ಕರ್ನಾಟಕ ಚುನಾವಣೆ 2023ರ (Karnataka Assembly Election 2023)ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಕಾಂಗ್ರೆಸ್ (Congress) ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ದೆಹಲಿಯ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ. ಕಚೇರಿ ಮುಂದೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸುತ್ತಿರುವ ವಿಡಿಯೊವನ್ನು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಸಾಧಿಸಿ ಮ್ಯಾಜಿಕ್ ಸಂಖ್ಯೆ ದಾಟಿದೆ. ಟಿವಿ ಮಾಧ್ಯಮಗಳಲ್ಲಿ ಇದು ಡಿಸ್ ಪ್ಲೇ ಆಗುತ್ತಿದ್ದಂತೆ ಕಾಂಗ್ರೆಸ್ ಕಚೇರಿಗಳಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಖುಷಿಪಟ್ಟಿದ್ದಾರೆ.
#WATCH | Celebrations are underway at AICC HQ in New Delhi as the party inches towards the halfway majority mark in #KarnatakaElectionResults. pic.twitter.com/oY0gefbBw4
— ANI (@ANI) May 13, 2023
ಇತ್ತ ಕಾಂಗ್ರೆಸ್ ಪಕ್ಷ ತಮ್ಮ ಟ್ವಿಟರ್ ಹ್ಯಾಂಡಲ್ ನಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ವಿಡಿಯೊಗೆ ಹಿನ್ನಲೆಯಲ್ಲಿ I am Unstoppable ಹಾಡು ಹಾಕಿ ಟ್ವೀಟ್ ಮಾಡಿದೆ.
I’m invincible
I’m so confident
Yeah, I’m unstoppable today ? pic.twitter.com/WCfUqpNoIl
— Congress (@INCIndia) May 13, 2023
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆದಿದ್ದು, ಇಂದು 13 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.
#WATCH | Congress workers celebrate at AICC HQ in New Delhi as the party continues to lead in #KarnatakaElectionResults pic.twitter.com/RkOdMO4kZX
— ANI (@ANI) May 13, 2023
ಇತ್ತೀಚಿನ ಮಾಹಿತಿ ಪ್ರಕಾರ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣಗೆ ಸೋತಿದ್ದಾರೆ. ಕಾಂಗ್ರೆಸ್ನ ಸಿ.ಪುಟ್ಟರಂಗಶೆಟ್ಟಿಗೆ ಗೆದ್ದಿದ್ದಾರೆ. ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಜಯಭೇರಿ ಭಾರಿಸಿದ್ದಾರೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಗೆಲವು ಸಾಧಿಸಿದ್ದಾರೆ.ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕ ಹಿನ್ನೆಲೆಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಸಹೋದರ ಡಿಕೆ ಸುರೇಶ್ ಆಗಮಿಸಿ, ಮಹತ್ವದ ಚರ್ಚೆ ನಡೆಸಿದ್ದಾರೆ.
ಚುನಾವಣೆ ಫಲಿತಾಂಶ ಲೈವ್ ಅಪ್ಡೇಟ್ ಇಲ್ಲಿ ನೋಡಿ
ವಿಧಾನಸಭೆ ಚುನಾವಣೆ ತಾಜಾ ಸುದ್ದಿ ಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:52 am, Sat, 13 May 23