Karnataka Politics Highlights: ಸೋನಿಯಾ ನಿವಾಸದಲ್ಲಿ ಸಚಿವರ ಪಟ್ಟಿ ಅಂತಿಮಗೊಳಿಸಿ ಖುಷಿಯಿಂದ ಹೊರಬಂದ ಸಿದ್ದು, ಡಿಕೆ

ಕಿರಣ್ ಹನುಮಂತ್​ ಮಾದಾರ್
| Updated By: Ganapathi Sharma

Updated on:May 19, 2023 | 10:49 PM

Karnataka new government Formation Live Updates: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​ ಅವರು ಪದಗ್ರಹಣ ಮಾಡಲಿದ್ದು, ಸಚಿವ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ. ಈ ಕುರಿತಾದ ಕ್ಷಣ ಕ್ಷಣದ ಮಾಹಿತಿ ಟಿವಿ9 ಡಿಜಿಟಲ್​ನಲ್ಲಿ....

Karnataka Politics Highlights: ಸೋನಿಯಾ ನಿವಾಸದಲ್ಲಿ ಸಚಿವರ ಪಟ್ಟಿ ಅಂತಿಮಗೊಳಿಸಿ ಖುಷಿಯಿಂದ ಹೊರಬಂದ ಸಿದ್ದು, ಡಿಕೆ
ಪ್ರಿಯಾಂಕಾ ಗಾಂಧಿ, ಡಿಕೆ ಶಿವಕುಮಾರ್​, ಸಿದ್ದರಾಮಯ್ಯ, ರಾಹುಲ್​ ಗಾಂಧಿ

ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Result) ಮೇ 13ರಂದು ಪ್ರಕಟವಾಗಿದ್ದು, ಮರುದಿನ ನಡೆದ ಪ್ರಥಮ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಸಭೆಯ ನಿರ್ಣಯದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಕರೆಸಿಕೊಂಡು ಹಲವು ಸುತ್ತಿನ ಸಭೆ ನಡೆಸಿದ್ದರು. ನಾಲ್ಕು ದಿನಗಳ ರಾಜಿ ಸಂಧಾನದ ಮಾತುಕತೆಯು ಸೋನಿಯಾ ಗಾಂಧಿ ಮಧ್ಯ ಪ್ರವೇಶದ ಬಳಿಕ ಸುಖಾಂತ್ಯ ಕಂಡಿದೆ. ಅಧಿಕೃತವಾಗಿ ಗುರುವಾರ ಮಧ್ಯಾಹ್ನ ಸಿದ್ದರಾಮಯ್ಯರನ್ನು ಸಿಎಂ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಎಂದು​ ಘೋಷಿಸಲಾಯಿತು. ಜೋಡೆತ್ತುಗಳು ನಾಳೆ (ಮೇ.20) ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಸಚಿವ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ.

LIVE NEWS & UPDATES

The liveblog has ended.
  • 19 May 2023 08:53 PM (IST)

    Karnataka Politics Live: ಸಚಿವರ ಪಟ್ಟಿ ಫೈನಲ್; ಇಂದಿರಾ ಗಾಂಧಿ ನಿವಾಸದಿಂದ ಖುಷ್ ಖುಷಿಯಾಗಿ ಹೊರಬಂದ ಸಿದ್ದು-ಡಿಕೆ

    ಸೋನಿಯಾ ಗಾಂಧಿ ನಿವಾಸದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಸಭೆ ಮುಗಿಸಿ ತೆರಳಿದ್ದಾರೆ. ಸಚಿವರ ಪಟ್ಟಿ ಅಂತಿಮಗೊಳಿಸುವ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸಭೆ ಇದಾಗಿದೆ.

  • 19 May 2023 06:09 PM (IST)

    Karnataka Politics Live: ಕಿಸಾನ್ ಘಟಕದಿಂದ ಗೆದ್ದ ಮೂವರು ಶಾಸಕರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಶಿವಮೂರ್ತಿ ಶಿವಾಚಾರ್ಯಶ್ರೀ ಆಗ್ರಹ

    ಬೆಂಗಳೂರು: ಕಿಸಾನ್ ಘಟಕದಿಂದ ಗೆದ್ದ ಮೂವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಚಿವ ಸಂಪುಟದಲ್ಲಿ ರೈತ ಪ್ರತಿನಿಧಿಗಳಿಗೆ ಅವಕಾಶ ನೀಡುವಂತೆ ಕಾಂಗ್ರೆಸ್​ ಕಿಸಾನ್​ ಘಟಕದವರು ಆಗ್ರಹಿಸಿದ್ದಾರೆ. ಇನ್ನು ಕಿಸಾನ್ ಘಟಕದ ಕೂಗಿಗೆ ಶಿವಮೂರ್ತಿ ಶಿವಾಚಾರ್ಯಶ್ರೀ ದನಿಗೂಡಿಸಿದ್ದಾರೆ. ರೈತರ ಹೆಸರಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವಂತೆ ಶಿವಮೂರ್ತಿಶ್ರೀ ಆಗ್ರಹ ಮಾಡಿದ್ದಾರೆ.

  • 19 May 2023 05:51 PM (IST)

    Karnataka Politics Live: ಸಚಿವರ ಪಟ್ಟಿ ಕುರಿತು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ ನಿವಾಸದಲ್ಲಿ ಮೀಟಿಂಗ್

    ದೆಹಲಿ: ಸಚಿವರ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್‌ ನಾಯಕರ ಕಸರತ್ತು ನಡೆಸುತ್ತಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಮಹತ್ವದ ಸಭೆಯಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಭಾಗಿಯಾಗಿದ್ದು, ಸಿದ್ದರಾಮಯ್ಯ, ಡಿಕೆಶಿ ಜೊತೆ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಿದ್ದಾರೆ.

  • 19 May 2023 05:26 PM (IST)

    Karnataka Politics Live: ಶಾಸಕ ವಿನಯ ಕುಲಕರ್ಣಿಗೆ ಸಚಿವ ಸ್ಥಾನ ಆಗ್ರಹಿಸಿ ಬೆಂಬಲಿಗರಿಂದ ಪ್ರತಿಭಟನೆ

    ಧಾರವಾಡ: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದಿದ್ದು, ಕಾಂಗ್ರೆಸ್​ ಬಹುಮತದಿಂದ ಅಧಿಕಾರ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಅದರಂತೆ ನಾಳೆ(ಮೇ.20) ಸಿದ್ದರಾಮಯ್ಯನವರು ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಇದೀಗ  ಧಾರವಾಡದ ಶಾಸಕ ವಿನಯ ಕುಲಕರ್ಣಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನಗರದ ವಿವೇಕಾನಂದ ವೃತ್ತದಲ್ಲಿ ನೂರಾರು ಬೆಂಬಲಿಗರಿಂದ ಪ್ರತಿಭಟನೆ ನಡೆಸಿದ್ದು, ಸಚಿವ ಸ್ಥಾನ ಕೊಡಲೇಬೇಕೆಂದು ಘೋಷಣೆ ಕೂಗಿದ್ದಾರೆ.

  • 19 May 2023 05:01 PM (IST)

    Karnataka Politics Live: ನಾಳೆ ಸಿಎಂ, ಡಿಸಿಎಂ ಪದಗ್ರಹಣ; ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ 8 ಸಿಎಂಗಳು

    ಬೆಂಗಳೂರು: ನಾಳೆ  ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್​ ಪದಗ್ರಹಣ ಮಾಡುತ್ತಿದ್ದು, ಈ ವೇಳೆ ಪ್ರಮಾಣವಚನ ಸಮಾರಂಭದಲ್ಲಿ 8 ಸಿಎಂಗಳು  ಪಾಲ್ಗೊಳ್ಳಲಿದ್ದಾರೆ. ಹೌದು ನಾಳೆ ಮಧ್ಯಾಹ್ನ 12.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ  ಪಶ್ಚಿಮಬಂಗಾಳ ಸಿಎಂ ಮಮತಾ, ರಾಜಸ್ಥಾನ ಸಿಎಂ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲ ಪ್ರದೇಶ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಭಾಗಿ

  • 19 May 2023 04:39 PM (IST)

    Karnataka Politics Live: ವಿದ್ಯಾರ್ಥಿಗಳಿಗೆ ಸಹಾಯ ಬೇಕಿದ್ದಲ್ಲಿ ಪೊಲೀಸರನ್ನು ಸಂಪರ್ಕಿಸಲು ಕೋರಿಕೆ

    ಬೆಂಗಳೂರು: ನಾಳೆ ಸಿಎಂ, ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮವನ್ನ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನಲೆ ಸಮಾರಂಭ ಸ್ಥಳಕ್ಕೆ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತು, ಬೆಂಕಿಪೊಟ್ಟಣ, ಲೈಟರ್ ಇತ್ಯಾದಿ ವಸ್ತಗಳನ್ನು ಕೊಂಡೊಯ್ಯಬಾರದು, ಜೊತೆಗೆ ಸವಾರರು ಸಂಚಾರ ಪೊಲೀಸರು ನೀಡುವ ಸೂಚನೆ ಪಾಲಿಸಬೇಕು. ಇನ್ನು  ಮುಖ್ಯ ಕೆಲಸಗಳಿಗೆ ಹೋಗುವವರು ಮೊದಲೇ ತೆರಳುವಂತೆ ಮನವಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳುವವರು ಮುಂಚಿತವಾಗಿ ತೆರಳಲು ಮನವಿ ಮಾಡಿದ್ದು, ವಿದ್ಯಾರ್ಥಿಗಳಿಗೆ ಸಹಾಯ ಬೇಕಿದ್ದಲ್ಲಿ ಪೊಲೀಸರನ್ನು ಸಂಪರ್ಕಿಸಲು ಕೋರಿಕೊಳ್ಳಲಾಗಿದೆ.

  • 19 May 2023 04:31 PM (IST)

    Karnataka Politics Live: ವಿಧಾನಸಭಾ ಚುನಾವಣೆಯಲ್ಲಿ ಸೋಲು ಹಿನ್ನೆಲೆ; ಮೇ 21ರಂದು ಅವಲೋಕ‌ನಾ ಸಭೆ ಕರೆದ ಬಿಜೆಪಿ

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಹಿನ್ನೆಲೆ, ಮೇ 21 ರಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕ‌ನಾ ಸಭೆ ಕರೆದಿದೆ. ಭಾನುವಾರ ಸಂಜೆ 4 ಗಂಟೆಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷರು, ವಿಭಾಗ ಉಸ್ತುವಾರಿಗಳು, ಸಹ ಉಸ್ತುವಾರಿಗಳು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಹ ಸಂಘಟನಾ ಕಾರ್ಯದರ್ಶಿಗಳು ಅವಲೋಕ‌ನಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

  • 19 May 2023 04:28 PM (IST)

    Karnataka Politics Live: ವೃತ್ತಿಪರ ಕೋರ್ಸ್​ಗಳಿಗೆ ನಾಳೆ ಬೆಳಗ್ಗೆ 9 ಗಂಟೆಯೊಳಗೆ ತೆರಳುವಂತೆ ಡಿಕೆ ಶಿವಕುಮಾರ್ ಮನವಿ

    ಬೆಂಗಳೂರು: ವೃತ್ತಿಪರ ಕೋರ್ಸ್​ಗಳಿಗೆ ನಾಳೆ ಬೆಳಗ್ಗೆ 9 ಗಂಟೆಯೊಳಗೆ ತೆರಳುವಂತೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಹೌದು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸರ್ವಾನುಮತದಿಂದ ಕಾಂಗ್ರೆಸ್​ ಗೆದ್ದು ಬಂದಿದ್ದು, ನಾಳೆ (ಮೇ.20) ಸಿದ್ದರಾಮಯ್ಯನವರು ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನುಇದೇ ಸಂದರ್ಭದಲ್ಲಿ ವೃತ್ತಿಪರ ಕೋರ್ಸ್​ಗಳಿಗೆ ನಾಳೆ ಪ್ರವೇಶ ಪರೀಕ್ಷೆಯಿದ್ದು,  ಈ ಹಿನ್ನಲೆ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯೊಳಗೆ ತೆರಳುವಂತೆ ದೆಹಲಿಯಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್​ ಮನವಿ ಮಾಡಿದ್ದಾರೆ. ಜೊತೆಗೆ ಕಂಠೀರವ ಕ್ರೀಡಾಂಗಣ ಬಳಿಯ ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸೂಚನೆ ನೀಡಿದ್ದು,  ಕಾಲೇಜು ಆಡಳಿತ ಮಂಡಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

  • 19 May 2023 04:14 PM (IST)

    Karnataka Politics Live: ನಾಳೆ ಸಿಎಂ, ಡಿಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನಲೆ; ವಾಹನ ಸಂಚಾರ ಬದಲಾವಣೆ

    ಬೆಂಗಳೂರು: ನಾಳೆ ಸಿಎಂ, ಡಿಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನಲೆ ವಾಹನ ಸಂಚಾರ ಬದಲಾವಣೆಯಾಗಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯುತ್ತಿದ್ದು, ಪ್ರತಿಜ್ಞಾವಿಧಿ ಕಾರ್ಯಕ್ರಮ ಹಿನ್ನೆಲೆ ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಕೆಲ ರಸ್ತೆಗಳಲ್ಲಿ ಬಂದ್ ಆಗಲಿದೆ.

    ಸಂಚಾರ ಬದಲಾವಣೆ ಕುರಿತು ಸಂಪೂರ್ಣ ಮಾಹಿತಿ ನೋಡಲು ಇಲ್ಲಿ ಕ್ಲಿಕ್ ಮಾಡಿ

  • 19 May 2023 03:49 PM (IST)

    Karnataka Politics Live: ಪ್ರದೀಪ್​ ಈಶ್ವರ್​ಗೆ ಸಚಿವ ಸ್ಥಾನ ನೀಡಬೇಕೆಂದು ಬಲಿಜ ವಕೀಲರ ವೇದಿಕೆಯಿಂದ ಸಿದ್ದರಾಮಯ್ಯಗೆ ಪತ್ರ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್​ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿದ್ದು, ನಾಳೆ(ಮೇ.20) ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಂತೆ ಚಿಕ್ಕಬಳ್ಳಾಪುರದಲ್ಲಿ ಘಟಾನುಘಟಿ ನಾಯಕ ಡಾ. ಸುಧಾಕರ್​ ಅವರನ್ನ ಸೋಲಿಸಿದ್ದ ಪ್ರದೀಪ್​ ಈಶ್ವರ್​ಗೆ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ  ಬಲಿಜ ವಕೀಲರ ವೇದಿಕೆಯಿಂದ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಹೌದು ‘ರಾಜ್ಯಕ್ಕೆ ಪ್ರದೀಪ್ ಈಶ್ವರ್ ಅಯ್ಯರ್​ ಸೇವೆ ಅಗತ್ಯವಿದೆ ಎಂದು ಇದರಲ್ಲಿ ಬರೆಯಲಾಗಿದೆ.

  • 19 May 2023 03:14 PM (IST)

    Karnataka Politics Live: ನಾಳಿನ ಪ್ರಮಾಣವಚನ ಕಾರ್ಯಕ್ರಮಕ್ಕೆ ಅಡ್ಡಿಯಾಗುತ್ತಾ ಮಳೆ?

    ಬೆಂಗಳೂರು: ನಾಳೆ (ಮೇ.20) ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಕಂಠೀರವ ಕ್ರೀಡಾಂಗಣ ರೆಡಿಯಾಗಿದ್ದು, ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ​​ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಿರುವ ಪೊಲೀಸರು, 2 ಗೇಟ್​​​ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ನಾಳೆ(ಮೇ.20) ರಾಜಧಾನಿಯಲ್ಲಿ ಮಳೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.  9೦೦ ಮೀಟರ್ ಸಮುದ್ರ ಮಟ್ಟದಿಂದ ಉತ್ತರ ಪ್ರದೇಶದಲ್ಲಿ ವಾಯು ಭಾರ ಕುಸಿತವಾಗಿದ್ದು, ಈ ಹಿನ್ನಲೆ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಐದು ದಿನಗಳ ಮಳೆಯಾಗಲಿದೆ. ನಾಳಿನ ಸಿಎಂ ಪ್ರಮಾಣ ವಚನಕ್ಕೆ ನೆರೆ ರಾಜ್ಯಗಳ ಸಿಎಂಗಳಿಗೆ ಆಹ್ವಾನ ‌ಹಿನ್ನಲೆ ತಮಿಳುನಾಡು ಸಿಎಂ ಬೆಂಗಳೂರಿನ ವೆದರ್ ಫೋರ್ಕ್ಯಾಸ್ಟ್ ಕೇಳಿದ್ದಾರೆ.  ನಾಳೆ ಮಧ್ಯಾಹ್ನದ ನಂತರ ಸಾಧಾರಣ ಮಳೆ ಸಾಧ್ಯತೆಯಿದ್ದು, ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಟಿವಿ9 ಗೆ ಮಾಹಿತಿ ನೀಡಿದೆ.

  • 19 May 2023 03:05 PM (IST)

    Karnataka Politics Live: ಬಿಕೆ ಹರಿಪ್ರಸಾದ್​ರನ್ನ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿ; ಮಾಜಿ ಸಚಿವ ಅಭಯಚಂದ್ರ ಜೈನ್

    ಮಂಗಳೂರು: ಬಿ.ಕೆ.ಹರಿಪ್ರಸಾದ್​​ಗೆ ಗೃಹಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡಿ, ಜೊತೆಗೆ ಯು.ಟಿ.ಖಾದರ್​​​ಗೂ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್​ನಲ್ಲಿ ನಾಯಕತ್ವ ಕೊರತೆ ಇದೆ. ಮೊಯ್ಲಿ, ಆಸ್ಕರ್​​, ಜನಾರ್ದನ ಪೂಜಾರಿಯಂತಹ ನಾಯಕತ್ವ ಬೇಕಿದೆ. ಹೈಕಮಾಂಡ್​​, ಪಕ್ಷದ ನಾಯಕರು ಈ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.

  • 19 May 2023 02:36 PM (IST)

    Karnataka Politics Live: ವೀರಶೈವ ಲಿಂಗಾಯತ ಸಮುದಾಯವನ್ನ ಮೆಟ್ಟಿಲು ಮಾಡಿಕೊಂಡು ಕಾಂಗ್ರೆಸ್​ ಅಧಿಕಾರಕ್ಕೆ; ಶಾಸಕ ವಿಜಯೇಂದ್ರ ಟ್ವೀಟ್

    ಬೆಂಗಳೂರು: ‘ಅಧಿಕಾರಕ್ಕೆ ಬರಲು ವೀರಶೈವ ಲಿಂಗಾಯತ ಸಮುದಾಯವನ್ನ ಮೆಟ್ಟಿಲಾಗಿಸಿಕೊಂಡು, ಈಗ ಕಾಂಗ್ರೆಸ್ ಮರೆತಿದೆ, ಜೊತೆಗೆ ಸಮುದಾಯದ ಹಿರಿಯ ನಾಯಕರೂ ಈಗ ಮೌನ ತಾಳಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಶಾಸಕ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ 39 ಶಾಸಕರು ಗೆದ್ದಿದ್ದರೂ, ಉನ್ನತ ಸ್ಥಾನ ಕೇಳುವಲ್ಲಿ ಸಮುದಾಯದಿಂದ ಗಟ್ಟಿ ಧ್ವನಿ ಕೇಳಿಸುತ್ತಿಲ್ಲ. ಈಗ ಕಾಂಗ್ರೆಸ್ ಮುಖವಾಡ ಶಾಶ್ವತವಾಗಿ ಕಳಚಿ ಬಿದ್ದಿದೆ. ಸಮುದಾಯವನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಂಡಿದೆ ಎಂದರು. ಅಲ್ಲದೇ ಸಮುದಾಯಕ್ಕೆ ನ್ಯಾಯ ಕೊಡದೆ ವಂಚಿಸಿದೆ. ಬಿಜೆಪಿ ಒಂದೇ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಿದ್ದು, ಬಸವಣ್ಣನ ಆಶಯಗಳಿಗೆ ತಕ್ಕಂತೆ ನ್ಯಾಯ ಒದಗಿಸುವ ಪಕ್ಷವಾಗಿದೆ. ರಾಜ್ಯದ ಜನತೆ ಮತ್ತೆ ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸ ಇದೆ ಎಂದು ಟ್ವೀಟ್​ ಮಾಡಿದ್ದಾರೆ.

    ​​

  • 19 May 2023 02:26 PM (IST)

    Karnataka Politics Live: ದೂರು ಬಂದಾಗ ತನಿಖೆ ಮಾಡಬೇಕು, ಹೊಡೆಯೋ ಅಧಿಕಾರ ಇಲ್ಲ: ಯತ್ನಾಳ್

    ಮಂಗಳೂರು: ಪೊಲೀಸರ ಅಮಾನವೀಯ ಕೃತ್ಯ ಸಮಾಜವೇ ತಲೆ ತಗ್ಗಿಸುವಂಥದ್ದು. ಯಾವುದೇ ಆರೋಪಿಗಳನ್ನು ಥಳಿಸುವ ಹಕ್ಕು ಪೊಲೀಸರಿಗೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಡಿವೈಎಸ್​ಪಿ ಕೊಠಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಥಳಿಸಲಾಗಿದೆ. ಇವರು ತಾಲಿಬಾನಿಗಳಲ್ಲ, ದೇಶದ್ರೋಹದ ಕೆಲಸ ಮಾಡಿದವರಲ್ಲ. ಇಂತಹ ಕೃತ್ಯ ಪೊಲೀಸ್ ಇಲಾಖೆಗೆ ಗೌರವ ತರುವ ಕೆಲಸವಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆ, ಟಿಪ್ಪಣಿ, ಹೋರಾಟ, ಸಂಘರ್ಷ ಇರುತ್ತದೆ. ಆದರೆ ದೂರು ಬಂದಾಗ ತನಿಖೆ ಮಾಡಬೇಕು, ಹೊಡೆಯೋ ಅಧಿಕಾರ ಇಲ್ಲ. ಈ ಬಗ್ಗೆ ತನಿಖೆ ಆಗಬೇಕು, ಕೆಳ ಹಂತದ ಸಿಬ್ಬಂದಿ ಜೊತೆ ಡಿವೈಎಸ್ಪಿ ಮೇಲೂ ಕ್ರಮ ಆಗಬೇಕು. ಕಾಂಗ್ರೆಸ್ ಸರ್ಕಾರ ನಾಳೆಯಿಂದ ರಾಜ್ಯದಲ್ಲಿ ಬರ್ತಾ ಇದೆ.

  • 19 May 2023 02:02 PM (IST)

    Karnataka Politics Live: ಜಮೀರ್​ ಅಹ್ಮದ್​​ಗೆ ಸಚಿವ ಸ್ಥಾನ ನೀಡಬಾರದು: ನವಭಾರತ ಸೇನಾ ಪಕ್ಷದ ಸಂಚಾಲಕ

    ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್​ ಅವರಿಗೆ ಸಚಿವ ಸ್ಥಾನ ನೀಡಬಾರದು, ನೀಡಿದರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ನವಭಾರತ ಸೇನಾ ಪಕ್ಷದ ಸಂಚಾಲಕ ರುಕ್ಮಾಂಗದ ಆಗ್ರಹಿಸಿದ್ದಾರೆ. ಶಾಸಕ ಜಮೀರ್​​​ ನಾಮಪತ್ರದಲ್ಲಿ ಹಲವು ದೋಷಗಳಿವೆ. ಈಗಾಗಲೇ ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಚಾಮರಾಜಪೇಟೆ ಆರ್​​​ಒ ಹಸನ್​​​ಗೆ ದೂರು ನೀಡಿದರೂ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳ ಕೋರ್ಟ್​ನಲ್ಲಿ ಪ್ರಕರಣ ದಾಖಲಿಸುತ್ತೇವೆ. ಜಮಿರ್​ಗೆ ಸಚಿವ ಸ್ಥಾನ ಕೊಟ್ಟರೇ ಪ್ರಭಾವ ಬಳಸಿ ಕೇಸ್ ಮುಚ್ಚಿ ಹಾಕುತ್ತಾರೆ ಎಂದರು.

  • 19 May 2023 01:27 PM (IST)

    Karnataka Politics Live: ಮಲ್ಲಿಕಾರ್ಜುನ​​ ಖರ್ಗೆಯನ್ನ ಭೇಟಿಯಾದ ಪ್ರಣವಾನಂದ ಸ್ವಾಮೀಜಿ

     ದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ​​ ಖರ್ಗೆನಿವಾಸಕ್ಕೆ ಬ್ರಹ್ಮಶ್ರೀ ನಾರಾಯಣಗುರು ಪೀಠದ ಪ್ರಣವಾನಂದ ಸ್ವಾಮೀಜಿ ಭೇಟಿ ನೀಡಿದ್ದು, ಬಿಲ್ಲವ, ಈಡಿಗ ಸಮುದಾಯದ ಶಾಸಕರಿಗೆ ತಲಾ ಒಂದು ಸ್ಥಾನ ಸಂಪುಟದಲ್ಲಿ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

  • 19 May 2023 12:42 PM (IST)

    Karnataka Politics Live: ಸಚಿವ ಸ್ಥಾನಕ್ಕಾಗಿ ದೆಹಲಿಗೆ ತೆರಳಿದ ಚಿತ್ರದುರ್ಗದ ಶಾಸಕರು

    ಚಿತ್ರದುರ್ಗ: ಜಿಲ್ಲೆಯ 6ಕ್ಷೇತ್ರಗಳಲ್ಲಿ 5ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆ ತಮಗೆ ಸಚಿವ ಸ್ಥಾನ ನೀಡುವಂತೆ ಶಾಸಕರು ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಿರಿಯೂರು ಶಾಸಕ ಡಿ.ಸುಧಾಕರ್, ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ದೆಹಲಿಗೆ ಹೋಗಿದ್ದಾರೆ.

  • 19 May 2023 12:08 PM (IST)

    Karnataka Politics Live: ಅಣ್ಣ ಮುಖ್ಯಮಂತ್ರಿ ಆಗಿದ್ದರೆ ಇನ್ನೂ ಸಂತೋಷವಾಗುತ್ತಿತ್ತು: ಡಿಕೆ ಶಿವಕುಮಾರ್ ಸಹೋದರಿ

    ಬೆಂಗಳೂರು: ಡಿಕೆ ಶಿವಕುಮಾರ್ ಅವರು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಅಣ್ಣ ಮುಖ್ಯಮಂತ್ರಿ ಆಗಲು ಸಾಕಷ್ಟು ಶ್ರಮ ಹಾಕಿದರು. ಆದರೆ ಉಪಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ಅಣ್ಣ ಮುಖ್ಯಮಂತ್ರಿ ಆಗಿದ್ದರೆ ಇನ್ನೂ ಸಂತೋಷವಾಗುತ್ತಿತ್ತು ಈಗಲೂ ಖುಷಿ ಇದೆ. ಸಣ್ಣ ವಯಸ್ಸಿನಿಂದಲೂ ಸಾಕಷ್ಟು ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಹೋರಾಟದಿಂದಲೇ ಮೇಲೆ ಬಂದಿದ್ದಾರೆ. ಅವರು ಫ್ಯಾಮಿಲಿ ಮತ್ತು ವೈಯಕ್ತಿಕ ಜೀವನಕ್ಕೆ ಸಮಯವನ್ನು ಕೊಟ್ಟಿಲ್ಲ. ಅವರು ಜೈಲಿಗೆ ಹೋದ ಘಟನೆಯನ್ನು ಮರೆಯಲು ಆಗಲ್ಲ. ಆದರೂ ಛಲ ಬಿಡದೆ ಹೋರಾಟವನ್ನು  ಮಾಡಿ ಈ ಹಂತಕ್ಕೆ ಬಂದಿದ್ದಾರೆ ಎಂದು ಡಿಕೆ ಶಿವಕುಮಾರ್ ಬಗ್ಗೆ ಸಹೋದರಿ ಮಂಜುಳಾ ಬಾವುಕರಾಗಿ ಹೇಳಿದ್ದಾರೆ.

  • 19 May 2023 11:55 AM (IST)

    Karnataka Politics Live: ಮೇ.20 ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್

    ಬೆಂಗಳೂರು: ನಾಳೆ (ಮೇ.20) ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ​​ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಿರುವ ಪೊಲೀಸರು, 2 ಗೇಟ್​​​ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಕಮಿಷನರ್, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. 8 ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್​ಗಳು, 1,500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.

  • 19 May 2023 11:48 AM (IST)

    Karnataka Politics: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ; ಅಜಯ್ ಸಿಂಗ್

    ದೆಹಲಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಚಿವ ಸ್ಥಾನ ಸಿಗುತ್ತೆ ಎಂಬ ವಿಶ್ವಾಸವಿದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೂ ಮನವಿ ಮಾಡಿದ್ದೇನೆ ಎಂದು ದೆಹಲಿಯಲ್ಲಿ ಶಾಸಕ ಅಜಯ್ ಸಿಂಗ್ ಹೇಳಿದ್ದಾರೆ.

  • 19 May 2023 11:40 AM (IST)

    Karnataka Politics Live: ನಾನು ಯಾರಿಗೂ ಉಪಮುಖ್ಯಮಂತ್ರಿ  ಸ್ಥಾನ ಕೊಡಿ ಅಂತ ಮಾತಾಡಿಲ್ಲ: ಪರಮೇಶ್ವರ

    ಬೆಂಗಳೂರು: ನಾನು ಯಾರಿಗೂ ಉಪಮುಖ್ಯಮಂತ್ರಿ  ಸ್ಥಾನ ಕೊಡಿ ಅಂತ ಮಾತಾಡಿಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಅವರ ಬೇರೆ ನಿಲುವು ಸರಿಯಾಗಿದೆ. ಎಲ್ಲಾವು ಒಳ್ಳೆಯದಾಗಿ ಕಾಣಿಸುತ್ತಿದೆ. ನಾವು ಜನರಿಗೆ ಏನು ಭರವಸೆ ನೀಡಿದ್ದೇವೆ ಅದನ್ನ ಇಡೇರಿಸಬೇಕು. ಜನ ಹೇಳುವುದು ನಾವು ಹೇಳುವುದು ಮುಖ್ಯ ಅಲ್ಲ. ನಿನ್ನೆ ಸಿದ್ದರಾಮಯ್ಯರನ್ನು ವಿಶ್​​ ಮಾಡುವುದಕ್ಕೆ ಹೋಗಿದ್ದೆ ಎಂದು ದ್ದರಾಮಯ್ಯ ನಿವಾಸದಲ್ಲಿ ಡಾ ಜಿ ಪರಮೇಶ್ವರ್ ಹೇಳಿದರು.

  • 19 May 2023 11:14 AM (IST)

    Karnataka Politics Live: ಸಿದ್ದರಾಮಯ್ಯಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ

    ಚಾಮರಾಜನಗರ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸಲಿ ಎಂದು ನಗರದ ಚಾಮರಾಜೇಶ್ವರ ದೇವಾಲಯದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಮಾಡಿಸಿದ್ದಾರೆ.  ಸಿದ್ದರಾಮಯ್ಯ ಅವರಿಗೆ ಆರೋಗ್ಯ, ಐಶ್ವರ್ಯ, ನೆಮ್ಮದಿ ಎಲ್ಲವನ್ನೂ ದೇವರು ಕರುಣಿಸಲಿ. ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

  • 19 May 2023 11:05 AM (IST)

    Karnataka Politics Live: ದೆಹಲಿಗೆ ತೆರಳಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​

    ಬೆಂಗಳೂರು: ಸಂಪುಟ ರಚನೆ ಕಸರತ್ತು ನಡೆದಿದ್ದು, ಯಾರಿಗೆಲ್ಲ ಸಚಿವ ಆಕಾಂಕ್ಷಿಗಳ ಪಟ್ಟಿ ಹಿಡಿದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

  • 19 May 2023 10:33 AM (IST)

    Karnataka Politics Live: ಪದಗ್ರಹಣ ಕಾರ್ಯಕ್ರಮದ ಸಿದ್ದತೆ ವೀಕ್ಷಿಸಿದ ಡಿಕೆ ಶಿವಕುಮಾರ್​

    ಬೆಂಗಳೂರು: ನಾಳೆ (ಮೇ.20) ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಪದಗ್ರಹಣ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಬಂದಿದ್ದೆ. ಹಲವು ರಾಜ್ಯಗಳ ಸಿಎಂಗಳು, ಗಣ್ಯರು ಕಾರ್ಯಕ್ರಮಕ್ಕೆ ಬರಲಿದ್ದಾರೆ. ನಾಳೆಯ ಪದಗ್ರಹಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದವರಿಗೆ ಆಹ್ವಾನ ನೀಡಲಾಗಿದೆ ಎಂದು ಕಂಠೀರವ ಕ್ರೀಡಾಂಗಣದಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

  • 19 May 2023 10:26 AM (IST)

    Karnataka Politics Live: ಉಪ್ಪಾರ ಸಮಾಜದ ಶಾಸಕರಿಗೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹ

    ಚಿತ್ರದುರ್ಗ: ಉಪ್ಪಾರ ಸಮಾಜದ ಶಾಸಕರಿಗೆ ಮಂತ್ರಿ ಸ್ಥಾನ ನೀಡುವಂತೆ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿರುವ ಭಗೀರಥ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಚಾಮರಾಜನಗರ ಶಾಸಕ, ಹಿಂದುಳಿದ ಸಮುದಾಯದ ಪುಟ್ಟರಂಗಶೆಟ್ಟಿ ಅವರಿಗೆ ಸಂಪುಟ ದರ್ಜೆ, ಉತ್ತಮ‌ ಖಾತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

  • 19 May 2023 10:13 AM (IST)

    Karnataka Politics Live: ಮೇ.20 ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಪದಗ್ರಹಣ

    ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್‌ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಿದ್ದು, ನಾಳೆ ಅಂದರೆ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

  • 19 May 2023 10:05 AM (IST)

    Karnataka Politics Live: ಕೆ ಸುಧಾಕರ್​ ವಿರುದ್ಧ ಹೆಚ್​​.ವಿಶ್ವನಾಥ್ ವಾಗ್ದಾಳಿ

    ಬೆಂಗಳೂರು: ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ’  ಮಾಜಿ ಸಚಿವ ಡಾ. ಕೆ ಸುಧಾಕರ್​ ಆರೋಪಕ್ಕೆ ಎಂಎಲ್​ಸಿ ಹೆಚ್​​.ವಿಶ್ವನಾಥ್​​ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ.ಕೆ.ಸುಧಾಕರ್​​ ಮಾತನಾಡ್ತಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಒಗ್ಗಟ್ಟಿನಿಂದ ಸರ್ಕಾರ ಮುನ್ನಡೆಸುತ್ತಾರೆ. ನಾನು ಕೂಡ ಈ ಸರ್ಕಾರಕ್ಕೆ ಸಲಹೆ ನೀಡುತ್ತೇನೆ. ಬಿಜೆಪಿ ಮಾಡಿದ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು.

  • Published On - May 19,2023 10:01 AM

    Follow us
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
    ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
    ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
    ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್