ಬೆಂಗಳೂರು (ಏ.28): ನಟ ಶಿವರಾಜ್‌ಕುಮಾರ್ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ (Geetha Shivarajkumar) ಅವರು ಇಂದು (ಏಪ್ರಿಲ್ 28) ಅಧಿಕೃತವಾಗಿ ಕಾಂಗ್ರೆಸ್ (Congress) ಸೇರ್ಪಡೆಯಾಗಲಿದ್ದಾರೆ. ಈವರೆಗೆ ಜೆಡಿಎಸ್ ಪಕ್ಷದಲ್ಲಿದ್ದ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ವೇಳೆ ಜೆಡಿಎಸ್‌ನಲ್ಲಿ ಜತೆಗಿದ್ದ ಸಹೋದರ ಮಧು ಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ ಸೊರಬ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಇನ್ನು ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷದಿಂದ ಗೀತಾ ಶಿವರಾಜ್‌ಕುಮಾರ್ ಸ್ಪರ್ಧೆ ಮಾಡಿದ್ದರು. ಆ ಬಳಿಕ ಅವರು ಜೆಡಿಎಸ್ ಪಕ್ಷದಿಂದ ಹೊರಬಂದು ತಟಸ್ಥವಾಗಿ ಉಳಿದಿದ್ದರು. ಅಂದು ಕೂಡ ಮಧು ಬಂಗಾರಪ್ಪ ಅವರು ಜೆಡಿಎಸ್ ಪಕ್ಷದಲ್ಲಿದ್ದರೂ ಸಹಜವಾಗಿಯೇ ಗೀತಾ ಅವರು ಜೆಡಿಎಸ್ನಿಂದ ಸ್ಪರ್ಧೆ ಮಾಡಿದ್ದರು. ಆ ಬಳಿಕ ನಡೆದ ಬೆಳವಣಿಗೆಗಳಲ್ಲಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಹಿಂಬಾಲಿಸಿಕೊಂಡು ಗೀತಾ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಹೋದರನ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರವನ್ನೂ ಆರಂಭಿಸಿದ್ದಾರೆ. ಇ 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದಲೂ ಗೀತಾ ಶಿವರಾಜ್‌ಕುಮಾರ್ ಸೇರ್ಪಡೆ ಕಾಂಗ್ರೆಸ್ಗೆ ಲಾಭ ಆಗಲಿದೆ. ಒಂದು ಪ್ರಬಲ ಸಮುದಾಯವೂ ಕಾಂಗ್ರೆಸ್ಗೆ ಬೆಂಬಲ ನೀಡುವ ನಿರೀಕ್ಷೆ ಇದೆ. ನ್ನು ಗೀತಾ ಜತೆ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆಯೇ ಎಂಬುದು ಸಹ ಕುತೂಹಲ ಮೂಡಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ