ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ಅಬ್ಬರ, ನರೇಗಾಗೆ ಕಾರ್ಮಿಕರ ಬರ, ಏನಿದು ಅಂತೀರಾ ಈ ಸ್ಟೋರಿ ನೋಡಿ

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಪೈಪೋಟಿಗೆ ಬಿದ್ದವರಂತೆ ರಾಜಕೀಯ ಪಕ್ಷಗಳ ನಾಯಕರು ಜನ ಸೇರಿಸಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಜನರಿಗೆ ವಿವಿಧ ರೀತಿಯ ಆಮೀಷಗಳನ್ನೊಡ್ಡಿ ಚುನಾವಣಾ ಪ್ರಚಾರಕ್ಕೆ ಕರೆತರುತ್ತಿದ್ದಾರೆ. ಹೀಗಾಗಿ ನರೇಗಾ ಕಾಮಗಾರಿಗಳಿಗೆ ಕಾರ್ಮಿಕರ ಕೊರತೆ ಎದುರಾಗಿದೆ. ಅಷ್ಟಕ್ಕೂ ನರೇಗಾ ಕಾರ್ಮಿಕರ ಬೇಡಿಕೆ ಏನು? ಕಾರ್ಮಿಕ ಮುಖಂಡರು ಹೇಳೋದೇನು? ಅಧಿಕಾರಿಗಳ ಸಮರ್ಥನೆ ಏನು? ಇಲ್ಲಿದೆ ನೋಡಿ

ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ಅಬ್ಬರ, ನರೇಗಾಗೆ ಕಾರ್ಮಿಕರ ಬರ, ಏನಿದು ಅಂತೀರಾ ಈ ಸ್ಟೋರಿ ನೋಡಿ
ನರೇಗಾ ಕಾರ್ಮಿಕರ ಕೊರತೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 02, 2023 | 7:49 AM

ಬೆಳಗಾವಿ: ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ(karnataka Assembly Election 2023) ನಡೆಯಲಿದ್ದು ರಾಜ್ಯಾದ್ಯಂತ ಪ್ರಚಾರದ ಭರಾಟೆ ಜೋರಾಗಿದೆ. ಉರಿಬಿಸಿಲನ್ನೂ ಲೆಕ್ಕಿಸದೇ ಜನರನ್ನ ಸೇರಿಸುವಲ್ಲಿ ರಾಜಕೀಯ ನಾಯಕರು ಬ್ಯುಸಿಯಾಗಿದ್ದಾರೆ. ಇಂತಹ ಉರಿಬಿಸಿಲಿನಲ್ಲಿ ಜನರನ್ನು ಸೇರಿಸಿ ಸಮಾವೇಶ, ರೋಡ್ ಶೋ ಮಾಡುವುದೇ ರಾಜಕೀಯ ನಾಯಕರಿಗೆ ಸವಾಲಾಗಿದೆ. ಈ ಮಧ್ಯೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ(NREGA)ಕಾಮಗಾರಿ ಕೈಗೊಳ್ಳಲು ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕಾರ್ಮಿಕರ ಕೊರತೆ ಎದುರಾಗಿದೆ. ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಿನಲ್ಲಿ ಸುಮಾರು 15,74,807 ಲಕ್ಷ ಕಾರ್ಮಿಕರು ಕೆಲಸಕ್ಕೆ ಹೆಸರು ನೊಂದಾಯಿಸಿಕೊಂಡಿದ್ದು, ಈ ಪೈಕಿ 1,12,227 ಲಕ್ಷ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ನಿತ್ಯ 316 ರೂಪಾಯಿ ಕೂಲಿ ನೀಡಲಾಗುತ್ತೆ. ಆದ್ರೆ, ಸದ್ಯ ಚುನಾವಣಾ ಪ್ರಚಾರ ಭರಾಟೆ ಜೋರಾಗಿರುವುದರಿಂದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ನಾಯಕರು ಜನರಿಗೆ ವಿವಿಧ ರೀತಿಯ ಆಮಿಷವೊಡ್ಡಿ ಪ್ರಚಾರಕ್ಕೆ ಕರೆದೊಯ್ಯುತ್ತಿರುವ ಆರೋಪ ಕೇಳಿ ಬಂದಿದೆ.

ಹೌದು ನರೇಗಾ ಯೋಜನೆಯಡಿ ಎಂಟು ತಾಸು ಕೆಲಸ ಮಾಡಿದ್ರೆ, ಸಿಗೋದು ಕೇವಲ 316 ರೂಪಾಯಿ. ಅದೇ ಚುನಾವಣಾ ಪ್ರಚಾರಕ್ಕೆ ಬಂದ್ರೆ, 300 ರಿಂದ 500 ರೂಪಾಯಿ ಜೊತೆಗೆ ಉಚಿತ ಊಟ ಹಾಗೂ ಕೆಲವೆಡೆಯಂತೂ ಮದ್ಯವೂ ಕೊಡುತ್ತೀವಿ ಎಂದು ಕಾರ್ಮಿಕರಿಗೆ ಆಮಿಷವೊಡ್ಡಿ ಕರೆದೊಯ್ಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ರಾಜಕೀಯ ನಾಯಕರ ನಡೆಗೆ ಕರ್ನಾಟಕ ರೈತ, ಕಾರ್ಮಿಕ, ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಜಯಶ್ರೀ ಗುರನ್ನವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಚುನಾವಣೆ ಇದೆ ಅಂತಾ ಆಮಿಷವೊಡ್ಡಿ ಕರೆದೊಯ್ಯುತ್ತಾರೆ. ಬಳಿಕವೂ ಅವರ ನೆರವಿಗೆ ಬರಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಅಲ್ಲದೇ ನರೇಗಾ ಕಾರ್ಮಿಕರ ವೇತನ ಹೆಚ್ಚಳ ಮಾಡುವಂತೆಯೂ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಚುನಾವಣೆ ಕಣದಲ್ಲಿ ಗೋಬಿ ವ್ಯಾಪಾರಿ ಭರ್ಜರಿ ಪ್ರಚಾರ: ಈ ಯುವಕನ ಉದ್ದೇಶವೇನು ಗೊತ್ತಾ?

ಇನ್ನು ನರೇಗಾ ಯೋಜನೆಯಡಿ ಕೆರೆ ನಾಲೆಗಳನ್ನು ಹೂಳೆತ್ತುವುದು, ಗ್ರಾಮದ ಶಾಲೆಗಳಲ್ಲಿ ಆಟದ ಮೈದಾನ ನಿರ್ಮಾಣ, ಬದು ನಿರ್ಮಾಣ ಹೀಗೆ ವಿವಿಧ ಕಾಮಗಾರಿ ನಡೆಸಲಾಗುತ್ತೆ. ಬೆಳಗಾವಿ ಜಿಲ್ಲೆಯ ಹಲವೆಡೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಆದ್ರೆ, ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಮಿಕರು ಆಗಮಿಸುತ್ತಿಲ್ಲವೆಂದು ಕಾರ್ಮಿಕ ಮುಖಂಡರು ಆರೋಪ ಮಾಡುತ್ತಿದ್ದಾರೆ. ಆದ್ರೆ, ಈ ಮಾತನ್ನು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಒ ಹರ್ಷಲ್ ಭೋಯಲ್ ಅಲ್ಲಗೆಳೆಯುತ್ತಾರೆ. ‘ಕಳೆದ ವರ್ಷಕ್ಕಿಂತಲೂ ಹೆಚ್ಚು ಕಾರ್ಮಿಕರ ಹೆಸರು ಈ ಬಾರಿ ನೋಂದಾಯಿಸಿಕೊಂಡಿದ್ದು, ನಮ್ಮ ಜಿಲ್ಲೆಯಲ್ಲಿ ಕಾರ್ಮಿಕರ ಕೊರತೆ ಇಲ್ಲ ಎನ್ನುತ್ತಿದ್ದಾರೆ.

ಮತ್ತೊಂದೆಡೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ವೇತನ ಹೆಚ್ಚಳಕ್ಕೆ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಕಾರ್ಮಿಕರು ಕನಿಷ್ಠ ಐದು ನೂರು ರೂಪಾಯಿ ವೇತನ ಹೆಚ್ಚಿಸಿದರೆ ಯಾರೂ ಎಲ್ಲಿಯೂ ಹೋಗಲ್ಲ. ಚುನಾವಣಾ ಪ್ರಚಾರ ಕೇವಲ ಮೂರು ದಿನದ ಕೆಲಸ. ಇದು ಜೀವನಪೂರ್ತಿ ಮಾಡುವ ಕೆಲಸ. ಪ್ರತಿಯೊಬ್ಬ ಕಾರ್ಮಿಕರಿಗೆ ಕನಿಷ್ಠ 200 ದಿನ ಉದ್ಯೋಗ ನೀಡಿ 500 ರೂಪಾಯಿ ವೇತನ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!

ಚುನಾವಣಾ ಆಯೋಗವೂ ಸಹ ಯಾವುದೇ ರೀತಿಯ ಅಕ್ರಮ ನಡೆಯದಂತೆ ಹದ್ದಿನ ಕಣ್ಣು ಇಟ್ಟಿದೆ. ಹಣ ಹಂಚಿಕೆ ಸೇರಿ ಯಾವುದೇ ಆಮಿಷವೊಡ್ಡುತ್ತಿರೋದು ಕಂಡು ಬಂದ್ರೆ, ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತೀಚೆಗೆ ಕುಡಚಿಯಲ್ಲಿ ನಡೆದ ಪ್ರಧಾನಿ ಮೋದಿ ಸಮಾವೇಶಕ್ಕೆ ಬಂದ ಜನರಿಗೆ ಹಣ ಹಂಚುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕುಡಚಿ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಹಾಗೂ ಆತನ ಬೆಂಬಲಿಗನ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅದೇನೇ ಇರಲಿ ರಾಜಕೀಯ ನಾಯಕರು ಚುನಾವಣಾ ಪ್ರಚಾರದ ವೇಳೆ ಕಾರ್ಮಿಕರ ಮೇಲೆ ತೋರಿಸುವ ಪ್ರೀತಿ ಚುನಾವಣೆ ಗೆದ್ದ ಬಳಿಕ ತೋರಿಸುತ್ತಾರಾ? ಬೆಲೆ ಏರಿಕೆಯಿಂದ ಜನ ತತ್ತರಿಸುವಂತಹ ಸಂದರ್ಭದಲ್ಲಿ ಮುಂದೆ ಚುನಾವಣೆಯಲ್ಲಿ ಗೆದ್ದು ಬರುವ ರಾಜಕೀಯ ನಾಯಕರು ನರೇಗಾ ಕಾರ್ಮಿಕರ ಬಗ್ಗೆ ಗಮನಹರಿಸಿ ಅವರ ವೇತನ ಹೆಚ್ಚಿಸಲಿ ಎಂಬುದು ಸಾರ್ವಜನಿಕರ ಆಶಯ.

ವರದಿ: ಮಹಾಂತೇಶ ಕುರಬೇಟ್ ಟಿವಿ9 ಬೆಳಗಾವಿ

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು