6 ಖಾತೆಗಳೊಂದಿಗೆ ಡಿಕೆ ಶಿವಕುಮಾರ್ಗೆ ಡಿಸಿಎಂ ಸ್ಥಾನ ಎಂಬುದು ಸುಳ್ಳು ಸುದ್ದಿ; ಇದಕ್ಕೆ ಕಿವಿಗೊಡಬೇಡಿ ಎಂದ ಕಾಂಗ್ರೆಸ್
DK Shivakumar: ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮವನ್ನೂ ವ್ಯಕ್ತಪಡಿಸಿದ್ದರು. ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಆರು ಖಾತೆಗಳೊಂದಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಪ್ರಸ್ತಾಪದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ ಎಂದು ಕಾಂಗ್ರೆಸ್ (Congress) ಹೇಳಿದೆ ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಬಹುದು ಅವರ ಪ್ರಮಾಣ ವಚನ ಗುರುವಾರ ನಡೆಯುವ ಸಾಧ್ಯತೆ ಇದೆ ಎಂಬ ಸುದ್ದಿಗಳೂ ಕೇಳಿಬರುತ್ತಿವೆ. ಇದೆಲ್ಲದರ ನಡುವೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮವನ್ನೂ ವ್ಯಕ್ತಪಡಿಸಿದ್ದರು. ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಸಿಎಂ ಕುರಿತು ಇನ್ನೂ ಚರ್ಚೆಗಳು ನಡೆಯುತ್ತಿವೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಊಹಾಪೋಹಗಳಿಗೆ ಅಥವಾ ಫೇಕ್ ನ್ಯೂಸ್ ಗಳಿಗೆ ಆಸ್ಪದ ನೀಡಬೇಡಿ.ಇಂದು ಅಥವಾ ನಾಳೆ ನಿರ್ಧಾರ ಪ್ರಕಟಿಸಲಾಗುವುದು, 72 ಗಂಟೆಗಳಲ್ಲಿ ಸಂಪುಟ ಅಸ್ತಿತ್ವಕ್ಕೆ ಬರಲಿದೆ ಎಂದು ಸುರ್ಜೇವಾಲ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಸಿದ್ದರಾಮಯ್ಯ 2 ವರ್ಷ ಸಿಎಂ, ಡಿಕೆ ಶಿವಕುಮಾರ್ 3 ವರ್ಷ ಸಿಎಂ ಅಂತೆ-ಕಂತೆಗೆ ಸ್ಪಷ್ಟನೆ ನೀಡಿದ ಹೆಚ್.ಸಿ ಮಹಾದೇವಪ್ಪ
ಶಿವಕುಮಾರ್ ಅವರು ಬುಧವಾರ ದೆಹಲಿಯ 10 ಜನಪಥ್‌ನಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಆಗಮಿಸಿ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದರು. ಇದಕ್ಕೂ ಮುನ್ನ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದರು. ದಕ್ಷಿಣ ರಾಜ್ಯದಲ್ಲಿ ಸರ್ಕಾರ ರಚನೆ ಕುರಿತು ಚರ್ಚಿಸಲು ರಾಹುಲ್ ಗಾಂಧಿ ಅವರು ಮಂಗಳವಾರ ಖರ್ಗೆ ಅವರನ್ನು ಭೇಟಿ ಮಾಡಿದ್ದರು.
ಶನಿವಾರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾನುವಾರ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಖರ್ಗೆ ಅವರಿಗೆ ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಿದ್ದಾರೆ. ಕಾರ್ಯಕ್ರಮ ದೆಹಲಿಗೆ ಶಿಫ್ಟ್ ಆಗುತ್ತಿದ್ದಂತೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ದೆಹಲಿ ತಲುಪಿದ್ದಾರೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ