AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 09, 2023 | 9:07 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ಒಂದು ವಿಶೇಷ ರೈಲು ಸಂಚರಿಸಲಿವೆ. ಹುಬ್ಬಳ್ಳಿ ಮಾರ್ಗವಾಗಿ ಈ ರೈಲು ಸಂಚರಿಸಲಿವೆ. ಇನ್ನು ಬೆಂಗಳೂರಿನಿಂದ ಬೀದರ್​ಗೆ ಕಲಬುರಗಿ ಮಾರ್ಗವಾಗಿ ಒಂದು ರೈಲು ತೆರಳಲಿದೆ. ಬೆಂಗಳೂರಿನಿಂದ (ಯಶವಂತಪುರ) ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಇಷ್ಟೇ ಅಲ್ಲದೆ, ಕೆಲವು ರೈಲುಗಳಿಗೆ ಹೆಚ್ಚುವರಿ ಕೋಚ್​​ಗಳನ್ನು ಅಳವಡಿಸಲಾಗಿದೆ. 12079/80 ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್​​ಪ್ರೆಸ್​ಗೆ ಎರಡು ಹೆಚ್ಚುವರಿ ಕೋಚ್​​ಗಳು, 17307/ 17308 ಬಾಗಲಕೋಟೆ, ಮೈಸೂರು, ಬಸವ ಎಕ್ಸ್​​ಪ್ರೆಸ್​​ಗೆ ಹಾಗೂ 16593/94 ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲಿಗೆ ತಲಾ ಒಂದು ಕೋಚ್ ಸೇರಿಸಲಾಗುತ್ತಿದೆ. ಬೆಂಗಳೂರು-ಕಾರವಾರ ಮಧ್ಯೆ ಸಂಚರಿಸುವ 16595/96 ಸಂಖ್ಯೆಯ ರೈಲಿಗೂ ಹೆಚ್ಚುವರಿ ಕೋಚ್ ಅಳವಡಿಸಲಾಗುತ್ತಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳು ಭಾರೀ ದರ ಹೆಚ್ಚಳ ಮಾಡಿವೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ. ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಇದೇ ರೀತಿ ಹಲವು ಊರುಗಳಿಗೆ ತೆರಳುವ ಬಸ್​ಗಳ ದರ ದುಪ್ಪಟ್ಟಾಗಿವೆ. ಇದೇ ಸಂದರ್ಭದಲ್ಲಿ ವಿಶೇಷ ರೈಲು ಬಿಟ್ಟಿರುವುದು ಅನೇಕ ಮಂದಿಗೆ ಪ್ರಯೋಜನವಾಗಲಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Mon, 8 May 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?