AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗದ ಕಣ್ತಪ್ಪಿಸಲು ಹೀಗೂ ಮಾಡ್ತಾರೆ; ಎಟಿಎಂಗೆ ಹಣ ಕೊಂಡೊಯ್ಯುವ ವಾಹನದಲ್ಲೇ ಮತದಾರರಿಗೆ ಹಂಚಲು ನಗದು ಸಾಗಣೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡುವ, ಉಡುಗೊರೆ, ನಗದು ಹಂಚುವ ಕೃತ್ಯಗಳು ಹೆಚ್ಚಾಗಿವೆ.

ಚುನಾವಣಾ ಆಯೋಗದ ಕಣ್ತಪ್ಪಿಸಲು ಹೀಗೂ ಮಾಡ್ತಾರೆ; ಎಟಿಎಂಗೆ ಹಣ ಕೊಂಡೊಯ್ಯುವ ವಾಹನದಲ್ಲೇ ಮತದಾರರಿಗೆ ಹಂಚಲು ನಗದು ಸಾಗಣೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 07, 2023 | 3:30 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡುವ, ಉಡುಗೊರೆ, ನಗದು ಹಂಚುವ ಕೃತ್ಯಗಳು ಹೆಚ್ಚಾಗಿವೆ.
  • ಎಟಿಎಂಗೆ ಹಣ ತುಂಬಲು ಕೊಂಡೊಯ್ಯುವ ವಾಹನಗಳಲ್ಲೂ ಅಕ್ರಮವಾಗಿ ನಗದು ಸಾಗಾಟ.
  • ಎಟಿಎಂಗೆ ಹಣ ಸಾಗಿಸುವ 3 ವಾಹನಗಳ ಜಪ್ತಿ.

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡುವ, ಉಡುಗೊರೆ, ನಗದು ಹಂಚುವ ಕೃತ್ಯಗಳು ಹೆಚ್ಚಾಗಿವೆ. ಇಂಥ ಕೃತ್ಯಗಳನ್ನು ತಡೆಯಲು ಚುನಾವಣಾ ಆಯೋಗವು ಹದ್ದಿನ ಕಣ್ಣಿಟ್ಟಿದ್ದರೂ ಇದನ್ನು ತಪ್ಪಿಸಿ ಹಣ, ಉಡುಗೊರೆ ಹಂಚಲು ಮತ್ತು ಸಾಗಾಟಕ್ಕೆ ರಾಜಕೀಯ ಪಕ್ಷಗಳ ಮುಖಂಡರು, ಬೆಂಬಲಿಗರು ಮತ್ತಷ್ಟು ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೀಗ ಎಟಿಎಂಗೆ ಹಣ ತುಂಬಲು ಕೊಂಡೊಯ್ಯುವ ವಾಹನಗಳಲ್ಲೂ ಅಕ್ರಮವಾಗಿ ನಗದು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚುವರಿ ಹಣ ತೆಗೆದುಕೊಂಡು ಹೋಗುತ್ತಿದ್ದ ಮೂರು ವಾಹನಗಳನ್ನು ಬೆಂಗಳೂರಿನ ಹೆಬ್ಬಗೋಡಿ ಚೆಕ್​​ಪೋಸ್ಟ್​​ನಲ್ಲಿ ಜಪ್ತಿ ಮಾಡಲಾಗಿದೆ.

ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಎಟಿಎಂಗೆ ಹಣ ಸಾಗಿಸುವ 3 ವಾಹನಗಳನ್ನು ​ಚೆಕ್​​ಪೋಸ್ಟ್​​ನಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ, ಮೂರು ವಾಹನಗಳ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಇರುವುದು ಪತ್ತೆಯಾಗಿದೆ. ಸಿಬ್ಬಂದಿ ಹೇಳಿದ ಲೆಕ್ಕಕ್ಕೂ ಹಣಕ್ಕೂ ವ್ಯತ್ಯಾಸ ಕಂಡು ಬಂದಿದೆ. ಹೆಚ್ಚುವರಿ 10 ಲಕ್ಷ ರೂ. ಹಣ ಸಾಗಿಸುತ್ತಿದ್ದು ಕಂಡುಬಂದ ಕಾರಣ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮಕ್ಕೆ ಹಲವು ದಾರಿ

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಚೆಕ್ ಪೋಸ್ಟ್​​ನಲ್ಲಿ ಎರಡು ದಿನಗಳ ಹಿಂದಷ್ಟೇ ಖಾಸಗಿ ಬಸ್​​ನಲ್ಲಿದ್ದ ಪ್ರಯಾಣಿಕರೊಬ್ಬರ ಬ್ಯಾಗ್​ನಲ್ಲಿ 2 ಕೋಟಿ ರೂ. ನಗದು ದೊರೆತಿತ್ತು. ಸಾರ್ವಜನಿಕ ಸಾರಿಗೆಗಳ ಮೂಲಕವೂ ಕೋಟ್ಯಂತರ ರೂ. ನಗದು ಸಾಗಾಟ ಮಾಡುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್​ನಲ್ಲಿ ಬೈಕ್ ತಡೆದ ಪೊಲೀಸರು ಸವಾರನನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೊಂಟದಲ್ಲಿ ಕಂತೆಕಂತೆ ನೋಟುಗಳು ಪತ್ತೆಯಾಗಿವೆ.

ಅಫಜಲಪುರದಲ್ಲಿ 3.2 ಲಕ್ಷ ರೂ. ನಗದು ವಶ

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸೊನ್ನ ಚೆಕ್‌ಪೋಸ್ಟ್‌‌ನಲ್ಲಿ ದಾಖಲೆಯಿಲ್ಲದ 3.2 ಲಕ್ಷ ರೂ. ನಗದು ಹಣ ಜಪ್ತಿ ಮಾಡಲಾಗಿದೆ. ಬೈಕ್​ನಲ್ಲಿ ನಗದು ತೆಗೆದುಕೊಂಡು ಹೋಗುತ್ತಿದ್ದ ಶ್ರೀಕಾಂತ್ ಮ್ಯಾಳೇಸಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಇವರು ಅಫಜಲಪುರದಿಂದ ಬೈಕ್​ನಲ್ಲಿ ಮಹಾರಾಷ್ಟ್ರದ ನಾಗಣಸೂರ್‌ಗೆ ಹಣ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ