ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ: ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆ

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ: ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆ
Follow us
ರಮೇಶ್ ಬಿ. ಜವಳಗೇರಾ
|

Updated on: May 02, 2023 | 11:48 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನಲೆ ಇದೀಗ ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು (Karnataka Congress manifesto 2023) ಬಿಡುಗಡೆ ಮಾಡಿದ್ದು, ಈ ಬಾರಿಯ ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಭರವಸೆ ನೀಡಿದೆ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ವಿಭಜನೆಗೆ ಕಾರಣವಾಗುವ ಯಾವುದೇ ಶಕ್ತಿಗಳನ್ನು ಸಹಿಸುವುದಿಲ್ಲ. ಬಜರಂಗದಳ(Bajrang Dal), ಪಿಎಫ್​ಐ ಸೇರಿದಂತೆ ಯಾವುದೇ ಸಂಘಟನೆಗಳಾದರೂ ನಿಷೇಧ ಮಾಡುವುದರ ಜೊತೆಗೆ ಬಲವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಇದನ್ನೂ ಓದಿ: Karnataka Congress Manifesto: ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ, ಕರ್ನಾಟಕಕ್ಕೆ ಏನೆಲ್ಲಾ ಭರವಸೆ?

ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯಲ್ಲಿ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಂಘಟನೆ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್​ ಬದ್ಧವಾಗಿದೆ. ಸಂವಿಧಾನವೇ ಪ್ರವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಗಳಾಲಿ, ಬಜರಂಗದಳ ಮತ್ತು ಪಿಎಫ್​ಐ ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಂಘಟನೆಗಳು ಸಂವಿಧಾನದ ವಿಧಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳನ ನಿಷೇಧ ಸೇರಿದಂತೆ ಬಲವಾದ ಕಾನೂಕು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಈಗಾಗಲೇ ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಂಗ್ರೆಸ್​ ಪ್ರಣಾಳಿಕೆಗೆ ಆಕ್ರೋಶ

ಇನ್ನು ಕಾಂಗ್ರೆಸ್​ ಬಜರಂಗದಳ ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಆಕ್ರೋಶ ಕಾರಣವಾಗಿದೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಕಾಂಗ್ರೆಸ್ ನಿಜವಾದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನೀಡಿಲ್ಲ. ಸ್ಥಳೀಯ ಹೋರಾಟಗಾರರನ್ನು ಪಠ್ಯದಲ್ಲಿ ಸೇರಿಸದೆ ಟಿಪ್ಪು, ಔರಂಗಜೇಬ್, ಬಾಬರ್, ಶಹಜಹಾನ್ ಕುರಿತು ಪಠ್ಯದಲ್ಲಿ ಸೇರಿಸಿ ಹೀರೋಗಳಂತೆ ಬಿಂಬಿಸಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಮುಸ್ಲಿಂ ಸಮುದಾಯ ಒಲೈಕೆ ಮಾಡಲು ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳುತ್ತಿದೆ. ಇವರಿಗೆ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದ ಸಂಘಟನೆಗಳು ಕಾಣಿಸಲೇ ಇಲ್ಲ. ಆದರೆ ಇಂತಹ ಸಂಘಟನೆಗಳನ್ನು ಬಿಜೆಪಿ ನಿಷೇಧಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳುತ್ತಿದೆ. ಆದರೆ ಬಿಜೆಪಿ ಅಂತಹ ಉಗ್ರ ಸಂಘಟನೆಗಳನ್ನು ನಿಷೇಧ ಮಾಡಿದೆ. ಮುಸ್ಲಿಂ ಸಮುದಾಯವನ್ನು ಒಲೈಸಲು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ