ಸಿದ್ದರಾಮಯ್ಯಗೆ 2 ಕ್ಷೇತ್ರದ ಟಿಕೆಟ್​ ನೀಡದಂತೆ ಹೈಕಮಾಂಡ್​ಗೆ ರಾಜ್ಯ ಕಾಂಗ್ರೆಸ್​ ನಾಯಕರ ಪತ್ರ

 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಕ್ಷೇತ್ರದ ಟಿಕೆಟ್​ ಕೊಟ್ಟರೆ ತಪ್ಪು ಸಂದೇಶ ಹೋಗುತ್ತೆ. ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ವಂಚನೆ ಮಾಡಿದಂತೆ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್​ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯಗೆ 2 ಕ್ಷೇತ್ರದ ಟಿಕೆಟ್​ ನೀಡದಂತೆ ಹೈಕಮಾಂಡ್​ಗೆ ರಾಜ್ಯ ಕಾಂಗ್ರೆಸ್​ ನಾಯಕರ ಪತ್ರ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Apr 04, 2023 | 12:13 PM

ಬೆಂಗಳೂರು: ವಿಧಾನಸಭೆ ಚುನಾವಣೆಗೆ (Karnataka Assembly Election) ಟಿಕೆಟ್​ ಹಂಚಿಕೆ ವಿಚಾರವಾಗಿ ಮೂರು ಪ್ರಕ್ಷದಲ್ಲಿ ಸಾಕಷ್ಟು ಹಗ್ಗ-ಜಗ್ಗಾಟ ನಡೆಯುತ್ತಿದೆ. ಒಂದು ಕ್ಷೇತ್ರಕ್ಕೆ ಇಬ್ಬರು ಟಿಕೆಟ್​ ಆಕಾಂಕ್ಷಿಗಳಿದ್ದು, ಪೈಪೋಟಿ ಜೋರಾಗಿ ನಡೆಯುತ್ತಿದ್ದರಿಂದ ನಾಯಕರಿಗೆ ತೆಲೆನೋವಾಗಿದೆ. ಇನ್ನು ಕಾಂಗ್ರೆಸ್​ (Congress) ಈಗಾಗಲೆ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಉಳಿದ 100 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಮೊದಲ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramiah) ಅವರು ವರುಣಾ ಕ್ಷೇತ್ರದ (Varuna) ಅಭ್ಯರ್ಥಿಯೆಂದು ಘೋಷಿಸಿದೆ. ಈಗ 2ನೇ ಪಟ್ಟಿ ಹೊರ ಬೀಳಲಿದ್ದು, ಕೊಲಾರ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಅವರಿಗೆ ಟಿಕೆಟ್​ ಸಿಗುವ ಸಾಧ್ಯತೆ ಇದೆ. ಈ ವಿಚಾರಾಗಿ ರಾಜ್ಯ ಕಾಂಗ್ರೆಸ್​​ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ಅವರಿಗೆ ಪತ್ರ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಕ್ಷೇತ್ರದ ಟಿಕೆಟ್​ ಕೊಟ್ಟರೆ ತಪ್ಪು ಸಂದೇಶ ಹೋಗುತ್ತೆ. ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ವಂಚನೆ ಮಾಡಿದಂತೆ ಆಗುತ್ತದೆ. ಡಾ. ಜಿ ಪರಮೇಶ್ವರ್ ಸೇರಿದಂತೆ ಉಳಿದ ನಾಯಕರು ಕೂಡ 2 ಕ್ಷೇತ್ರ ಕೇಳುತ್ತಾರೆ. ವಿರೋಧ ಪಕ್ಷದ ನಾಯಕ ಸಿದರಾಮಯ್ಯ ಅವರಿಗೆ ಎರಡು ಕ್ಷೇತ್ರಗಳನ್ನು ನೀಡುವ ಬದಲು, ಒಂದು ಕ್ಷೇತ್ರವನ್ನು ಪಕ್ಷ ಸಂಘಟನೆ ಮಾಡಿದವರಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲೇ ಡಿಕೆ ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!

ಇನ್ನೂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದ ಟಿಕೆಟ್​ ಘೋಷಣೆಯಾಗುವುದಕ್ಕಿಂತ ಮುಂಚೆ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಈ ಮೂಲಕ ಕೋಲಾರದತ್ತ ರಾಜ್ಯದ ಚಿತ್ತ ನೆಟ್ಟಿತ್ತು. ಈ ಸಂಬಂಧ ಮಗ, ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಆಕ್ಟಿವ್​ ಆಗಿ ತಂದೆಯ ಪರ ಪ್ರಚಾರ, ಸಂಘಟನೆ ಪ್ರಾರಂಭಸಿದ್ದರು. ದಿನಕ್ಕೊಂದು ಬೆಳವಣಿಗೆಯಂತೆ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಪರ-ವಿರೋಧದ ಹೇಳಿಕೆಗಳು ಶುರುವಾದ್ದವು.

ಈ ನಡುವೆ ಕೆಲ ದಿನಗಳ ಹಿಂದೆ ದೆಹಲಿ ಭೇಟಿ ವೇಳೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಕೋಲಾರದಿಂದ ಸ್ಪರ್ಧೆ ಬೇಡ ಮರಳಿ ವರುಣಾಗೆ ಹೋಗಿ ಎನ್ನುವ ಮೂಲಕ ಚಿನ್ನದ ನಾಡಲ್ಲಿ ಪರಾಭವದ ಗಾಳಿ ಬೀಸುತ್ತಿದೆ ಎಂದು ಸಂದೇಶ ರವಾನಿಸಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿತ್ತು. ನಂತರ ಪುತ್ರ ಯತೀಂದ್ರ ಸಿದ್ದರಾಮಯ್ಯ, ತಂದೆಗೆ ಕ್ಷೇತ್ರ ಬಿಟ್ಟುಕೊಡಲು ಸಿದ್ದರಾಗಿ, ಬಿಟ್ಟುಕೊಟ್ಟರು. ಈಗ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುತ್ತಿದ್ದರೂ, ಕೋಲಾರದಿಂದಲೂ ಸ್ಪರ್ಧಿಸುವುದಾಗಿ ಆಸೆ ಹೊಂದಿದ್ದಾರೆ.

ಇದರ ಹಿಂದೆ ರಾಜಕೀಯ ಕಾರಣವೂ ಇದ್ದು, ಒಂದು ವೇಳೆ ಸಿದ್ದರಾಮಯ್ಯ ಎರಡೂ ಕ್ಷೇತ್ರದಿಂದ ಜಯಗಳಿಸಿದರೆ, ಒಂದು ಕ್ಷೇತ್ರಕ್ಕೆ ರಾಜಿನಾಮೆ ನೀಡಿ, ಮುಂದೆ ನಡೆಯುವ ಉಪಚುನಾವಣೆಯಲ್ಲಿ ಪುತ್ರನನ್ನು ಆ ಕ್ಷೇತ್ರದಲ್ಲಿ ನಿಲ್ಲಿಸಿ ಗೆಲ್ಲಿಸುವ ವಿಚಾರವಿದೆ. ಆದರೆ ಈಗ ಸಿದ್ದರಾಮಯ್ಯ ಅವರಿಗೆ ಎರಡು ಕ್ಷೇತ್ರದಿಂದ ಟಿಕೆಟ್​ ನೀಡಬೇಡಿ ಎಂಬ ಕೂಗು ರಾಜ್ಯ ಕಾಂಗ್ರೆಸ್​ನಲ್ಲೇ ಕೇಳಿಬುರತ್ತಿದೆ.

ಕಳೆದ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ

2018ರ ವಿಧಾನಸಭೆ ಚುನಾವಣೆಯಲ್ಲೂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬದಾಮಿಯಿಂದ ಸ್ಪರ್ಧೆ ಮಾಡಿದ್ದರು. ಆಗ ಚಾಮುಂಡೇಶ್ವರಿಯಲ್ಲಿ ಸೋತಿದ್ದು, ಬಾದಾಮಿಯಲ್ಲಿ ಗೆದ್ದಿದ್ದರು. ಈಗ ಬಾದಾಮಿ ದೂರವಾಗುತ್ತೆ ಎನ್ನುವ ಕಾರಣಕ್ಕೆ, ಬಾದಾಮಿ ಕ್ಷೇತ್ರ ಕೈ ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Tue, 4 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ