AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election Results: ಚುನಾವಣಾ ಫಲಿತಾಂಶ; ಬೆಟ್ಟಿಂಗ್ ದಂಧೆ ಮೇಲೆ ಸೂಕ್ಷ್ಮ ನಿಗಾ

ಬೆಟ್ಟಿಂಗ್ ದಂಧೆ ಮೇಲೆ ಸೂಕ್ಷ್ಮ ನಿಗಾ ವಹಿಸುವಂತೆ ಸಿಸಿಬಿ ಅಧಿಕಾರಿಗಳು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆ್ಯಪ್​ಗಳ ಮೂಲಕ ಆನ್​ಲೈನ್​ನಲ್ಲಿ ಹಾಗೂ ಆಫ್​ಲೈನ್​ನಲ್ಲಿ ನಡೆಯುವ ಬೆಟ್ಟಿಂಗ್ ಕೃತ್ಯಗಳ ಮೇಲೆ ಕಣ್ಗಾವಲಿಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

Karnataka Election Results: ಚುನಾವಣಾ ಫಲಿತಾಂಶ; ಬೆಟ್ಟಿಂಗ್ ದಂಧೆ ಮೇಲೆ ಸೂಕ್ಷ್ಮ ನಿಗಾ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 09, 2023 | 4:23 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಬುಧವಾರ ನಡೆಯಲಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಲಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಮೇಲೆ ಮತ್ತು ಯಾರು ಗೆಲ್ಲಬಹುದು ಎಂಬ ಬಗ್ಗೆ ಬೆಟ್ಟಿಂಗ್ ಕೂಡ ಜೋರಾಗಿ ನಡೆಯುತ್ತಿದೆ ಎನ್ನಲಾಗಿದೆ. ಹೀಗಾಗಿ ಬೆಟ್ಟಿಂಗ್ ದಂಧೆ ಮೇಲೆ ಸೂಕ್ಷ್ಮ ನಿಗಾ ವಹಿಸುವಂತೆ ಸಿಸಿಬಿ ಅಧಿಕಾರಿಗಳು (CCB Police) ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆ್ಯಪ್​ಗಳ ಮೂಲಕ ಆನ್​ಲೈನ್​ನಲ್ಲಿ ಹಾಗೂ ಆಫ್​ಲೈನ್​ನಲ್ಲಿ ನಡೆಯುವ ಬೆಟ್ಟಿಂಗ್ ಕೃತ್ಯಗಳ ಮೇಲೆ ಕಣ್ಗಾವಲಿಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಚುನಾವಣೆಯಲ್ಲಿ ಸ್ಪರ್ಧಿಸಿರುವ ಗಣ್ಯ ಅಭ್ಯರ್ಥಿಗಳು, ಹಾಗೂ ಪ್ರಮುಖ ವಿಧಾನಸಭಾ ಕ್ಷೇತ್ರಗಳ ಮೇಲೆ ಬೆಟ್ಟಿಂಗ್ ನಡೆಯುತ್ತಿದೆ ಎನ್ನಲಾಗಿದೆ.

ಸದ್ಯ ಸಿಸಿಬಿ ಹೈ ಅಲರ್ಟ್​​​ ಸ್ಥಿತಿಯಲ್ಲಿದ್ದು, ಮುಂದಿನ ಒಂದು ವಾರ ಕಾಲ ಅನೇಕ ಜೂಜಿನ ಆ್ಯಪ್​ಗಳ ಮೇಲೆ ನಿಗಾವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ, ಚುನಾವಣೆಗೆ ಸಂಬಂಧಿಸಿದಂತೆ ಬೆಟ್ಟಿಂಗ್ ಕಂಡುಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಬುಧವಾರ ಬೆಳಿಗ್ಗೆ 7ಕ್ಕೆ ಆರಂಭವಾಗಲಿದ್ದು, ಸಂಜೆ ಆರು ಗಂಟೆಯ ವರೆಗೆ ನಡೆಯಲಿದೆ. ಅದಾದ ನಂತರ ಮತದಾನ ಪ್ರಮಾಣದ ಕುರಿತು ಚುನಾವಣಾ ಆಯೋಗ ಮಾಹಿತಿ ನೀಡಲಿದೆ. ನಂತರ ಎಕ್ಸಿಟ್​ಪೋಲ್ ಸಮೀಕ್ಷೆಗಳ ವರದಿಯೂ ಪ್ರಕಟವಾಗಲಿದೆ. ಆ ನಂತರ ಬೆಟ್ಟಿಂಗ್ ಚಟುವಟಿಕೆ ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗಿದೆ. ಈಗಾಗಲೇ ಚುನಾವಣಾಪೂರ್ವ ಸಮೀಕ್ಷಾ ವರದಿಗಳು ಪ್ರಕಟವಾಗಿವೆ.

ಇದನ್ನೂ ಓದಿ: Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯಲಿದ್ದು, 5,30,85,566 ಮತದಾರರು ಹಕ್ಕು ಚಲಾಯಿಸಲಿದ್ದಾರೆ. 37,777 ಸ್ಥಳಗಳ 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 11,71,558 ಮಂದಿ ಮೊದಲ ಬಾರಿ ವೋಟ್​ ಮಾಡಲಿದ್ದಾರೆ. ರಾಜ್ಯಾದ್ಯಂತ ನಾಳೆ 4,00,000 ಮತಗಟ್ಟೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್