ಪದ್ಮನಾಭನಗರದಿಂದ ಅಶೋಕ ವಿರುದ್ಧ ಡಿಕೆ ಸುರೇಶ್ ಕಣಕ್ಕೆ; ಗುಟ್ಟುಬಿಟ್ಟುಕೊಡದ ಕಾಂಗ್ರೆಸ್, ಬುಧವಾರ ಸಿಗಲಿದೆ ಉತ್ತರ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯು ಆರ್ ಅಶೋಕ ಅವರನ್ನು ಕಣಕ್ಕಿಳಿಸಿರುವುದರಿಂದ ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿ ಇದೀಗ ದಟ್ಟವಾಗಿದೆ.

ಪದ್ಮನಾಭನಗರದಿಂದ ಅಶೋಕ ವಿರುದ್ಧ ಡಿಕೆ ಸುರೇಶ್ ಕಣಕ್ಕೆ; ಗುಟ್ಟುಬಿಟ್ಟುಕೊಡದ ಕಾಂಗ್ರೆಸ್, ಬುಧವಾರ ಸಿಗಲಿದೆ ಉತ್ತರ
ಡಿಕೆ ಸುರೇಶ್
Follow us
Ganapathi Sharma
|

Updated on: Apr 18, 2023 | 5:07 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯು ಆರ್ ಅಶೋಕ (R AShoka) ಅವರನ್ನು ಕಣಕ್ಕಿಳಿಸಿರುವುದರಿಂದ ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಡಿಕೆ ಸುರೇಶ್ (DK Suresh) ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿ ಇದೀಗ ದಟ್ಟವಾಗಿದೆ. ಪದ್ಮನಾಭನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗಿ ರಘುನಾಥ್ ನಾಯ್ಡು ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಬಿ ಫಾರಂ ಅನ್ನು ಈಗಾಗಲೇ ನೀಡಲಾಗಿದೆ. ಆದಾಗ್ಯೂ ಅವರು ಇನ್ನೂ ನಾಮಪತ್ರ ಸಲ್ಲಿಸಿಲ್ಲ. ಈ ಮಧ್ಯೆ, ಅವರಿಗೆ ನೀಡಲಾಗಿದ್ದ ಬಿ ಫಾರಂ ಅನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಪಸ್ ಪಡೆದುಕೊಂಡಿದ್ದಾರೆ ಎಂದೂ ಹೇಳಲಾಗಿದೆ. ಇದು ಕುತೂಹಲ ಹೆಚ್ಚಳಕ್ಕೆ ಕಾರಣವಾಗಿದೆ.

ನಾನು ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸಲು ಬಯಸಿದ್ದೆ. ಆದರೆ ನಾನು ಅದನ್ನು ಮುಂದೂಡಿದ್ದೇನೆ. ಅಶೋಕ ವಿರುದ್ಧ ಸ್ಪರ್ಧಿಸುವಂತೆ ಡಿಕೆ ಸುರೇಶ್ ಅವರಿಗೆ ಮನವಿ ಮಾಡಿದ್ದೇನೆ. ಶಿವಕುಮಾರ್ ಅವರೊಂದಿಗೂ ಮಾತನಾಡಿದ್ದೇನೆ. ಆದರೆ ಅವರು ಸ್ಪರ್ಧಿಸುವಂತೆ ಕೇಳಿದ್ದಾರೆ. ನಿನ್ನೆ ರಾತ್ರಿಯೂ ಸುರೇಶ್ ಜೊತೆ ಮಾತನಾಡಿದ್ದೆ, ಚರ್ಚೆಯ ನಂತರ ತಿಳಿಸುತ್ತೇನೆ ಎಂದು ರಘುನಾಥ್ ನಾಯ್ಡು ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಘುನಾಥ್ ನಾಯ್ಡು, ಒಂದೋ ನಾನು ಇಲ್ಲವೇ ಡಿಕೆ ಸುರೇಶ್ ಅವರು ಬುಧವಾರ ನಾಮಪತ್ರ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪದ್ಮನಾಭ ನಗರದ ಕಾಂಗ್ರೆಸ್​ ಬಿ ಫಾರಂ ಎಕ್ಸ್​ಕ್ಲೂಸಿವ್ ಮಾಹಿತಿ, ಟಿಕೆಟ್​ ಹಂಚಿಕೆಯಲ್ಲಿ ಮತ್ತೆ ಟ್ವಿಸ್ಟ್ ಕಾದಿದ್ಯಾ?

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧ ವಿಭಿನ್ನ ಕಾರ್ಯತಂತ್ರ ಅನುಸರಿಸುವರುವ ಬಿಜೆಪಿ ಆರ್ ಅಶೋಕ ಹಾಗೂ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ಕಾಂಗ್ರೆಸ್​​ನ ದಿಗ್ಗಜ ನಾಯಕರನ್ನು ಕಟ್ಟಿಹಾಕಲು ಮುಂದಾಗಿದೆ.

ಕನಕಪುರದಲ್ಲಿ ಅಭೂತಪೂರ್ವ ಸ್ವಾಗತ; ಅಶೋಕ

ಕನಕಪುರದ ಜನ ಅಭೂತಪೂರ್ವ ಸ್ವಾಗತ ಕೊಟ್ಟಿದ್ದಾರೆ ಎಂದು ಆರ್ ಅಶೋಕ ಹೇಳಿದ್ದಾರೆ. ಕನಕಪುರದ ಜನ ಕೈ ಎತ್ತಿ ಶುಭ ಹಾರೈಸಲೂ ಭಯಪಡುವ ಸ್ಥಿತಿ ಇತ್ತು. ಅಂಥ ಕ್ಷೇತ್ರದಲ್ಲಿ ಗೆದ್ದು ಬಾ ಎಂದು ಪ್ರಧಾನಿ ನರೇಂದ್ರ ಮೋದಿ ನನ್ನನ್ನು ಕಳುಹಿಸಿದ್ದಾರೆ. ಕನಕಪುರದ ಜನ ನನ್ನನ್ನು ಮನೆ ಮಗನ ರೀತಿ ಸ್ವಾಗತ ಮಾಡುತ್ತಿದ್ದಾರೆ. ಕನಕಪುರಕ್ಕೆ ಹೊರಗಿನಿಂದ ಜನ ಬಂದಿಲ್ಲ, ಎಲ್ಲರೂ ಸ್ಥಳೀಯರೇ ಎಂದು ರಾಮನಗರ ಜಿಲ್ಲೆ ಕನಕಪುರದಲ್ಲಿ ಆರ್ ಅಶೋಕ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ