AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 27ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಪ್ರಚಾರದ ಕಿಚ್ಚು ಹೆಚ್ಚಿಸಲು ಶುಕ್ರವಾರ ಬರುತ್ತಿದ್ದಾರೆ ಅಮಿತ್ ಶಾ

ಏಪ್ರಿಲ್ 27ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಸ್ಥಳ ಇನ್ನೂ ನಿಗದಿಯಾಗಿಲ್ಲ.

ಏಪ್ರಿಲ್ 27ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಪ್ರಚಾರದ ಕಿಚ್ಚು ಹೆಚ್ಚಿಸಲು ಶುಕ್ರವಾರ ಬರುತ್ತಿದ್ದಾರೆ ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ
Ganapathi Sharma
|

Updated on: Apr 19, 2023 | 8:38 PM

Share

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಹೇಗಾದರೂ ಮಾಡಿ ಈ ಬಾರಿ ಬಹುಮತ ಗಳಿಸಲೇಬೇಕೆಂಬ ಜಿದ್ದಾಜಿದ್ದಿಗೆ ಬಿದ್ದಿರುವ ಬಿಜೆಪಿ (BJP) ಕೇಂದ್ರ ನಾಯಕರ ಮೇಲೆ ಹೆಚ್ಚಿನ ಅವಲಂಬನೆ ಇಟ್ಟುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಹಲವು ಬಾರಿ ರಾಜ್ಯಕ್ಕೆ ಬಂದು ಚುನಾವಣಾ ಪ್ರಚಾರ ನಡೆಸಿದ್ದಾರೆ. ಏಪ್ರಿಲ್ 27ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಸ್ಥಳ ಇನ್ನೂ ನಿಗದಿಯಾಗಿಲ್ಲ. ಮೋದಿ ಭಾಷಣವನ್ನು 5,000 ಕಡೆಗಳಲ್ಲಿ ಪ್ರಸಾರ ಮಾಡಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಸುಮಾರು ಎಂಟು ಬಾರಿ ಭೇಟಿ ನೀಡಿದ್ದಾರೆ. ಇವುಗಳಲ್ಲಿ ಹಲವು ಕಾರ್ಯಕ್ರಮಗಳು ಸರ್ಕಾರಕ್ಕೆ ಸಂಬಂಧಿಸಿದಾಗಿದ್ದರೆ ಇನ್ನು ಕೆಲವು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದವಾಗಿದ್ದವು. ಚುನಾವಣೆ ಸಮೀಪಿಸುತ್ತಿರುವಂತೆಯೇ ಹಲವು ಬಾರಿ ಮೋದಿ ರಾಜ್ಯಕ್ಕೆ ಬರಲಿದ್ದಾರೆ. ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸುವೆ.

ಶುಕ್ರವಾರ ರಾಜ್ಯಕ್ಕೆ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಿಜಯಪುರದಲ್ಲಿ ರೋಡ್​ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ. ಅಲ್ಲಿ ರಾಜ್ಯ ಬಿಜೆಪಿ ನಾಯಕರ ಜತೆ ಸಭೆ ನಡೆಸುವ ಸಾಧ್ಯತೆ ಇದೆ. ಶನಿವಾರ ಬೆಂಗಳೂರಿನಿಂದ ನವದೆಹಲಿಗೆ ಹಿಂದಿರುಗುವ ಅಮಿತ್ ಶಾ, ಒಟ್ಟಾರೆಯಾಗಿ ಈ ತಿಂಗಳು 3-4 ಬಾರಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ಲಿಂಗಾಯತರನ್ನು ಹಿಡಿಟ್ಟುಕೊಳ್ಳಲು ರಣತಂತ್ರ, ಯಡಿಯೂರಪ್ಪರನ್ನ ಮುಂದೆ ಬಿಟ್ಟ ಬಿಜೆಪಿ

ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ವರಿಷ್ಠರ ಪ್ರವಾಸದ ವೇಳಾಪಟ್ಟಿ ಇನ್ನು 2 ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ತಿಳಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ