ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೇ ಪ್ರಚಾರದ ಭರಾಟೆ ಜೋರಾಗಿದೆ. ಇದೇ ಮೇ 10ರಂದು ಮತದಾನ ನಡೆಯಲಿದೆ. ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. ಆದ್ರೆ, ನಾಳೆಯಿಂದಲೇ(ಏಪ್ರಿಲ್ 28) ಮತದಾನ ಪ್ರಕ್ರಿಯೆ ಶುರುವಾಗಲಿದೆ. ಹೌದು.. ಬ್ಯಾಲೇಟ್ ಪೇಪರ್(ballot paper) ವೋಟಿಂಗ್ ಮಾತ್ರ ಆರಂಭವಾಗಲಿದೆ. ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಲಾಗಿದ್ದು, 80 ವರ್ಷ ಮೇಲ್ಪಟ್ಟ ವೃದ್ಧರು ವಿಕಲಚೇತನರಿಗೆ ಹಾಗೂ ಚುನಾವಣೆಯ ಕರ್ತವ್ಯದಲ್ಲಿ ಭಾಗಿಯಾಗುವ ಪೊಲೀಸ್ , ಚುನಾವಣೆ ಸಿಬ್ಬಂದಿ ಮಾತ್ರ ಮತದಾನ ಮಾಡಬಹುದು. ಇನ್ನುಳಿದವರು ಮೇ 10ರಂದೇ ಮತಗಟ್ಟೆಗೆ ಹೋಗಿ ಮತದಾನ ಮಾಡಬೇಕು.
ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಬೆ ಚುನಾವಣೆಯಲ್ಲಿ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರು 80,250 ಮತದಾರರಿದ್ದಾರೆ. ಇದರಲ್ಲಿ 9,152 ಜನ ಬೆಂಗಳೂರಿನಲ್ಲಿದ್ದಾರೆ. ಚುನಾವಣಾ ಆಯೋಗವು ಈಗಾಗಲೇ 47,488 ಯೋಧರಿಗೆ ಅಂಚೆ ಮತಪತ್ರಗಳನ್ನು ಕಳುಹಿಸಿದ್ದರೆ, 80 ವರ್ಷ ದಾಟಿದ 80,250 ಜನರು ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿದ್ದಾರೆ. 19279 ವಿಕಲ ಚೇತನರು, 13771 ಅಗತ್ಯ ಸೇವೆ ಒದಗಿಸುವವರು ನೋಂದಾಯಿಸಿದ್ದಾರೆ.
80 ವರ್ಷ ಮೇಲ್ಪಟ್ಟ ವೃದ್ಧರಿಗೆ ಚುನಾವಣಾ ಅಯೋಗದ ಸಿಬ್ಬಂದಿ ಅವರ ಮನೆ ಬಾಗಿಲಿನಲ್ಲಿಯೇ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಈ ಮೂಲಕ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗೆ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಗೌಪ್ಯ ಮತ ಚಾಲಯಿಸುವಾಗ ಸ್ಥಳದಲ್ಲಿ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಇರಲಿದ್ದಾರೆ. ಅಲ್ಲದೇ ಮತದಾನದ ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಲಾಗುತ್ತದೆ. ಇನ್ನು ಮತದಾನದ ನಂತರ ಮತ ಪೆಟ್ಟಿಗೆಗಳನ್ನು ಈಗಾಗಲೇ ಮೀಸಲಿಟ್ಟಿರುವ ಸ್ಟ್ರಾಂಗ್ ರೂಮ್ ಗೆ ಶಿಪ್ಟ್ ಮಾಡಲಾಗುತ್ತದೆ. ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಲಾಗುತ್ತದೆ.
ಇನ್ನು ಬೆಂಗಳೂರು ನಗರದಲ್ಲಿ ಮತಯಂತ್ರಗಳನ್ನು ಇಡಲು 4 ಕಾಲೇಜುಗಳಲ್ಲಿ ಸ್ಟ್ರಾಂಗ್ ರೂಂ ಗುರುತಿಸಲಾಗಿದೆ. ದಕ್ಷಿಣ ವಲಯದಲ್ಲಿ ಎಸ್ಎಸ್ಎಂಆರ್‌ವಿ ಕಾಲೇಜು, ಸೆಂಟ್ರಲ್ ಕ್ಷೇತ್ರದ ಮತ ಏಣಿಕೆಗೆ ಬಿಎಂಎಸ್ ಕಾಲೇಜು. ಉತ್ತರ ವಲಯದಲ್ಲಿ ಮೌಂಟ್ ಕಾರ್ಮೆಲ್ ಕಾಲೇಜು, ಕೇಂದ್ರ ವಲಯದಕ್ಕೆ ಸೇಂಟ್ ಜೋಸೆಫ್ ಕಾಲೇಜುಗಳನ್ನು ಗುರುತಿಸಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:02 pm, Fri, 28 April 23