AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಟ್ಟರ್ ಮಣಿಸಲು ಗೌಪ್ಯ ರಣತಂತ್ರ; ಮತದಾನಕ್ಕೂ ಮುನ್ನವೇ ಗೆಲುವಿನ ಸಂಕೇತ ತೋರಿದ ಅಮಿತ್‌ ಶಾ

ಕಾಂಗ್ರೆಸ್​​ನಿಂದ ಜಗದೀಶ ಶೆಟ್ಟರ್ (Jagadish Shettar) ಕಣಕ್ಕಿಳಿದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವೂ ಸೇರಿದಂತೆ ಜಿಲ್ಲೆಯ 7 ಕ್ಷೇತ್ರದಲ್ಲೂ ಗೆಲುವಿಗೆ ರಣತಂತ್ರ ರೂಪಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸೋಮವಾರ ರಾತ್ರಿ ಮಹತ್ವದ ಸಭೆ ನಡೆಸಿದರು.

ಶೆಟ್ಟರ್ ಮಣಿಸಲು ಗೌಪ್ಯ ರಣತಂತ್ರ; ಮತದಾನಕ್ಕೂ ಮುನ್ನವೇ ಗೆಲುವಿನ ಸಂಕೇತ ತೋರಿದ ಅಮಿತ್‌ ಶಾ
ಕೇಂದ್ರ ಸಚಿವ ಅಮಿತ್​ ಶಾImage Credit source: businesstoday.in
ಗಣಪತಿ ಶರ್ಮಾ
|

Updated on:Apr 24, 2023 | 11:15 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವೂ ಸೇರಿದಂತೆ ಜಿಲ್ಲೆಯ 7 ಕ್ಷೇತ್ರದಲ್ಲೂ ಗೆಲುವಿಗೆ ರಣತಂತ್ರ ರೂಪಿಸಲು ಶಾ ಸಭೆ
  • ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸುಮಾರು ಒಂದು ಗಂಟೆ ಕಾಲ ರಹಸ್ಯ ಸಭೆ
  • ಸಭೆಯ ಬಳಿಕ ಗೆಲುವಿನ ಸಂಕೇತ ತೋರಿದ ಶಾ

ಹುಬ್ಬಳ್ಳಿ: ಕಾಂಗ್ರೆಸ್​​ನಿಂದ ಜಗದೀಶ ಶೆಟ್ಟರ್ (Jagadish Shettar) ಕಣಕ್ಕಿಳಿದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವೂ ಸೇರಿದಂತೆ ಜಿಲ್ಲೆಯ 7 ಕ್ಷೇತ್ರದಲ್ಲೂ ಗೆಲುವಿಗೆ ರಣತಂತ್ರ ರೂಪಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸೋಮವಾರ ರಾತ್ರಿ ಮಹತ್ವದ ಸಭೆ ನಡೆಸಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸುಮಾರು ಒಂದು ಗಂಟೆ ಕಾಲ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ, ಜಿಲ್ಲೆಯ ಪ್ರಮುಖರು ಹಾಗೂ ಮಂಡಳ ಅಧ್ಯಕ್ಷರ ಜೊತೆ ಸೇರಿ ಕೆಲವು ನಾಯಕರ ಜತೆ ರಹಸ್ಯ ಸಭೆ ನಡೆಸಿದ ಅವರು ನಂತರ ಹೊರಬಂದು ಗೆಲುವಿನ ಸಂಕೇತ ಪ್ರದರ್ಶಿಸಿದರು.

ಸಭೆಗೂ ಮುನ್ನ ಮಾತನಾಡಿದ್ದ ಅಮಿತ್ ಶಾ, ಜಗದೀಶ ಶೆಟ್ಟರ್ ಅವರು ಪಕ್ಷ ತ್ಯಜಿಸಿ ಕಾಂಗ್ರೆಸ್​​ಗೆ ಸೇರಿದ್ದರಿಂದ ನಷ್ಟವಾಗದು. ಶೆಟ್ಟರ್‌ಗೆ ಮಾತ್ರ ಟಿಕೆಟ್‌ ಕೈತಪ್ಪಿಲ್ಲ. ಹಲವರಿಗೆ ಟಿಕೆಟ್ ನೀಡಲಾಗಿಲ್ಲ. ಏಕೆ ಟಿಕೆಟ್ ನೀಡುತ್ತಿಲ್ಲ ಎಂಬುದನ್ನು ಅವರಿಗೆ ತಿಳಿಸಿದ್ದೆವು. ಅದನ್ನು ಇಲ್ಲಿ ಬಹಿರಂಗಪಡಿಸಲಾಗದು. ಮತದಾರರಿಗೆ ಯಾವ ರೀತಿ ಮನವರಿಕೆ ಮಾಡಿಕೊಡಬೇಕೋ ಆ ರೀತಿ ತಿಳಿಸುತ್ತೇವೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಮತ ಬ್ಯಾಂಕ್ ಹೊಂದಿದೆ. ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಜಗದೀಶ್ ಶೆಟ್ಟರ್ ಸೋಲುತ್ತಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಶೆಟ್ಟರ್‌ ಕಾಂಗ್ರೆಸ್‌ಗೆ ಹೋಗಿದ್ದರಿಂದ ನಷ್ಟವಾಗಲ್ಲ, ಬಿಜೆಪಿಯೇ ಗೆಲ್ಲಲಿದೆ; ಹುಬ್ಬಳ್ಳಿಯಲ್ಲಿ ಅಮಿತ್ ಶಾ

ಮಂಗಳವಾರ ವಿಜಯಪುರದಲ್ಲಿ ಶಾ ಪ್ರಚಾರ

ಅಮಿತ್ ಶಾ ಅವರು ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ನಾಳೆ ಮಧ್ಯಾಹ್ನ ಭೋಜನ ಸವಿಯುವ ಶಾ, ಮಧ್ಯಾಹ್ನ 2ರಿಂದ 3 ಗಂಟೆವರೆಗೆ ಸಾರ್ವಜನಿಕ ಸಭೆಯಲ್ಲಿ ಶಾ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮನಗೌಡ ಪರ ಮತಯಾಚಿಸಲಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಜಿಲ್ಲೆಯ 8 ಕ್ಷೇತ್ರಗಳ ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ. ನಂತರ ಶಾ ಅವರು ಯಾದಗಿರಿಗೆ ತೆರಳಲಿದ್ದಾರೆ.

ಇಂದು (ಸೋಮವಾರ) ಚಾಮರಾಜನಗರದ ಗುಂಡ್ಲುಪೇಟೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ರೋಡ್​​ ಶೋ ನಡೆಸಿ ಮತ ಯಾಚನೆ ಮಾಡಿದ್ದಾರೆ. ಜತೆಗೆ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:14 pm, Mon, 24 April 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ