Karnataka CM Oath Taking: ಕಂಠೀರವ ಕ್ರೀಡಾಂಗಣದ ಬಳಿ ನೂಕುನುಗ್ಗಲು: ಲಘು ಲಾಠಿ ಚಾರ್ಚ್​​

ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುತ್ತಿರುವ ಹಿನ್ನೆಲೆ ಕ್ರೀಡಾಂಗಣದ ಸಾರ್ವಜನಿಕ ಪ್ರವೇಶ ದ್ವಾರದಲ್ಲಿ ಕಾರ್ಯಕರ್ತರ ನಡುವೆ ನೂಕುನುಗ್ಗುಲಾಗಿದ್ದು, ಪೊಲೀಸರು ಲಘು ಲಾಠಿ ಚಾರ್ಜ್‌ ಮಾಡಿದ್ದಾರೆ.

Karnataka CM Oath Taking: ಕಂಠೀರವ ಕ್ರೀಡಾಂಗಣದ ಬಳಿ ನೂಕುನುಗ್ಗಲು: ಲಘು ಲಾಠಿ ಚಾರ್ಚ್​​
ಕಂಠೀರವ ಕ್ರೀಡಾಂಗಣ ಬಳಿ ನೂಕುನುಗ್ಗಲು
Follow us
ವಿವೇಕ ಬಿರಾದಾರ
|

Updated on:May 20, 2023 | 9:25 AM

ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ ಇಂದು (ಮೇ.20) ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramiah) ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​ (DK Shivakumar) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಸಮಾರಂಭಕ್ಕೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುತ್ತಿರುವ ಹಿನ್ನೆಲೆ ಕ್ರೀಡಾಂಗಣದ ಸಾರ್ವಜನಿಕ ಪ್ರವೇಶ ದ್ವಾರದಲ್ಲಿ ಕಾರ್ಯಕರ್ತರ ನಡುವೆ ನೂಕುನುಗ್ಗಲಾಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಚಾರ್ಜ್‌ ಮಾಡಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಇನ್ನು ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಘಟನೆಯಲ್ಲಿ ಟ್ರಾಫಿಕ್ ಇನ್ಸ್​​ಪೆಕ್ಟರ್ ಗಣೇಶ್ ರಾವ್ ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ನೂಕುನುಗ್ಗಲಾದ ಹಿನ್ನೆಲೆ ಸ್ಥಳಕ್ಕೆ ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಆಗಮಿಸಿ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮತ್ತು ಸಾರ್ವಜನಿಕ ಪ್ರವೇಶ ದ್ವಾರ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

Z ಕ್ಯಾಟಗರಿ ಭದ್ರತೆ

ಕಾರ್ಯಕ್ರಮದಲ್ಲಿ ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ಬರುವ ವಿವಿಐಪಿಗಳಿಗೆ Z+, CRPF ASL ಪ್ರೊಟೆಕ್ಟ್​ರಿಂದ ಭದ್ರತೆ ಒದಗಿಸಲಾಗಿದೆ. ವಿವಿಧ 8 ರಾಜ್ಯದ ಮುಖ್ಯಮಂತ್ರಿಗಳಿಗೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ. ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಕೂಡ ಒದಗಿಸಲಾಗಿದೆ.

ಹೆಚ್ಚುವರಿ ಪೋಲಿಸರ ನಿಯೋಜನೆ

ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಲಾಗಿಸಲಾಗಿದ್ದು, ಎಂಟು ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್​ಗಳು, 1,500ಕ್ಕೂ ಹೆಚ್ಚು ಪೊಲೀಸರು ಮತ್ತು ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಸಂಚಾರ ಮಾರ್ಗ ಬದಲಾವಣೆ

ಲ್ಯಾವೆಲ್ಲೆ ರಸ್ತೆ ಅಥವಾ ಕ್ವೀನ್ಸ್​ ರಸ್ತೆಯ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್​ ವೃತ್ತದ ಕಡೆಗೆ ತೆರಳುವ ವಾಹನಗಳು ತಿಮ್ಮಯ್ಯ ವೃತ್ತದಲ್ಲಿ ತಿರುವು ಪಡೆದು ಕೆ.ಆರ್.ವೃತ್ತ ಮೂಲಕ ಸಂಚರಿಸಬೇಕಿದೆ. ಸಿಟಿಒ ಸರ್ಕಲ್​ನಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆಯ ಮೂಲಕ ಅನಿಲ್ ಕುಂಬ್ಳೆ ಸರ್ಕಲ್​​ ಕಡೆಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಲಸೂರು ಗೇಟ್​​ನಿಂದ ಸಿದ್ದಲಿಂಗಯ್ಯ ವೃತ್ತದ ಕಡೆ ತೆರಳುವ ವಾಹನಗಳು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ವಾಹನ ನಿಲುಗಡೆ ನಿರ್ಬಂಧ ಹೇರಲಾಗಿದ್ದು, ಸೇಂಟ್ ಜೋಸೆಫ್ ಕಾಲೇಜು ಮೈದಾನದಲ್ಲಿ ಗಣ್ಯರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬಾದಾಮಿ ಹೌಸ್, ಯುನೈಟೆಡ್ ಮಿಷನ್ ಕಾಲೇಜು ಮೈದಾನ, ಅರಮನೆ ಮೈದಾನದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಚನೆ ನೀಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:03 am, Sat, 20 May 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್