Karnataka Elections 2022: ಎಲ್ಲ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ; ಎಚ್​ಡಿ ಕುಮಾರಸ್ವಾಮಿ ಘೋಷಣೆ

ಬೇರೆ ಪಕ್ಷಕ್ಕೆ ನಮ್ಮ ಪಕ್ಷದಿಂದ ಹೋಗುವವರು ಯಾರೂ ಇಲ್ಲ. ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಬರುವವರ ಬಗ್ಗೆಯೂ ನಾನು ಏನೂ ಹೇಳುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

Karnataka Elections 2022: ಎಲ್ಲ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ; ಎಚ್​ಡಿ ಕುಮಾರಸ್ವಾಮಿ ಘೋಷಣೆ
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 19, 2022 | 12:48 PM

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್​ ಸಿದ್ಧತೆ ಆರಂಭಿಸಿದ್ದು, ರಾಜ್ಯದ ಎಲ್ಲ 224 ಕ್ಷೇತ್ರದಲ್ಲಿಯೂ ನಾವು ಸ್ಪರ್ಧಿಸುತ್ತೇವೆ. ನವೆಂಬರ್ 1ರಂದು 126 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತೇವೆ ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಘೋಷಿಸಿದರು. ಜೆಡಿಎಸ್‌ಗೆ ಚುನಾವಣಾ ಅಭ್ಯರ್ಥಿಗಳಿಲ್ಲ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ‘ನಮಗೆ ಅಭ್ಯರ್ಥಿಗಳಿಲ್ಲ ಎಂದಾದರೆ ಬಿಜೆಪಿ ಮತ್ತು ಕಾಂಗ್ರೆಸ್​ನವರು ನಮ್ಮ ನಾಯಕರ ಮನೆಬಾಗಿಲು ಬಡಿಯುತ್ತಿರುವುದೇಕೆ’ ಎಂದು ಪ್ರಶ್ನಿಸಿದರು.

ಬೇರೆ ಪಕ್ಷಕ್ಕೆ ನಮ್ಮ ಪಕ್ಷದಿಂದ ಹೋಗುವವರು ಯಾರೂ ಇಲ್ಲ. ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಬರುವವರ ಬಗ್ಗೆಯೂ ನಾನು ಏನೂ ಹೇಳುವುದಿಲ್ಲ. ಶಾಸಕ ಜಿ.ಟಿ.ದೇವೇಗೌಡರು ದೊಡ್ಡಮಟ್ಟದ ಕಾರ್ಯಕ್ರಮ ನಡೆದ ಪಾಲ್ಗೊಳ್ಳುತ್ತಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನಡೆಸಿದ ಭಾರತ್ ಜೋಡೋ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಭಾರತ್ ಜೋಡೋ ಯಾತ್ರೆ ಅಲ್ಲ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೋ ಯಾತ್ರೆ. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದೇ ಅವರಿಬ್ಬರನ್ನು ಒಂದು ಮಾಡಲು. ಈ ಅಂಶವು ಗುಂಡ್ಲುಪೇಟೆಯಲ್ಲಿಯೇ ಸಾಬೀತಾಯಿತು. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎಂದಿಗೂ ಒಂದಾಗುವುದಿಲ್ಲ ಎಂದರು.

ಒಕ್ಕಲಿಗರಿಗೆ ಮೀಸಲಾತಿ ಕಲ್ಪಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ಅಂಬೇಡ್ಕರ್ ಅವರ ಅವಧಿಗೂ ಇಂದಿಗೂ ಸಾಕಷ್ಟು ಬದಲಾವಣೆ ಆಗಿದೆ. ಮೀಸಲಾತಿ ಬಗ್ಗೆ ಹಲವು ಸ್ವಾಮೀಜಿಗಳನ್ನು ರಾಜಕಾರಣಿಗಳೇ ಬೀದಿಗಿಳಿಸಿದ್ದಾರೆ‌. ಮೀಸಲಾತಿ ಮೂಲಕ ಅಸಮಾನತೆ ದೂರ ಮಾಡಲು ಆಗುವುದಿಲ್ಲ. ಅಂತಿಮವಾಗಿ ಇದು ಎಲ್ಲಿಗೆ ಬಂದು ನಿಲ್ಲುತ್ತದೆಯೋ ಗೊತ್ತಿಲ್ಲ. ಪ್ರತಿ ಕುಟುಂಬವು ಸ್ವಾಭಿಮಾನದಿಂದ ಬದುಕುವ ಆರ್ಥಿಕ, ಶೈಕ್ಷಣಿಕ ಶಕ್ತಿ ನೀಡುವುದು ನಮ್ಮ ಗುರಿ ಎಂದು ಅವರು ಘೋಷಿಸಿದರು.

ಕೋಲಾರದಲ್ಲಿ ನ 1ರಂದು ಪಂಚರತ್ನ ಯೋಜನೆ ರಥಯಾತ್ರೆಗೆ ಚಾಲನೆ ನೀಡಲಾಗುವುದು. ಅಂದು ಗಣಪತಿ, ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿ ಯೋಜನೆ ಬಗ್ಗೆ ಮನೆಮನೆಗೆ ಮಾಹಿತಿ ತಲುಪಿಸುವ ಕೆಲಸ ಮಾಡುತ್ತೇವೆ. 4 ಹಂತದಲ್ಲಿ ನಿರಂತರವಾಗಿ ಪಂಚರತ್ನ ಯೋಜನೆ ಕಾರ್ಯಕ್ರಮ ನಡೆಯಲಿದೆ. ಕೆಲವರು ಜೆಡಿಎಸ್ ಪಕ್ಷ ಎಲ್ಲಿದೆ ಅಂತಾ ಮಾತನಾಡುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ಪರ್ಯಾಯ ಶಕ್ತಿ ಬಗ್ಗೆ ಜನರಿಗೆ ಒಲವಿದೆ. 2023ಕ್ಕೆ ಕನ್ನಡಿಗರ ಪ್ರಾದೇಶಿಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.

ಕೆಸಿಆರ್​ ಅವರ ದಲಿತ ಬಂಧು ಕಾರ್ಯಕ್ರಮ ಇಷ್ಟ ಆಯಿತು. ರಾಜ್ಯದಲ್ಲಿ ಆ ಯೋಜನೆ ಜಾರಿಗೆ ತರುವ ಕೆಲಸ ಮಾಡುತ್ತೇನೆ ಎಂದು ಅವರು ಇದೇ ಸಂದರ್ಭ ಘೋಷಿಸಿದರು.

ಯೋಜನೆಯ ಬಗ್ಗೆ ಮಾಹಿತಿ ನಿಡಲು ಸ್ತಬ್ಧಚಿತ್ರಗಳನ್ನು ಅಳವಡಿಸಲಾಗುತ್ತದೆ. ವಾಹನದಲ್ಲಿಯೇ ನಿಂತು ಮಾತನಾಡಲು ವ್ಯವಸ್ಥೆ ಮಾಡಲಾಗಿದೆ. ಚುನಾವಣಾ ಪ್ರಚಾರದ ವೇಳೆಯಲ್ಲಿಯೂ ವೈಯಕ್ತಿಕ ಟೀಕೆ ಬದಲು ನಾವು ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ಬಗ್ಗೆ ಮಾತ್ರ ಮಾತನಾಡುತ್ತೇನೆ. 2023ಕ್ಕೆ ಕನ್ನಡಿಗರ ಪ್ರಾದೇಶಿಕ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದಷ್ಟೇ ಮನವಿ ಮಾಡುತ್ತೇನೆ. ನಮ್ಮ ಚುನಾವಣಾ ಕಾರ್ಯತಂತ್ರದ ಬಗ್ಗೆ ಸಂಭವನೀಯ ಅಭ್ಯರ್ಥಿಗಳಿಗೆ ಕಾರ್ಯಾಗಾರ ನಡೆಸಿದ್ದೇವೆ. ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಪೂಜೆಯ ನಂತರವೇ ನಮ್ಮ ಚಟುವಟಿಕೆ ಆರಂಭವಾಗುತ್ತಿದೆ ಎಂದರು.

ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಾಗಾರ, ಪಂಚರತ್ನ ಯೋಜನೆಯ ವೆಬ್​ಸೈಟ್​ ಹಾಗೂ ವಿಡಿಯೊ ಬಿಡುಗಡೆ ಮಾಡಿದರು. ಕಾರ್ಯಾಗಾರದಲ್ಲಿ ಶಾಸಕರಾದ ಅನಿತಾ ಕುಮಾರಸ್ವಾಮಿ, ಸಾರಾ ಮಹೇಶ್, ಸಿ.ಎಸ್.ಪುಟ್ಟರಾಜು, ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಸಿ.ಎನ್.ಮಂಜೇಗೌಡ, ಸರವಣ ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಬೆಂಗಳೂರು ಈಗ ಗುಂಡಿಗಳೂರು, ಅಧ್ವಾನ ನಗರವಾಗಲು ಪರ್ಸೆಂಟೇಜ್ ಅಕ್ರಮವೇ ಕಾರಣ: ಎಚ್​ಡಿ ಕುಮಾರಸ್ವಾಮಿ

Published On - 12:48 pm, Wed, 19 October 22

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್