Pramod Muthalik: ಶ್ರೀಕಂಠೇಶ್ವರಸ್ವಾಮಿ ದೇಗುಲದ ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ಬಳಸುವುದು ನಿಯಮ ಬಾಹಿರ: ಪ್ರಮೋದ್ ಮುತಾಲಿಕ್

ಶ್ರೀಕಂಠೇಶ್ವರಸ್ವಾಮಿ ದೇಗುಲದ ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ಬಳಕೆಗೆ ಮುಂದಾಗಿರುವುದನ್ನು ಖಂಡಿಸಿದ ಪ್ರಮೋದ್ ಮುತಾಲಿಕ್, ಅಕ್ರಮ ಗೋಸಾಗಾಟಗಾರರ ಪರ ನಿಂತಿರುವ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಬೇಲೂರಿನಲ್ಲಿ ರಥೋತ್ಸವ ವೇಳೆ ಕುರಾನ್ ಪಠಣಕ್ಕೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದರು. ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಏನು ಹೇಳಿದರು?

Pramod Muthalik: ಶ್ರೀಕಂಠೇಶ್ವರಸ್ವಾಮಿ ದೇಗುಲದ ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ಬಳಸುವುದು ನಿಯಮ ಬಾಹಿರ: ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
Follow us
Rakesh Nayak Manchi
|

Updated on:Apr 05, 2023 | 9:11 PM

ಮೈಸೂರು: ಶ್ರೀಕಂಠೇಶ್ವರಸ್ವಾಮಿ ದೇಗುಲದ ಹುಂಡಿ ಹಣವನ್ನು ಶಾದಿಮಹಲ್ (Shadimahal) ನಿರ್ಮಾಣಕ್ಕೆ ಬಳಕೆಗೆ ಮುಂದಾಗಿದ್ದು ಖಂಡನೀಯ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ಬಳಕೆ ಮಾಡುವುದು ಸರಿಯಲ್ಲ. ಇದು ಧಾರ್ಮಿಕ ದತ್ತಿ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿದೆ. ಯಾವುದೇ ಕಾರಣಕ್ಕೂ ದೇಗುಲದ ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ನೀಡಬಾರದು. ದೇವಾಲಯದ ಹುಂಡಿ ಹಣವನ್ನು ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಅಕ್ರಮವಾಗಿ ಗೋವು ಸಾಗಾಟ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ ಮುತಾಲಿಕ್, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್​ಐಆರ್ ದಾಖಲಿಸಿರುವ ಕ್ರಮ ಸರಿಯಲ್ಲ. ವಿಪಕ್ಷ ನಾಯಕರು ಗೋಸಾಗಾಟ ಮಾಡುತ್ತಿದ್ದವರ ಪರ ನಿಂತಿದ್ದಾರೆ. ಅಕ್ರಮ ಗೋಸಾಗಾಟ ತಡೆಯಲು ಮುಂದಾದವರ ಪರ ನಿಲ್ಲಬೇಕು ಎಂದರು.

ಇದನ್ನೂ ಓದಿ: ಗೋ ಸಾಗಾಟ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು: ರಾಜಸ್ಥಾನದಲ್ಲಿ ಪುನೀತ್ ‌ಕೆರೆಹಳ್ಳಿ ಬಂಧನ

ರಾಮನಗರದ ಕನಪುರದ ಸಾತನೂರು ಬಳಿ ಗೋ ಸಾಗಾಟ ವೇಳೆ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ‌ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 31 ರಂದು ಪುನೀತ್ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತದ್ದ ಕ್ಯಾಂಟರ್​ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಆದ್ರೆ, ಮಾರನೇ ದಿನ ಅಂದ್ರೆ ಏಪ್ರಿಲ್​ 1ರಂದು ಕ್ಯಾಂಟರ್​ನಲ್ಲಿದ್ದ ಇದ್ರೀಷ್ ಪಾಷ ಶವವಾಗಿ ಪತ್ತೆಯಾಗಿದ್ದರು. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಸಾತನೂರು ‌ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು.

ರಥೋತ್ಸವ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ

ಹಾಸನ ಜಿಲ್ಲೆ ಬೇಲೂರಿನಲ್ಲಿ ರಥೋತ್ಸವ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದ ಮುತಾಲಿಕ್, ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಜಿಲ್ಲಾಡಳಿತವು ಅವಕಾಶ ಮಾಡಿಕೊಟ್ಟಿದೆ. ಚುನಾವಣೆ ದೃಷ್ಟಿಯಿಂದ ಕುರಾನ್ ಪಠಣಕ್ಕೆ ಒತ್ತಡ ಹೇರಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಹಾಗಾಗಿ ಹಾಸನ ಜಿಲ್ಲಾಡಳಿತ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಥೋತ್ಸವದ ಸಂದರ್ಭದಲ್ಲಿ, ರಥದ ಎದುರು ಖುರಾನ್​ ಪಠಣ ಮಾಡುವ ವಿಚಾರವಾಗಿ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ತೀವ್ರ ವಿರೋಧದ ನಡುವೆಯೂ ಬಿಗಿ ಪೊಲೀಸ್​ ಭದ್ರತೆ ನಡುವೆ ಸಂಪ್ರದಾಯದಂತೆ ದೇವಸ್ಥಾನದ ಮೆಟ್ಟಿಲಿನ ಸಮೀಪ, ದೊಡ್ಡಮೇದೂರು ಗ್ರಾಮದ ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ ಅವರು ಕುರಾನ್ ಪಠಣ ಮಾಡಿದ್ದಾರೆ. ಬಳಿಕ ಭಕ್ತರು ಚನ್ನಕೇಶವಸ್ವಾಮಿ ರಥವನ್ನು ಎಳೆದಿದ್ದಾರೆ. ಆದರೆ, ಕುರಾನ್​ ಪಠಣ ಮಾಡಿದ್ದಾರೋ ಅಥವಾ ಇಲ್ಲವೋ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಾರಿ ರಥದ ಬದಲಿಗೆ ದೇಗುಲದ ಮೆಟ್ಟಿಲು ಮೇಲೆ ನಿಂತು ಖುರಾನ್ ಓದಲು ಅವಕಾಶ ಮಾಡಿಕೊಡಲಾಗಿತ್ತು.

ಕಾರ್ಕಳ ಕ್ಷೇತ್ರದಿಂದಲೇ ಸ್ಪರ್ಧೆ: ಪ್ರಮೋದ್ ಮುತಾಲಿಕ್

ಸಚಿವ ಸುನಿಲ್ ಕ್ಷೇತ್ರವಾಗಿರುವ ಉಡುಪಿ ಜಿಲ್ಲೆ ಕಾರ್ಕಳ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವುದಾಗಿ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ. ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕಾರ್ಕಳ ಕ್ಷೇತ್ರದಲ್ಲಿ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ. ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೇನೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Wed, 5 April 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ