Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election 2023: ರಾಜ್ಯದ ಚುನಾವಣಾ ದಿನಾಂಕ ಪ್ರಕಟ; ರಾಜ್ಯ ನಾಯಕರ ರಿಯಾಕ್ಷನ್ ಹೀಗಿದೆ

ಚುನಾವಣಾ ದಿನಾಂಕ ಘೋಷಿಸುತ್ತಿದ್ದಂತೆ ರಾಜ್ಯ ನಾಯಕರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಒಂದೆಡೆ ಈ ಬಾರಿಯೂ ನಾವೇ ಗೆಲ್ಲುತ್ತೇವೆ ಎಂದರೆ, ಇನ್ನೊಂದೆಡೆ ವಿರೋಧ ಪಕ್ಷ ನಾಯಕರು ಮೇ 10 ಬಿಜೆಪಿ ಆಡಳಿತದ ಕೊನೆ ದಿನ ಎಂದ ಹೇಳುತ್ತಿದ್ದಾರೆ.

Karnataka Election 2023: ರಾಜ್ಯದ ಚುನಾವಣಾ ದಿನಾಂಕ ಪ್ರಕಟ; ರಾಜ್ಯ ನಾಯಕರ ರಿಯಾಕ್ಷನ್ ಹೀಗಿದೆ
Karnataka Elections 2023Image Credit source: Shutterstock
Follow us
ನಯನಾ ಎಸ್​ಪಿ
|

Updated on:Mar 29, 2023 | 1:43 PM

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು (Election Commission of India)ರಾಜ್ಯದ 224 ವಿಧಾನಸಭಾ (Vidhana Sabha) ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು (Election Date) ಘೋಷಣೆ ಮಾಡಿದೆ. ಮೇ 10ರ ಬುಧವಾರದಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ವಿಷಯ ಹೊರ ಬೀಳುತ್ತಿದಂತೆ ರಾಜ್ಯ ನಾಯಕರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಒಂದೆಡೆ ಈ ಬಾರಿಯೂ ನಾವೇ ಗೆಲ್ಲುತ್ತೇವೆ ಎಂದರೆ, ಇನ್ನೊಂದೆಡೆ ವಿರೋಧ ಪಕ್ಷ ನಾಯಕರು ಮೇ 10 ಬಿಜೆಪಿ ಆಡಳಿತದ ಕೊನೆ ದಿನ ಎಂದ ಹೇಳುತ್ತಿದ್ದಾರೆ.

ಚುನಾವಣಾ ದಿನಾಂಕ ಘೋಷಿಸಿದ ನಂತರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸುರ್ಜೇವಾಲ ಟ್ವೀಟ್​​ ಮೂಲಕ ಪ್ರತಿಕ್ರಿಯಿಸಿದ್ದಾರೆ. “ದುರ್ಗಾಷ್ಟಮಿ ಪುಣ್ಯ ದಿನದಂದು ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ರಾಜ್ಯವನ್ನು 40% ಸರ್ಕಾರ, ಅದರ ಲಜ್ಜೆಗೆಟ್ಟ ಲೂಟಿಯಿಂದ ಮುಕ್ತಗೊಳಿಸಬೇಕಿದೆ. ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸಲು ಕಾಂಗ್ರೆಸ್ ಸಂಕಲ್ಪ ಮಾಡಿದೆ. ನಾವೆಲ್ಲರೂ ಬ್ರ್ಯಾಂಡ್​​​​​​ ಕರ್ನಾಟಕವನ್ನು ಮರುನಿರ್ಮಾಣ ಮಾಡೋಣ. ಕನ್ನಡಿಗರ ಅಭಿಮಾನ ಬೆಳೆಯಲಿ, ಭರವಸೆಗಳನ್ನು ಜಾರಿಗೆ ತರೋಣ, ಕರ್ನಾಟಕ ಗೆಲ್ಲಲಿ” ಎಂದು ರಣದೀಪ್ ಸಿಂಗ್​​​ ಸುರ್ಜೇವಾಲ ಟ್ವೀಟ್​​ ಮೂಲಕ ತಿಳಿಸಿದ್ದಾರೆ.

ಸಿ.ಟಿ ರವಿ ಹೇಳಿದ್ದೇನು?

ಇನ್ನು ಸಿ.ಟಿ ರವಿ ಚಿಕ್ಕಮಗಳೂರಿನಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ಕುರಿತು ಮಾತನಾಡುತ್ತಾ, ” ಚುನಾವಣೆ ಘೋಷಣೆಯಾಗಿದೆ ಇಂದಿನಿಂದ ಮತ ಬೇಟೆ ಆರಂಭವಾಗಿದೆ. ಅಂದಿನ ಪಾಠ ಅಂದೆ ಓದುವ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ತಯಾರಾಗುವ ಅವಶ್ಯಕತೆ ಇಲ್ಲ ಹಾಗೆಯೇ ನಿರಂತರವಾಗಿ ಕೆಲಸ ಮಾಡಿದವರು ಚುನಾವಣೆ ಸಮಯದಲ್ಲಿ ಜಾಸ್ತಿ ಕಷ್ಟ ಪಡುವ ಅಗತ್ಯವಿಲ್ಲ. ಬಿಜೆಪಿ ಕೂಡ 365 ದಿನ ಜನಗಳ ಜೊತೆ ಇದ್ದು ಕೆಲಸ ಮಾಡಿದೆ ಹಾಗಾಗಿ, ಚುನಾವಣೆಗೆಂದು ವಿಶೇಷವಾದ ತಯಾರಿ ಮಾಡುವ ಅವಶ್ಯಕತೆ ಬರುವುದಿಲ್ಲ ಎಂದು ಭಾವಿಸಿದ್ದೇನೆ. ಕಳೆದ ಬಾರಿಯೂ ಹೇಳಿದ್ದೆ ಈಗಲೂ ಹೇಳುತ್ತೇನೆ ವಿಶ್ವಾಸದಿಂದ ಚುನಾವಣೆ ಎದುರಿಸುತ್ತೇವೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ” ಎಂದು ಹೇಳಿದರು.

ಚುನಾವಣೆ ದಿನಾಂಕ ಘೋಷಣೆಯಾದ ಕೆಲವೇ ಸಮಯದಲ್ಲಿ ಕರ್ನಾಟಕ ಬಿಜೆಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲೂ ಈ ಕುರಿಟಿ ಟ್ವೀಟ್ ಮಾಡಿದ್ದಾರೆ. “ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯವಾಗಿದೆ! ಸ್ಪಷ್ಟ ಬಹುಮತದೊಂದಿಗೆ ಆಶೀರ್ವಾದ ಮಾಡಲು ಕನ್ನಡಿಗರು ಉತ್ಸುಕರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಇಂದಿನಿಂದ ಹಗಲಿರುಳು ಶ್ರಮಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ.” ಎಂದು ಟ್ವೀಟ್ ಮಾಡಿದ್ದಾರೆ.

ಈಶ್ವರ್ ಖಂಡ್ರೆ ಹೇಳಿದ್ದೇನು?

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, “ರಾಜ್ಯದ ಜನತೆ ಬಹುನಿರೀಜ್ಷಿತ ದಿನಾಂಕದ ಬಗ್ಗೆ ಕಾಯ್ತಾ ಇದ್ರು, ದಿನಾಂಕ ಘೋಷಣೆ ಸ್ವಾಗತ ಮಾಡ್ತಾ ಇದ್ದೇನೆ. ಇವತ್ತೇನು ಚುನಾವಣಾ ಆಯೋಗದ ಮೇಲೂ ಅನುಮಾನ ಇದೆ. ಬಿಜೆಪಿ ಪರ ಅನುಕೂಲ ಆಗುವ ಕೆಲಸ ಮಾಡ್ತಾರೆ ಎನ್ನುವ ಅನುಮಾನ ಇದೆ. ಚುನಾವಣೆ ನ್ಯಾಯ ಸಮ್ಮತ ಆಗಬೇಕು ನಿಷ್ಪಕ್ಷಪಾತ ಚುನಾವಣೆ ನಡೆಯಬೇಕು. ಜನ ವಿರೋಧಿ ಭ್ರಷ್ಟ ಬಿಜೆಪಿಯನ್ನು ಬುಡ ಸಮೇತ ಕಿತ್ತು ಹಾಕಬೇಕು. ಸರ್ವಾಧಿಕಾರಿ ಧೋರಣೆಯ ಬಿಜೆಪಿಯ ಕೊನೆ ಘಳಿಗೆ ಬಂದಿದೆ. ನೀತಿ ಸಂಹಿತೆ ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು.” ಎಂದು ಹೇಳಿದರು

ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ, “ಮೇ 10 ರಂದು ಚುನಾವಣೆ 13ಕ್ಕೆ ಮತ ಎಣಿಕೆ ನಡೆಯಲಿದೆ. ಪ್ರಜಾಪ್ರಭುತ್ವದ ಹಬ್ಬಕ್ಕೆ ನಮ್ಮ ಪಕ್ಷ ಸಂಪೂರ್ಣವಾಗಿ ಸಿದ್ಧವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮುಟ್ಟಿಸುವ ಕೆಲಸವಾಗಿದೆ. ನಾವು ಯುದ್ಧ ಬಂದಾಗ ಶಸ್ತ್ರಾಭ್ಯಾಸ ನಡೆಸಲ್ಲ. ಈಗಾಗಲೇ ನಮ್ಮ ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಈ ಬಾರಿ ಬಿಜೆಪಿ ಸರ್ಕಾರ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ಸ್ಥಾನಗಳಲ್ಲಿ ಕಳೆದ ಬಾರಿ ಏಳು ಸ್ಥಾನ ಗೆದ್ದಿದ್ದೆವು. ಈ ಬಾರಿ ಎಂಟು ಸ್ಥಾನಗಳನ್ನೂ ಗೆಲ್ಲಲಿದ್ದೇವೆ.” ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಸಿದ್ದರಾಮಯ್ಯ ರಿಯಾಕ್ಷನ್

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯನವರು ಈ ಬಾರಿಯ ರಾಜ್ಯ ಚುನಾವಣೆ ದಿನಾಂಕ ಘೋಷಿಸಿದ ಕುರಿತು ಮೈಸೂರಿನ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ” ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ. ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮಕ್ಕೆ ಬರಲು ಆಗಲ್ಲ ಆದರೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರಬಹುದು. ಚುನಾವಣೆಯಲ್ಲಿ ಹೆಚ್ಚು ಹಣ ಖರ್ಚು ಮಾಡುವುದು ಬಿಜೆಪಿ. ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದ್ದು ಬಿಜೆಪಿಯವರು.” ಎಂದು ಬಿಜೆಪಿ ಕುರಿತು ಗಂಭೀರವಾದ ಆರೋಪ ಮಾಡಿದ್ದಾರೆ.

Published On - 1:26 pm, Wed, 29 March 23

ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ