Karnataka Assembly Polls 2023: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಫೈನಲ್, ಪಟ್ಟಿ ಬಿಡುಗಡೆಗೆ ಕೌಂಟ್​ಡೌನ್

ದೆಹಲಿಯಲ್ಲಿ ನಡೆದ ಬಿಜೆಪಿ ಟಿಕೆಟ್ ಚರ್ಚೆ ವಿಚಾರವಾಗಿ 2ನೇ ದಿನ ನಡೆದ ಸಭೆ ಅಂತ್ಯವಾಗಿದೆ. ಚುನಾವಣಾ ಸಮಿತಿ ಹಾಗು ಸಂಸದೀಯ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಪಟ್ಟಿ ಬಿಡುಗಡೆ ಒಂದೇ ಬಾಕಿ ಇದೆ.

Karnataka Assembly Polls 2023: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಫೈನಲ್, ಪಟ್ಟಿ ಬಿಡುಗಡೆಗೆ ಕೌಂಟ್​ಡೌನ್
ಮೇಲಿನವರು ತಮ್ಮ ಮಕ್ಕಳಿಗೆ ಹಾಗೂ ಕುಟುಂಬಕ್ಕೆ ಟಿಕೆಟ್​ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಆದ್ರೆ, ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ ಹೈಕಮಾಂಡ್​ ಕೆಲವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಮಣೆ ಹಾಕುವುದು ಅನುಮಾನ,
Follow us
|

Updated on:Apr 10, 2023 | 8:51 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಈಗಾಗಲೇ ಕಾಂಗ್ರೆಸ್‌ನ ಎರಡು ಪಟ್ಟಿಯಲ್ಲಿ 166 ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗಿದೆ. ಜೆಡಿಎಸ್‌ ತನ್ನ 93 ಅಭ್ಯರ್ಥಿಗಳ ಒಂದು ಪಟ್ಟಿಯನ್ನು ಸಹ ಪ್ರಕಟಿಸಿದೆ. ಆದ್ರೆ, ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಇಂದು(ಏಪ್ರಿಲ್ 10) ಯಾವುದೇ ಕ್ಷಣದಲ್ಲಾದರೂ ಬಿಡುಗಡೆಯಾಗಹುದು. ಕಳೆದ ಹತ್ತರಿಂದ 15 ದಿನಗಳಿಂದ ಹೈವೋಲ್ಟೇಜ್‌ ಮೀಟಿಂಗ್‌ ಮಾಡಿರುವ ನಾಯಕರು, 175 ಅಭ್ಯರ್ಥಿಗಳ ಪಟ್ಟಿಯನ್ನ ರೆಡಿ ಮಾಡಿದ್ದಾರೆ. ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನ್ ಹೇಳುತ್ತೆ? ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು,  ಟಿಕೆಟ್​ ಘೋಷಣೆಗೂ ಮುನ್ನ ಬಿಜೆಪಿ ನಾಯಕರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ದೆಹಲಿಯಲ್ಲಿ ಧರ್ಮೇಂದ್ರ ಪ್ರಧಾನ್​ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಾಯಕರು ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ವೇಳೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್​ ಸಿಗುತ್ತೋ ಇಲ್ವೋ ಎಂದು ಆಕಾಂಕ್ಷಿಗಳಿಗೆ ಎದೆ ಡವ ಡವ ಅಂತಿದ್ರೆ, ಇನ್ನು ಕೆಲ ಹಾಲಿ ಶಾಸಕರು ಎಲ್ಲಿ ಈ ಬಾರಿ ಟಿಕೆಟ್ ಕೈತಪ್ಪುತ್ತೋ ಎನ್ನುವ ಆತಂಕದಲ್ಲಿದ್ದಾರೆ.

ಇದನ್ನೂ ಓದಿ: ಮಾದರಿ ನೀತಿ ಸಂಹಿತೆ ಜಾರಿ: 10 ದಿನಗಳಲ್ಲಿ 100 ಕೋಟಿ ರೂ. ಮೌಲ್ಯದ ನಗದು, ವಸ್ತು ಜಪ್ತಿ

ದೆಹಲಿಯಲ್ಲಿ ನಡೆದ ಬಿಜೆಪಿ ಟಿಕೆಟ್ ಚರ್ಚೆ ವಿಚಾರವಾಗಿ ಕಳೆದ 2 ದಿನ ನಡೆದ ಸಭೆ ಅಂತ್ಯಗೊಂಡಿದೆ. ಅಲ್ಲದೇ ನಿನ್ನೆ (ಏಪ್ರಿಲ್ 09) ಸಂಜೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸದೀಯ ಮಂಡಳಿ ಸಭೆ ನಡೆದಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಂಬಂಧ ಸುದೀರ್ಘವಾಗಿ ಎರಡು ಗಂಟೆ ಕಾಲ ಚರ್ಚೆಗಳು ನಡೆದಿವೆ.

ಹೌದು..ಅತ್ತ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಗೆ ಸರಣಿ ಸಭೆಗಳು, ಸುದೀರ್ಘ ಚರ್ಚೆಗಳು ನಡೆಯುತ್ತಿದ್ದರೆ ಇತ್ತ ದಿಲ್ಲಿ ನಾಯಕರ ದಾಳಕ್ಕೆ ಬಿಜೆಪಿಯ ಹಾಲಿ ಶಾಸಕರಿಗೆ ಟಿಕೆಟ್ ಟೆನ್ಷನ್ ಶುರುವಾಗಿದೆ. ಯಾಕಂದ್ರೆ ಈ ಬಾರಿ 16 ಅಥವಾ ಅದಕ್ಕಿಂತ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಆಗುತ್ತೆ ಎನ್ನುವ ಮಾಹಿತಿ ಬಿಜೆಪಿ ಪಾಳಯದಿಂದಲೇ ತಿಳಿದುಬಂದಿದೆ. ಹೀಗಾಗಿ ಕೇಸರಿ ಮನೆಯಲ್ಲಿ ಕಂಪನ ಎದ್ದಿದ್ದು, ಯಾರಿಗೆ ಟಿಕೆಟ್ ಮಿಸ್ಸಾಗುತ್ತೋ ಎನ್ನುವ ತಳಮಳ ಶುರುವಾಗಿದೆ.

ಏಪ್ರಿಲ್‌ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಅಲ್ಲದೆ, ನಾಮಪತ್ರ ಸಲ್ಲಿಕೆ ಆರಂಭವೂ ಏಪ್ರಿಲ್‌ 13 ರಂದೇ ಆರಂಭವಾಗಲಿದೆ. ಇನ್ನು, ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:16 am, Mon, 10 April 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ