Devanahalli: ಮಳೆ ಹಿನ್ನೆಲೆ ದೇವನಹಳ್ಳಿಯಲ್ಲಿ ನಡೆಯಬೇಕಿದ್ದ ಅಮಿತ್ ಶಾ ರೋಡ್‌ಶೋ ರದ್ದು

|

Updated on: Apr 21, 2023 | 6:52 PM

ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಮಳೆಯಿಂದಾಗಿ ರದ್ದು ಪಡಿಸಲಾಗಿದೆ.

Devanahalli: ಮಳೆ ಹಿನ್ನೆಲೆ ದೇವನಹಳ್ಳಿಯಲ್ಲಿ ನಡೆಯಬೇಕಿದ್ದ ಅಮಿತ್ ಶಾ ರೋಡ್‌ಶೋ ರದ್ದು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ವಿಜಯಪುರದಲ್ಲಿ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ (roadshow) ಮಳೆಯಿಂದಾಗಿ ರದ್ದು ಪಡಿಸಲಾಗಿದೆ. ಅಮಿತ್ ಶಾ ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ, ಸ್ಥಳಕ್ಕೆ ತೆರಳುವ ಮೊದಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆದರೆ ಮಳೆಯಿಂದಾಗಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯು ರೋಡ್ ಶೋ ರದ್ದುಗೊಳಿಸಲು ನಿರ್ಧರಿಸಿದೆ. ವಿಜಯಪುರ ಬದಲಿಗೆ ಬೆಂಗಳೂರಿನತ್ತ ಅಮಿತ್ ಶಾ ತೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಮಿತ್​ ಶಾ ಬರುತ್ತಾರೆ ಎಂದು ಕಾದಿದ್ದ ಕಾರ್ಯಕರ್ತರಿಗೆ ನಿರಾಸ್​ ಉಂಟಾಗಿದೆ.

ರೋಡ್ ಶೋಗಾಗಿ ಕೇಸರಿಮಯವಾದ ವಿಜಯಪುರ ಪಟ್ಟಣ

ಅಮಿತ್ ಶಾ ಅವರ ಭೇಟಿಗೆ ಮುಂಚಿತವಾಗಿ ದೇವನಹಳ್ಳಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಕೇಸರಿ ಬಣ್ಣದಿಂದ ಕಂಗೊಳಿಸುತ್ತಿತ್ತು. ರಸ್ತೆಯ ಇಕ್ಕೆಲುಗಳಲ್ಲಿ ಬ್ಯಾರಿಕೇಡ್ ಹಾಕಿ ಕೇಸರಿ ಬಾವುಟಗಳ ಕಟ್ಟಲಾಗಿತ್ತು. ರೋಡ್ ಶೋ ನಡೆಯುವ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದ್​ ಮಾಡಿಸಲಾಗಿತ್ತು. ಅಂಗಡಿ ಮು‌ಗಟ್ಟುಗಳ ಮುಂದೆ ಸಾವಿರಾರು ಜನ ನಿಲ್ಲಲು ವ್ಯವಸ್ಥೆ ಸಹ ಮಾಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ವಿರುದ್ಧ ಬಿಜೆಪಿಯಿಂದ ಪಿಳ್ಳ ಮುನಿಶಾಮಪ್ಪರನ್ನು ಕಣಕ್ಕಿಳಿಸಲಾಗಿದೆ.

ಇದನ್ನೂ ಓದಿ: ನಾಮಪತ್ರ ಸಲ್ಲಿಕೆ ಅವಧಿ ಮುಗಿಯುತ್ತಿದ್ದಂತೆಯೇ ನಾಳೆ ಬೆಂಗಳೂರಿಗೆ ಅಮಿತ್ ಶಾ, ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ

ಬಿಜೆಪಿ ತನ್ನ ಎಲ್ಲಾ 224 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ ನಂತರ ಅಮಿತ್ ಶಾ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದರು. ಅಮಿತ್ ಶಾ ನೇರವಾಗಿ ಬೆಂಗಳೂರಿನ ಖಾಸಗಿ ಹೋಟೆಲ್​ಗೆ ಪ್ರಯಾಣಿಸಲಿದ್ದು, ಅಲ್ಲಿ ಪಕ್ಷದ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅಮಿತ್ ಶಾ ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಅಮಿತ್ ಶಾ ರೋಡ್ ಶೋ ಗೆ ಬಂದಿದ್ದವರ ವಾಹನ ಅಪಘಾತ: ಗಾಯ

ಬಿಜೆಪಿ ಅಮಿತ್ ಶಾ ರೋಡ್ ಶೋ ಗೆ ಬಂದಿದ್ದವರ ವಾಹನ ಅಪಘಾತವಾಗಿದ್ದು, ಟಾಟಾ ಏಸ್ ವಾಹನ ಅಪಘಾತವಾಗಿ ಗಾಯವಾಗಿರುವಂತಹ ಘಟನೆ ದೇವನಹಳ್ಳಿ ವಿಜಯಪುರ ಮಾರ್ಗದ ಕುರುಬರಕುಂಟೆ ಬಳಿ ನಡೆದಿದೆ. ದೇವನಹಳ್ಳಿ ತಾಲೂಕಿನ ದೊಡ್ಡಚೀಮನಹಳ್ಳಿ ಗ್ರಾಮದಿಂದ 11 ಜನರು ಆಗಮಿಸಿದ್ದರು. ಟಾಟಾ ಏಸ್​ನಲ್ಲಿ ಹೆಚ್ಚಿನ ಜನ ಬಂದ ಕಾರಣ ಅಪಘಾತವಾಗಿರು ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸರ್ಕಾರಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕರ್ನಾಟಕದಲ್ಲಿ ಮೋದಿ ಪ್ರಚಾರ

ಇನ್ನು ಪ್ರಧಾನಿ ನರೇಂದ್ರ ಮೋದಿ ಸಹ ಇದೇ ಏಪ್ರಿಲ್ 29ರಿಂದ ಕರ್ನಾಟಕದಲ್ಲಿ ಪ್ರಚಾರ ಆರಂಭಿಸಲಿದ್ದು, ಒಟ್ಟು 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಬೇಟೆ ನಡೆಸಲಿದ್ದಾರೆ. ಇದಕ್ಕೆ ಹೀಗಾಗಲೇ ನರೇಂದ್ರ ಮೋದಿ ಅವರ ರೂಪ್ ಮ್ಯಾಪ್​ ಸಹ ಸಿದ್ಧವಾಗಿದೆ.

ಇದನ್ನೂ ಓದಿ: Karnataka Assembly Elections 2023: ಅಧಿಕಾರ ವಿರೋಧಿ ಅಲೆ ಹೊಡೆದೋಡಿಸಲು ಮೋದಿ ಮಂತ್ರ ಏನು?

ರೋಡ್ ಶೋ, ರ‍್ಯಾಲಿ, ಸಾರ್ವಜನಿಕ ಸಭೆಗಳನ್ನು ಮಾಡಲಿರುವ ಮೋದಿ, 10 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಕಾರ್ಯಕ್ರಮ ಮಾಡಲಿದ್ದು, ಆ ಒಂದು ಕ್ಷೇತ್ರದಿಂದ 10 ಸಾವಿರ ಜನರನ್ನು ಸೇರಿಸುವ ಪ್ಲಾನ್ ಸಿದ್ಧವಾಗಿದೆ. ಏಪ್ರಿಲ್ 29 ರಂದು ಬೀದರ್, ದಾವಣಗೆರೆ, ಚಿತ್ರದುರ್ಗ ಮತ್ತು ಬೆಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.

ಬೀದರ್, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆ ಮಾಡಲಿದ್ದು, ಅಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೂ ಏಪ್ರಿಲ್ 27 ರಂದು ಮೋದಿ ಆನ್ ಲೈನ್ ಭಾಷಣ ಮಾಡಲಿದ್ದು, ರಾಜ್ಯದ ಎಲ್ಲಾ ಬಿಜೆಪಿ ಶಕ್ತಿ ಕೇಂದ್ರ ಮತ್ತು ಮಹಾ ಶಕ್ತಿ ಕೇಂದ್ರಗಳಲ್ಲಿ ಮೋದಿ ಭಾಷಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Fri, 21 April 23