 44,394 ಮತಗಳನ್ನು ಪಡೆದಿದ್ದಾರೆ. ಆದರೆ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಅವರ ಆಡಳಿತದ ವಿರುದ್ಧ ಸ್ವಪಕ್ಷದ ಕಾರ್ಯಕರ್ತರಲ್ಲಿ ಅಸಮಾಧನಗಳು ಎದ್ದಿದ್ದವು. ಕಠಿಣ ಕ್ರಮದ ಭರವಸೆ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿತ್ತು. ಕಾಂಗ್ರೆಸ್​ನ ಆರೋಪಗಳಿಗೆ ತಿರುಗೇಟು ನೀಡುವಲ್ಲಿ ವಿಫಲರಾಗಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:49 pm, Sat, 13 May 23

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ