ಪ್ರಚೋದನಕಾರಿ ಭಾಷಣ; ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

|

Updated on: Apr 06, 2023 | 7:50 PM

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಭಾಷಣ; ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು
ಮುನಿರತ್ನ
Follow us on

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆಮಾಡುವಂಥ ಪ್ರಚೋದನಾಕಾರಿ ಭಾಷಣ ಸಚಿವರು ಮಾಡಿದ್ದರು. ತಮಿಳು ಭಾಷಿಕರನ್ನು ಎತ್ತಿಕಟ್ಟಿ ಹಲ್ಲೆ ಮಾಡಲು ಸೂಚನೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಸಚಿವ ಮುನಿರತ್ನ ಮಾಡಿದ್ದು ಎನ್ನಲಾದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದ ಆರ್​ಆರ್​ ನಗರ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದರು. ಇದರ ಮೇರೆಗೆ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಮುನಿರತ್ನಗೆ ಜಾಲಹಳ್ಳಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಇದನ್ನೂ ಓದಿ: Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುನಿರತ್ನ ವಿರುದ್ಧ ಬುಧವಾರ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ‘ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ’ ಎಂದು ಕೋಮು ದ್ವೇಷದ ಹೇಳಿಕೆ ನೀಡಿ ಆ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಅಧಿಕಾರಿ ಮನೋಜ್‌ಕುಮಾರ್ ದೂರು ನೀಡಿದ್ದರು. ಇದರ ಆಧಾರದಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ