Karnataka Assembly Polls 2023: ಜೆಡಿಎಸ್​ಗೆ ಆರಂಭಿಕ ಆಘಾತ: ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದ್ದು, ಈಗಾಗಲೇ ಹಲವರ ನಾಮಪತ್ರಗಳು ತಿರಸ್ಕೃತಗೊಂಡಿವೆ. ಹಾಗೆಯೆ ಜೆಡಿಎಸ್ ಅಭ್ಯರ್ಥಿಯ ನಾಮಪತ್ರವೂ ಸಹ ತಿರಸ್ಕೃತಗೊಂಡಿದ್ದು, ಜೆಡಿಎಸ್​ಗೆ ಆರಂಭಿಕ ಆಘಾತವಾಗಿದೆ.

Karnataka Assembly Polls 2023: ಜೆಡಿಎಸ್​ಗೆ ಆರಂಭಿಕ ಆಘಾತ: ಅಭ್ಯರ್ಥಿ ನಾಮಪತ್ರ ತಿರಸ್ಕೃತ
ಪ್ರಾತಿನಿಧಿಕ ಚಿತ್ರ
Follow us
|

Updated on:Apr 23, 2023 | 2:49 PM

ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿಯಬೇಕೆಂದು ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಕಾಲಿಗೆ ಚಕ್ರಕಟ್ಟಿಕೊಂಡವರಂತೆ ರಾಜ್ಯದೆಲ್ಲೆಡೆ ಸುತ್ತಾಡುತ್ತಿದ್ದಾರೆ. ಆದ್ರೆ, ಜೆಡಿಎಸ್​ಗೆ ಆರಂಭ ಆಘಾತವಾಗಿದೆ. ಹೌದು.. ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ (Shivaji Nagar Assembly Constituency) ಜೆಡಿಎಸ್ ಅಭ್ಯರ್ಥಿ (JDS Candidate) ‌ಅಬ್ದುಲ್ ಜಫರ್ ಅಲಿ (Abdul Zafar Ali) ನಾಮಪತ್ರ ತಿರಸ್ಕೃತಗೊಂಡಿದೆ. ಹಲವು ವರ್ಷಗಳ ಕಾಲ ವಿದೇಶದಲ್ಲಿದ್ದ ಜಾಫರ್ ಅಲಿ ಹೆಸರು ಮತದಾರರ ಪಟ್ಟಿಯಲ್ಲೇ ಇಲ್ಲದಿರುವುದರಿಂದ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ನಾಮಪತ್ರ ತಿರಸ್ಕೃತ ಆಗಿರುವುದನ್ನು ಶಿವಾಜಿನಗರ ಆರ್‌ಓ ಬಸವರಾಜ್ ಸೋಮಣ್ಣನವರ್ ದೃಢಪಡಿಸಿದ್ದಾರೆ.

ಇದನ್ನೂ ಓದಿ: ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರ: ಹೈಕೋರ್ಟ್​ ಮೆಟ್ಟಿಲೇರಲು ಸಜ್ಜಾದ ಕಾಂಗ್ರೆಸ್​ ಅಭ್ಯರ್ಥಿ

ಇನ್ನು ಶಿವಾಜಿನಗರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಜಾಫರ್‌ ಅಲಿ ಅವರು ಬಹಳ ವರ್ಷಗಳ ಕಾಲ ವಿದೇಶದಲ್ಲಿ ವಾಸವಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿತ್ತು. ಆದರೆ, ಇತ್ತೀಚೆಗೆ ಭಾರತಕ್ಕೆ ಮರಳಿ ಬಂದಿದ್ದ ಜಾಫರ್‌ ಅಲಿ ರಾಜಕೀಯಕ್ಕೆ ಬರುವ ಉದ್ದೇಶದಿಂದ ಜೆಡಿಎಸ್‌ನಿಂದ ಬಿ-ಫಾರಂ ಪಡೆದು ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೂ ಪಯೋಜನಾ ಆದರೆ, ಈ ನಾಮಪತ್ರ ಊರ್ಜಿತ ಆಗುವುದಿಲ್ಲ ಎಂದು ಅರಿತು ಮತ್ತೊಬ್ಬ ಅಭ್ಯರ್ಥಿಗೆ ಬಿ-ಫಾರಂ ನೀಡುವಂತೆ ಪಕ್ಷಕ್ಕೆ ತಿಳಿಸಿದ್ದರು.

ಇದೀಗ ಜೆಡಿಎಸ್​ ಅಭ್ಯರ್ಥಿ ವಿಕೆಟ್​ ಬಿದ್ದಿದ್ದರಿಂದ ಶಿವಾಜಿನಗರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಕಾಂಗ್ರೆಸ್​ನಿಂದ ಹಾಲಿ ಶಾಸಕ ರಿಜ್ವಾನ್ ಅರ್ಷದ್ (MLA Rizwan Arshad) ಕಣದಲ್ಲಿದ್ದರೆ, ಬಿಜೆಪಿಯಿಂದ ಎನ್ ಚಂದ್ರ (N Chandra) ಸ್ಪರ್ಧೆಯಲ್ಲಿದ್ದಾರೆ.

ಕಾಂಗ್ರೆಸ್​ಗೆ ಪ್ಲಸ್, ಬಿಜೆಪಿಗೆ ನಿರಾಸೆ

ಶಿವಾಜಿನಗರದಲ್ಲಿ ಅಲ್ಪಸಂಖ್ಯಾತರ ಮತಗಳಲು ಅಧಿಕವಾಗಿದ್ದು, ಜೆಡಿಎಸ್ ಸಹ​ ಅದೇ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದರಿಂದ ಮುಸ್ಲಿಂ ಮತಗಳು ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್​ಗೆ ಕೈತಪ್ಪುವ ಭೀತಿ ಇತ್ತು. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಮುಸ್ಲಿಂ ಸಮುದಾಯದವರಾಗಿದ್ದರಿಂದ ಅಲ್ಪಸಂಖ್ಯಾತ ಮತಗಳು ಹರಿದು ಹಂಚಿಹೋಗಲಿದ್ದು, ತಮಗೆ ಪ್ಲಸ್ ಆಗಲಿದೆ ಎಂದು ಬಿಜೆಪಿ ವಿಶ್ವಾಸದಲ್ಲಿತ್ತು. ಆದ್ರೆ, ಇದೀಗ ಜೆಡಿಎಸ್ ಅಭ್ಯರ್ಥಿಯ ನಾಮಪತ್ರ ರಿಜೆಕ್ಟ್ ಆಗಿದ್ದರಿಂದು ಕಾಂಗ್ರೆಸ್​ ಅಭ್ಯರ್ಥಿಗೆ ಬಿಗೆ ರಿಲೀಫ್ ಸಿಕ್ಕಂತಾಗಿದೆ. ಇನ್ನು ಬಿಜೆಪಿಗೆ ಕೊಂಚ ನಿರಾಸೆಯಾದಂತಾಗಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ಒಟ್ಟು 191528 ಮತದಾರರು ಇದ್ದು, ಇದರಲ್ಲಿ ಮಹಿಳೆಯರು 94085, ಪುರುಷರು 97441. 2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೋಷನ್ ಬೇಗ್ 59742 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಬಿಜೆಪಿಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು 44702 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಬಳಿಕ ರೋಷನ್ ಬೇಗ್ ರಾಜೀನಾಮೆಯಿಂದ ತೆರವಾಗಿದ್ದರಿಂದ ಶಿವಾಜಿನಗರ ಕ್ಷೇತ್ರಕ್ಕೆ 2019ರಲ್ಲಿ ಉಪ ಚುನಾವಣೆ ನಡೆದಿತ್ತು. ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಜಯ ಗಳಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಎಂ ಸರವಣ 13521 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆಯ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:31 pm, Sun, 23 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ