AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Polls: ವಿನೂತನ ಥೀಮ್ ಬೇಸ್ಡ್​​ ಮತಗಟ್ಟೆಗಳ ಸ್ಥಾಪನೆ, ಇನ್ನು ಕೆಲವು ಚುನಾವಣಾ ಸ್ವಾರಸ್ಯಕರ ಮಾಹಿತಿ

ಕರ್ನಾಟಕ ವಿಧಾನಸಭೆ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮತದಾರರನ್ನು ಸೆಳೆಯಲು ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ ಇತ್ಯಾದಿ, ವಿನೂತನ ಥೀಮ್ ಬೇಸ್ಡ್​​ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

Karnataka Polls: ವಿನೂತನ ಥೀಮ್ ಬೇಸ್ಡ್​​ ಮತಗಟ್ಟೆಗಳ ಸ್ಥಾಪನೆ, ಇನ್ನು ಕೆಲವು ಚುನಾವಣಾ ಸ್ವಾರಸ್ಯಕರ ಮಾಹಿತಿ
ವಿಶೇಷ ವಿನ್ಯಾಸವುಳ್ಳ ಮತಗಟ್ಟೆಗಳ ಸ್ಥಾಪನೆ
ಗಂಗಾಧರ​ ಬ. ಸಾಬೋಜಿ
| Updated By: Digi Tech Desk|

Updated on:May 09, 2023 | 9:05 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಕೇವಲ ಒಂದು ಅಷ್ಟೇ ಬಾಕಿಯಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೇ 10 ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದೇ ಮೊದಲ ಬಾರಿಗೆ ವಿಶೇಷ ಮತಗಟ್ಟೆಗಳನ್ನು ತೆರೆಯಲು ಚುನಾವಣಾ ಆಯೋಗ ನಿರ್ಧರಿಸಿತ್ತು. ಈ ಹಿನ್ನೆಲೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ವಿನೂತನ ಥೀಮ್ ಬೇಸ್ಡ್​​ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ಕ್ರೀಡಾ ಮತಗಟ್ಟೆಗಳೆಂಬ ವಿಶೇಷ ವಿನ್ಯಾಸದ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಮತದಾರರನ್ನು ಸೆಳೆಯಲಾಗುತ್ತಿದೆ.

ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಮತಗಟ್ಟೆಳು

ಚುನಾವಣಾ ಆಯೋಗದ ನಿರ್ದೇಶನದಂತೆ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದವರಾದ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡುಕುರುಬ , ಜೇನುಕುರುಬ, ಕೊರಗ, ಮಲೈಕುಡಿ, ಸಿದ್ದಿ ಜನಾಂಗದ ಮತದಾರರಿಗಾಗಿ ಸಾಂಪ್ರದಾಯಿಕ ಮತಗಟ್ಟೆ ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ: ಮತದಾನ ಮಾಡಿದವರಿಗೆ ಈ ಹೋಟೆಲ್​ನಲ್ಲಿ ಸಿಗಲಿದೆ ಉಚಿತ ತಿಂಡಿ, ಸಿನಿಮಾ ಟಿಕೆಟ್​: ಮತದಾರರಿಗೆ ಬಂಪರ್​ ಆಫರ್

ಚಾಮರಾಜನಗರ ಜಿಲ್ಲೆಯಲ್ಲಿ 9, ಉಡುಪಿ ಜಿಲ್ಲೆಯಲ್ಲಿ 1, ಕೊಡಗು ಜಿಲ್ಲೆಯಲ್ಲಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 5, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ಮೈಸೂರು ಜಿಲ್ಲೆಯಲ್ಲಿ 9, ಶಿವಮೊಗ್ಗ ಜಿಲ್ಲೆಯಲ್ಲಿ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ 2 ಮತ್ತು ಹಾಸನ ಜಿಲ್ಲೆಯಲ್ಲಿ 1 ಮತಗಟ್ಟೆ ಸ್ಥಾಪಿಸಲಾಗಿದೆ.

ಚುನಾವಣಾ ಆಯೋಗದ ಬೇಡಿಕೆ ಹಿನ್ನೆಲೆ ಶಾಯಿ ಪೂರೈಕೆ 

ಚುನಾವಣೆಯ ಮತದಾನಕ್ಕೆ ಮೈಸೂರಿನಿಂದ ಅಳಿಸಲಾಗದ ಶಾಯಿ ಪೂರೈಕೆ ಮಾಡಲಾಗಿದೆ. ಮೈಸೂರು ಪೈಂಟ್ಸ್ ಮತ್ತು ವಾರ್ನಿಸ್ ಸಂಸ್ಥೆಯಿಂದ ಶಾಯಿ ಪೂರೈಕೆ ಮಾಡಲಾಗಿದೆ ಎಂದು ಟಿವಿ9ಗೆ ಮೈಲ್ಯಾಕ್ ಸಂಸ್ಥೆಯ ಎಂ.ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. 1937ರಲ್ಲಿ ನಾಲ್ವಡಿ‌ ಕೃಷ್ಣರಾಜ ಒಡೆಯರ್ ಅವರು ಈ ಸಂಸ್ಥೆ ಸ್ಥಾಪಿಸಿದ್ದಾರೆ. ಚುನಾವಣಾ ಆಯೋಗದ ಬೇಡಿಕೆ ಹಿನ್ನೆಲೆ 1 ಲಕ್ಷದ 20 ಸಾವಿರ ರೂ. ಬಾಟಲ್ ಪೂರೈಕೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಚುನಾವಣೆ ಯಾವಾಗ? ಮತದಾನ, ಫಲಿತಾಂಶದ ದಿನಾಂಕ ಇತರೆ ಮಾಹಿತಿ ಇಲ್ಲಿದೆ

1962ರಲ್ಲಿ ಆರಂಭವಾದ ಅಳಿಸಲಾಗದ ಶಾಯಿ ತಯಾರಿಕೆ, ಕೇವಲ ನಮ್ಮ ರಾಜ್ಯ ಮಾತ್ರವಲ್ಲ ಹೊರ ರಾಜ್ಯದ ಮತ್ತು ಬೇರೆ ದೇಶದ ಚುನಾವಣೆಗೂ ಇಲ್ಲಿಂದಲೇ ಶಾಯಿ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 pm, Mon, 8 May 23

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು