AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿಗೆ ನಟ ಸುದೀಪ್​ ಬೆಂಬಲ: ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಕಾಂಗ್ರೆಸ್​ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಮುಖ ತೋರಿಸಿದರೂ ವೋಟು ಗಿಟ್ಟುವುದಿಲ್ಲ. ಸಿಎಂ ಬೊಮ್ಮಾಯಿ ಮುಖ ತೋರಿಸಿದರೂ ಮತ ಬರುವುದಿಲ್ಲ. ಹಾಗಾಗಿ ಸಿಎಂ ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ಸಿಎಂ ಬೊಮ್ಮಾಯಿಗೆ ನಟ ಸುದೀಪ್​ ಬೆಂಬಲ: ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಕಾಂಗ್ರೆಸ್​ ವ್ಯಂಗ್ಯ
ಸಿಎಂ ಬೊಮ್ಮಾಯಿ, ನಟ ಸುದೀಪ್​, ಕಾಂಗ್ರೆಸ್​ ಟ್ವೀಟ್​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 05, 2023 | 10:13 PM

Share

ಮುಖ್ಯಾಂಶಗಳು

  • ನಟ ಕಿಚ್ಚ ಸುದೀಪ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ, ನನ್ನ ಬೆಂಬಲ ಸಿಎಂ ಬೊಮ್ಮಾಯಿಯವರಿಗೆ ಎಂದಿದ್ದಾರೆ.
  • ಸಿಎಂ ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ರಾಜಕೀಯ ನಾಯಕರಿಲ್ಲದ ಕಾರಣ ಸಿನಿಮಾ ನಟರ ಮೊರೆ ಹೋಗಿದೆ!. ಕಾಂಗ್ರೆಸ್​ ಟ್ವೀಟ್​ ಮೂಲಕ ಕಾಂಗ್ರೆಸ್​, ಬಿಜೆಪಿ ವಿರುದ್ಧ ವ್ಯಂಗ್ಯ
  • ಕಲಾವಿದರು ತಮಗೆ ಬೇಕಾದವರನ್ನು ಚುನಾವಣೆಯಲ್ಲಿ ಬೆಂಬಲಿಸ್ತಾರೆ. ಇದರಿಂದ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ

ಬೆಂಗಳೂರು: ಒಂದು ತಿಂಗಳು ಕಳೆದರೆ ಕರ್ನಾಟಕ ವಿಧಾನಸಭೆಗೆ ಚುನಾವಣೆ (Karnataka Assembly Election 2023) ನಡೆಯುತ್ತೆ. ಪ್ರಮುಖ ಮೂರು ಪಕ್ಷಗಳು ಅಖಾಡಕ್ಕೆ ಸಿದ್ದವಾಗಿವೆ. ಹಾಗೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ಬ್ಯುಸಿಯಾಗಿವೆ. ಈ ಮಧ್ಯೆ ರಾಜ್ಯ ಬಿಜೆಪಿಯಲ್ಲಿ (BJP) ಮಹತ್ತರವಾದ ಬೆಳವಣಿಗೆ ನಡೆದಿದೆ. ಚುನಾವಣೆ ಹೊಸ್ತಿಲಿನಲ್ಲಿ ನಟ ಕಿಚ್ಚ ಸುದೀಪ್ (Kichcha Sudeep)​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರೊಂದಿಗೆ (CM Basavaraj Bommai) ಜಂಟಿ ಸುದ್ದಿಗೋಷ್ಠಿ ನಡೆಸಿ, ನನ್ನ ಬೆಂಬಲ ಸಿಎಂ ಬೊಮ್ಮಾಯಿಯವರಿಗೆ ಎಂದಿದ್ದಾರೆ. ಇದು ಸದ್ಯ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಹೀಗಿರುವಾಗ ಸಿಎಂ ಬೊಮ್ಮಾಯಿ ಅವರಿಗೆ ನಟ ಸುದೀಪ್ ಬೆಂಬಲ ಘೋಷಿಸಿದ ವಿಚಾರವಾಗಿ ರಾಜ್ಯ ಕಾಂಗ್ರೆಸ್ (Congress) ಟ್ವೀಟ್​ ಮಾಡಿ ಬಿಜೆಪಿ ವಿರುದ್ಧ ​ವ್ಯಂಗ್ಯವಾಡಿದೆ.

“ಪ್ರಧಾನಿ ನರೇಂದ್ರ ಮೋದಿ ಮುಖ ತೋರಿಸಿದರೂ ವೋಟು ಗಿಟ್ಟುವುದಿಲ್ಲ. ಸಿಎಂ ಬೊಮ್ಮಾಯಿ ಮುಖ ತೋರಿಸಿದರೂ ಮತ ಬರುವುದಿಲ್ಲ. ಹಾಗಾಗಿ ಸಿಎಂ ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ರಾಜಕೀಯ ನಾಯಕರಿಲ್ಲದ ಕಾರಣ ಸಿನಿಮಾ ನಟರ ಮೊರೆ ಹೋಗಿದೆ!. ಬಿಎಸ್​ ಯಡಿಯೂರಪ್ಪ ಅವರ ಮುಖವನ್ನು ಮರೆಮಾಚಲು ಬಿಜೆಪಿ ಮುಂದಾಗಿದೆ. ಬಿಜೆಪಿಗೆ ಈಗ ವರ್ಚಸ್ಸು ನಾಯಕರಿಲ್ಲದಿರುವುದು ದುರಂತ” ಎಂದು ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್​ ಹರಿಹಾಯ್ದಿದೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚ ಸುದೀಪ್: ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್​ಗೆ ಡ್ಯಾಮೇಜ್!

ಕಲಾವಿದರು ತಮಗೆ ಬೇಕಾದವರನ್ನು ಚುನಾವಣೆಯಲ್ಲಿ ಬೆಂಬಲಿಸುವುದರಿಂದ ನಮಗೆ ಯಾವುದೇ ಅಭ್ಯಂತರವಿಲ್ಲ

ಇನ್ನು ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಾತನಾಡಿ ಕಲಾವಿದರು ತಮಗೆ ಬೇಕಾದವರನ್ನು ಚುನಾವಣೆಯಲ್ಲಿ ಬೆಂಬಲಿಸ್ತಾರೆ. ಇದರಿಂದ ನಮಗೆ ಯಾವುದೇ ಅಭ್ಯಂತರವಿಲ್ಲ. ಸರ್ಕಾರ ಸಿನಿಮಾ ನಟರ ಮೇಲೆ ಒತ್ತಡ ಹಾಕಿರಬಹುದು ಅಥವಾ ನಟರ ಬಳಿ ಮನವಿ ಮಾಡಿಕೊಂಡಿರಬಹುದು. ರಾಜಕಾರಣದ ಉದ್ದೇಶದಿಂದ ನಾನು ಸುದೀಪ್​ ಭೇಟಿಯಾಗಿಲ್ಲ. ನಾನು ಮತ್ತು ನಟ ಸುದೀಪ್ ಹಳೇ ಸ್ನೇಹಿತರು. ನನ್ನ ಮತ್ತು ಸುದೀಪ್ ನಡುವೆ ರಾಜಕೀಯ ಚರ್ಚೆ ನಡೆದಿಲ್ಲ ಎಂದಿದ್ದಾರೆ.  ಇನ್ನು ಸಿಎಂ ಬೊಮ್ಮಾಯಿಯವರಿಗೆ ನಟ ಸುದೀಪ್ ಬೆಂಬಲ ಸೂಚಿಸಿರುವುದು ಡಿಕೆ ಶಿವಕುಮಾರ್​​ ಅವರಿಗೆ ಸಂಕಷ್ಟಕ್ಕೆ ತಂದೊಡ್ಡಿದೆ ಎಂದು ಹೇಳಲಾಗುತ್ತಿದೆ.

ನಟ ಸುದೀಪ್​ರನ್ನು ಭೇಟಿಯಾದ ಡಿಕೆ ಶಿವಕುಮಾರ್​​

ಕಳೆದ ಕೆಲ ತಿಂಗಳ ಹಿಂದೆ ನಟ ಕಿಚ್ಚ ಸುದೀಪ್​​ ಅವರು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಕಿಚ್ಚನನ್ನು ಭೇಟಿಯಾಗಿ ಮಾತುಕತೆ ನಡೆಸಿ ರಾತ್ರಿ ಭೋಜನ ಸವಿದಿದ್ದರು. ಈ ವೇಳೆ ಮುಹಮ್ಮದ್ ನಲಪಾಡ್ ಕೂಡಾ ಉಪಸ್ಥಿತರಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Wed, 5 April 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು