ಕಾಂಗ್ರೆಸ್​ಗೆ ಅತಂತ್ರ ಫಲಿತಾಂಶದ ಭಯ: ಆಯ್ಕೆಯಾದ ಕೈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇಂದು ತಡರಾತ್ರಿ ಮೆಗಾ ಪ್ಲಾನ್​

ಕರ್ನಾಟಕ ವಿಧಾನಸಭೆ ಚುನಾವಣೋತ್ತರದ ಕೆಲವು ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ. ಹೀಗಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಳ್ಳುತ್ತಿದೆ.

ಕಾಂಗ್ರೆಸ್​ಗೆ ಅತಂತ್ರ ಫಲಿತಾಂಶದ ಭಯ: ಆಯ್ಕೆಯಾದ ಕೈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇಂದು ತಡರಾತ್ರಿ ಮೆಗಾ ಪ್ಲಾನ್​
ಕಾಂಗ್ರೆಸ್
Follow us
Rakesh Nayak Manchi
|

Updated on:May 11, 2023 | 7:34 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಮುಕ್ತಾಯಗೊಂಡಿದೆ. ಚುನಾವಣೋತ್ತರವಾಗಿ ಪ್ರಕಟಗೊಂಡ ಕೆಲವು ಸಮೀಕ್ಷೆಗಳ (Exit Polls) ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರ ಹಿಡಿಯಲಿದೆ. ಇನ್ನು ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ. ಒಂದೊಮ್ಮೆ ಅತಂತ್ರ ಫಲಿತಾಂಶ ಬಂದು ಆಪರೇಶನ್ ಕಮಲ ನಡೆದು ಕಾಂಗ್ರೆಸ್ (Congress) ಶಾಸಕರು ಬಿಜೆಪಿ ಸೇರಿದರೆ ನಮ್ಮ ಪಕ್ಷದ ಕಥೆ ಏನು ಎಂದು ಚಿಂತೆಗೊಳಲಾದ ಕಾಂಗ್ರೆಸ್ ನಾಯಕರು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಪ್ಲಾನ್ ಮಾಡಲು ಮುಂದಾಗಿದ್ದಾರೆ.

ಅತಂತ್ರ ಫಲಿತಾಂಶದ ಸಾಧ್ಯತೆ ಹಿನ್ನೆಲೆ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾದ ಕಾಂಗ್ರೆಸ್ ನಾಯಕರು, ಇಂದು ತಡರಾತ್ರಿ ಝೂಮ್ ಮೀಟಿಂಗ್ ಮಾಡಲಿದ್ದಾರೆ. ಈ ಆನ್​ಲೈನ್ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಲಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ.

ಕಾಂಗ್ರೆಸ್ ಪಕ್ಷಗೆ ಸ್ಪಷ್ಟ ಬಹುಮತ ಬಾರದಿದ್ದರೆ ಗೆದ್ದವರು ಯಾವುದೇ ಬೇರೆ ಪಕ್ಷದ ಆಮಿಷಗಳಿಗೆ ಒಳಗಾಗದಂತೆ ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಈ ಸಭೆ ನಡೆಸಲಾಗುತ್ತಿದ್ದು, ಈ ವೇಳೆ ಮುಂದಿನ ತಂತ್ರಗಾರಿಕೆ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೂಚ್ಯವಾಗಿ ಸೂಚನೆ ನೀಡಲಿದ್ದಾರೆ. ಒಂದೊಮ್ಮೆ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಕೈಗೊಳ್ಳಬೇಕಾದ ನಿರ್ಧಾರ ಬಗ್ಗೆಯೂ ಕೆಲವು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Exit Polls 2023: ಕರ್ನಾಟಕ ಚುನಾವಣೋತ್ತರ ಸಮೀಕ್ಷೆ ಬಗ್ಗೆ ಯಾರು ಏನು ಹೇಳಿದರು? ಇಲ್ಲಿದೆ ಮಾಹಿತಿ

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಆದರೆ ಮತದಾನದ ನಂತರ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. ಕೆಲವು ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆಯನ್ನು ತೋರಿವೆ. ಇನ್ನಷ್ಟು ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಬಹುದು ಎಂದು ತೋರಿಸಿವೆ. ಇನ್ನೂ ಕೆಲವು, ಕಳೆದ ಚುನಾವಣೆಯಂತೆ ಈ ಬಾರಿಯೂ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ತೋರಿಸಿವೆ.

ಚುನಾವಣೋತ್ತರ ಸಮೀಕ್ಷೆ ಬಹಿರಂಗದ ನಂತರ ಕಾಂಗ್ರೆಸ್ ನಾಯಕರು ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಇತ್ತ ಬಿಜೆಪಿ ನಾಯಕರೂ ಸಮೀಕ್ಷೆ ಏನೇ ಇರಲಿ, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಕಾದು ನೋಡಿರಿ ಎಂದು ಹೇಳುತ್ತಿದ್ದಾರೆ. ಇತ್ತ, ಜೆಡಿಎಸ್ ಸರ್ಕಾರ ರಚಿಸುವ ಬಗ್ಗೆ ಯಾವುದೇ ಮಾತನಾಡದಿದ್ದರೂ, ಅತಂತ್ರ ಫಲಿತಾಂಶ ಬಂದರೆ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Thu, 11 May 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್