ಬೆಂಗಳೂರು (ಮೇ 2): ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Elections 2023) ರಂಗೇರಿದೆ. ಇದರ ಮಧ್ಯೆ ಕಾಂಗ್ರೆಸ್ಗೆ (Congress) ಬಂಡಾಯ ಅಭ್ಯರ್ಥಿಗಳು ದೊಡ್ಡ ಟೆನ್ಷನ್ ತಂದಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿದ್ದರೂ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡದೇ ಬಂಡಾಯವೆದ್ದಿರುವ 24 ನಾಯಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಬಂಡಾಯವೆದ್ದ 24 ಮುಖಂಡರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ 6 ವರ್ಷ ಅಮಾನತು ಮಾಡಿ ಕರ್ನಾಟಕ ಕಾಂಗ್ರೆಸ್ ಪ್ರದೇಶ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಶತಃಪ್ರಯತ್ನ ಮಾಡುತ್ತಿದೆ. ಆದರೆ, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಶಾಸಕರು, ಸಚಿವರು, ಕಾಂಗ್ರೆಸ್ ಘಟಕದಲ್ಲಿ ಪ್ರಮುಖ ಸ್ಥಾನಮಾನ ಹೊಂದಿದ್ದವರು, ಕಾಂಗ್ರೆಸ್ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಟಿಕೆಟ್ ಸಿಗದೇ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಆದರೆ, ಬಂಡಾಯ ಸ್ಪರ್ಧೆ ಮಾಡಿ ಕಾಂಗ್ರೆಸ್ ಬಾವುಟ ಬಳಕೆ ಮಾಡುತ್ತಿದ್ದರೂ ಪಕ್ಷದ ಶಿಸ್ತುಪಾಲನಾ ಸಮಿತಿಯಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ, ಇದೀಗ ಅಂತಿಮವಾಗಿ ಬಂಡಾಯವೆದ್ದವರನ್ನು ಒಂದೇ ಸಲಕ್ಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಿದೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಿ ಬಂಡಾಯ ಅಭ್ಯರ್ಥಿಗಳಿಗೆ ಶಾಕ್ ನೀಡಲಾಗಿದೆ. ಈಗ ಪಕ್ಷದಿಂದ ಉಚ್ಛಾಟನೆಗೊಂಡ ಸದಸ್ಯರು ಮುಂದಿನ 6 ವರ್ಷಗಳ ಕಾಲ ಮತ್ತೆ ಪಕ್ಷವನ್ನು ಸೇರುವಂತಿಲ್ಲ. ಇನ್ನು ಈಗ ಪಕ್ಷದಿಂದ ಉಚ್ಛಾಟನೆಗೊಂಡ ಎಲ್ಲ ಸದಸ್ಯರು ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಸ್ಪರ್ಧೆ ಮಾಡಿದ್ದ ಬಂಡಾಯ ಅಭ್ಯರ್ಥಿಗಳು ಆಗಿದ್ದಾರೆ. ಈಗ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮುಳ್ಳಾಗಿದ್ದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವವರನ್ನ ಪಕ್ಷದಿಂದ ಹೊರಹಾಕುವ ನಿರ್ಧಾರ ಕೈಗೊಂಡಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ