Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚ ಸುದೀಪ್: ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್​ಗೆ ಡ್ಯಾಮೇಜ್!

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಅವರು ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ನಡೆಸುವುದಾಗಿ ಘೋಷಿಸಿದ್ದಾರೆ. ಆದರೆ ಅವರು ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಹೀಗಾಗಿ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್​ಗೆ ಭೀತಿ ಶುರವಾಗಿದೆ.

ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚ ಸುದೀಪ್: ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್​ಗೆ ಡ್ಯಾಮೇಜ್!
ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ
Follow us
Rakesh Nayak Manchi
|

Updated on:Apr 05, 2023 | 9:11 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಶತಾಯ ಗತಾಯವಾಗಿ ಸ್ಪಷ್ಟ ಬಹುಮತ ಪಡೆಯಲು ಬಿಜೆಪಿ (BJP Karnataka) ರಾಜಕೀಯ ತಂತ್ರಗಾರಿಕೆ ನಡೆಸುತ್ತಿದೆ. ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಿಜಯ ಸಂಕಲ್ಪ ಯಾತ್ರೆ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಂತಹ ಘಟಾನುಘಟಿ ನಾಯಕರ ಮೂಲಕ ಅಬ್ಬರದ ಪ್ರಚಾರ ನಡೆಸುತ್ತಿದೆ. ಇದೀಗ ಸ್ಯಾಂಡಲ್​ವುಡ್​ಗೆ ಕೈಹಾಕಿದ ಬಿಜೆಪಿ, ನಟ ಕಿಚ್ಚ ಸುದೀಪ್ (Kichcha Sudeep) ಅವರನ್ನು ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸುದೀಪ್ ಅವರು ಬಿಜೆಪಿಗೆ ಸೇರದೆ ಪಕ್ಷದ ಪರ ಮಾತ್ರ ಪ್ರಚಾರಕ್ಕೆ ಧುಮುಕಲಿದ್ದಾರೆ. ಇದರಿಂದಾಗಿ ಕಾಂಗ್ರೆಸ್​ಗೆ ಭೀತಿ ಶುರುವಾಗಿದ್ದು, ಅದರಲ್ಲೂ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಡ್ಯಾಮೇಜ್ ಆಗುವ ಸಾಧ್ಯತೆ ಇದೆ.

ಚುನಾವಣಾ ವರ್ಷದಲ್ಲಿ ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಸ್​ಟಿ ಸಮುದಾಯವನ್ನು ಸೆಳೆದಿದ್ದ ಬಿಜೆಪಿ, ಇದೀಗ ಅದೇ ಸಮುದಾಯಕ್ಕೆ ಸೇರಿದ ನಟ ಕಿಚ್ಚ ಸುದೀಪ್ ಅವರನ್ನು ತಮ್ಮ ಪಕ್ಷದ ಪರ ಪ್ರಚಾರಕ್ಕೆ ಬಳಸುತ್ತಿದ್ದಾರೆ. ನಟ ಸುದೀಪ್ ಬಿಜೆಪಿ ಪರ ಪ್ರಚಾರದಿಂದಾಗಿ ಉತ್ತರ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಡ್ಯಾಮೇಜ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Kichcha Sudeep: ನನ್ನ ಜೊತೆಗೆ ಬಿಜೆಪಿ ಪರವೂ ನಟ ಕಿಚ್ಚ ಸುದೀಪ್ ಪ್ರಚಾರ ಮಾಡುತ್ತಾರೆ: ಸಿಎಂ ಬಸವರಾಜ ಬೊಮ್ಮಾಯಿ

ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯ ಪ್ರಬಲವಾಗಿದ್ದು, ಯುವ ಮತದಾರರನ್ನು ಸೆಳೆಯುವಲ್ಲಿ ಸುದೀಪ್ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಬೆಳಗಾವಿ, ಬಿಜಾಪುರ ಭಾಗಗಳಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಸುದೀಪ್ ಕೈ ಹಾಕುವ ಸಾಧ್ಯತೆ ದಟ್ಟವಾಗಿದೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಎಸ್​ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡುವ ಮೂಲಕ ಜಾಣ್ಮೆಯ ಹೆಜ್ಜೆ ಇಟ್ಟಿದ್ದ ಬಿಜೆಪಿಗೆ ಕೌಂಟರ್ ಕೊಡಲು ಕಾಂಗ್ರೆಸ್ ಮುಂದಾಗಿತ್ತು. ಅದರಂತೆ ಕೆಲ ದಿನಗಳ ಹಿಂದೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಆದರೆ ಈ ವೇಳೆ ನಡೆದಿದ್ದ ಮಾತುಕತೆ ಸಮಯದಲ್ಲಿ ಸುದೀಪ್ ಅವರು ಯಾವುದೇ ಸ್ಪಷ್ಟ ಉತ್ತರ ನೀಡದೇ ಸುಮ್ಮನಾಗಿದ್ದರು. ಸದ್ಯ ಸುದೀಪ್ ಅವರು ಬಿಜೆಪಿ ಪರ ಪ್ರಚಾರಕ್ಕೆ ಇಳಿಯಲಿದ್ದು, ರೂಪುರೇಷಗಳನ್ನು ಸಿದ್ದಪಡಿಸಲಾಗಿದೆ. ಹೀಗಾಗಿ ಯುವ ಎಸ್​ಟಿ ಮತದಾರರನ್ನು ಕಳೆದುಕೊಳ್ಳುವ ಭೀತಿ ಕಾಂಗ್ರೆಸ್​ಗೆ ಶುರುವಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Wed, 5 April 23

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?