ಎಕ್ಸಿಟ್ ಪೋಲ್ಗಳು ಪೂರ್ಣ ಸರಿಯಾಗಿರುವುದಿಲ್ಲ; ಸಿಎಂ ಬಸವರಾಜ ಬೊಮ್ಮಾಯಿ
ಎಕ್ಸಿಟ್ ಪೋಲ್ಗಳು ಶೇ 100ರಷ್ಟು ಸರಿಯಾಗಿ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ: ಎಕ್ಸಿಟ್ ಪೋಲ್ಗಳು ಶೇ 100ರಷ್ಟು ಸರಿಯಾಗಿ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾಂವಿ ಪಟ್ಟಣದಲ್ಲಿ ಬುಧವಾರ ಸಂಜೆ ಮಾತನಾಡಿದ ಅವರು, ಮತಗಟ್ಟೆ ಸಮೀಕ್ಷೆಗಳು (Exit Poll) ಪೂರ್ಣವಾಗಿ ಸರಿಯಾಗಿರುತ್ತವೆ ಎನ್ನಲಾಗದು. ನಿಜವಾದ ಫಲಿತಾಶ ಬರುವಾಗ ಪ್ಲಸ್ ಇರುವುದು ಮೈನಸ್, ಮೈನಸ್ ಇರುವುದು ಪ್ಲಸ್ ಆಗುತ್ತದೆ. ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಎಕ್ಸಿಟ್ ಪೋಲ್ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಗೆ ಬಹುಮತ ಸಿಗುತ್ತದೆ. ಹಾಗಾಗಿ ಯಾವುದೇ ರೆಸಾರ್ಟ್ ರಾಜಕೀಯ ಮಾಡಬೇಕಾದ ಪ್ರಶ್ನೆಯೇ ಇರುವುದಿಲ್ಲ. ಮೇ 13 ರ ಫಲಿತಾಂಶ ಬರುವ ತನಕ ಕಾದು ನೋಡಿ ಎಂದು ಅವರು ಹೇಳಿದ್ದಾರೆ.
ನಾವೇ ಕಿಂಗ್ ಆಗ್ತೇವೆ. ಜೆಡಿಎಸ್ ಕಿಂಗ್ ಮೇಕರ್ ಆಗುವುದಿಲ್ಲ. ಬಿಜೆಪಿಗೆ ಸಂಪುರ್ಣ ಬಹುಮತ ಸಿಗುವ ವಿಶ್ವಾಸ ಇದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಮಧ್ಯೆ, ಶಿಗ್ಗಾಂವಿ ಕ್ಷೇತ್ರದ ಕಾರ್ಯಕರ್ತರಿಗೆ ಅವರು ಧನ್ಯವಾದ ತಿಳಿಸಿದರು. ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೆ ಬಾರಿ ಆಯ್ಕೆ ಮಾಡಲು ಶ್ರಮಿಸಿದವರಿಗೆ ಧನ್ಯವಾದ ತಿಳಿಸಿ ಕಾರ್ಯಕರ್ತರ ಜೊತೆ ಫೋಟೋ ತೆಗಿಸಿಕೊಂಡು ಸಂತಸದಿಂದ ಕೈ ಕುಲುಕಿದರು.
ರಾಜ್ಯ ವಿಧಾನಸಭಾ ಚುನಾವಣೆ ಪ್ರಯುಕ್ತ ಎಲ್ಲ 224 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬುಧವಾರ ಸಂಜೆ ಮುಕ್ತಾಯಗೊಂಡಿದೆ. ಸಂಜೆ 5 ಗಂಟೆ ಸುಮಾರಿಗೆ ಶೇ 65.69 ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದ್ದು, ಅಂತಿಮ ಲೆಕ್ಕಾಚಾರ ಇನ್ನಷ್ಟೇ ತಿಳಿದುಬರಬೇಕಿದೆ.
ಇದನ್ನೂ ಓದಿ: TV9 CVoter Exit Poll: ಟಿವಿ9 ಸಿವೋಟರ್ ಎಕ್ಸಿಟ್ ಪೋಲ್ ಪ್ರಕಟ; ಯಾವ ಪಕ್ಷಕ್ಕೆ ಹೆಚ್ಚು ಸ್ಥಾನ? ಇಲ್ಲಿದೆ ವಿವರ
ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಪ್ರಕಟಗೊಂಡಿದ್ದು, ವಿವಿಧ ಸಂಸ್ಥೆಗಳು ಕಾಂಗ್ರೆಸ್ಗೆ ಬಹುಮತ ದೊರೆಯುವ ಸುಳಿವು ನೀಡಿದ್ದರೆ ಇನ್ನು ಕೆಲವು ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದಿವೆ. ಟಿವಿ9 ಸಿವೋಟರ್ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್ಗೆ 100 ರಿಂದ 112 ಸ್ಥಾನ ದೊರೆಯುವ ನಿರೀಕ್ಷೆ ಇದ್ದು, ಬಿಜೆಪಿಗೆ 83 ರಿಂದ 95 ಹಾಗೂ ಜೆಡಿಎಸ್ಗೆ 21 ರಿಂದ 29 ಸ್ಥಾನಗಳು ದೊರೆಯುವ ಸಾಧ್ಯತೆ ಇದೆ. ಇತರರು 2 ರಿಂದ 6 ಸ್ಥಾನ ಪಡೆಯುವ ನಿರೀಕ್ಷೆ ಇದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ