ಧಾರವಾಡದಲ್ಲಿ ಕಿಚ್ಚನ ಕ್ರೇಜ್: ಸಿನಿಮಾ, ಚುನಾವಣಾ ಪ್ರಚಾರದ ನಡುವೆ ವ್ಯತ್ಯಾಸವಿಲ್ಲ ಎಂದ ನಟ ಸುದೀಪ್

ಈ ಬಾರಿಯ ಚುನಾವಣೆಯಲ್ಲಿ ಸಿನಿಮಾ ತಾರೆಯರು ಅಬ್ಬರದ ಪ್ರಚಾರ ಮಾಡುತ್ತಿದ್ದು, ಶುಕ್ರವಾರ ಧಾರವಾಡ ಮತ್ತು ಗದಗನಲ್ಲಿ ನಟ ಕಿಚ್ಚ ಸುದೀಪ್​ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. 

Follow us
ಗಂಗಾಧರ​ ಬ. ಸಾಬೋಜಿ
|

Updated on: Apr 28, 2023 | 10:09 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೇನು ಕೆಲವೆ ದಿನಗಳು ಬಾಕಿ ಇದೆ. ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮತದಾರರನ್ನು ತಮ್ಮತ್ತ ಸೆಳೆಯಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯಲ್ಲಿ ಸಿನಿಮಾ ತಾರೆಯರು ಅಬ್ಬರದ ಪ್ರಚಾರ ಮಾಡುತ್ತಿದ್ದು, ಬೇರೆ ಬೇರೆ ಪಕ್ಷಗಳ ಪರ ವಿವಿಧ ನಟ-ನಟಿಯರು ಮತಯಾಚನೆ ಮಾಡುತ್ತಿದ್ದಾರೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿಯವರ ಪರವಾಗಿ ನಿಂತಿರುವ ನಟ ಕಿಚ್ಚ ಸುದೀಪ್ (Sudeep)​ ಬಿಜೆಪಿ ಅಭ್ಯರ್ಥ್ಯಿಗಳ ಪರವಾಗಿ  ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ (ಏ.27) ರಂದು ಹಾವೇರಿ ಜಿಲ್ಲೆಯಲ್ಲಿ ಪ್ರಚಾರ ಮಾಡಿರುವ ಸುದೀಪ್​ ಶುಕ್ರವಾರ ಧಾರವಾಡ ಮತ್ತು ಗದಗನಲ್ಲಿ ಮತಯಾಚನೆ ಮಾಡಿದ್ದಾರೆ.

ಸಿನಿಮಾ, ರಾಜಕೀಯ ಪ್ರಚಾರದ ನಡುವೆ ವ್ಯತ್ಯಾಸ ಇಲ್ಲ: ಕಿಚ್ಚ ಸುದೀಪ್ 

ಬೆಳಗ್ಗೆ 9.30ಕ್ಕೆ ಹುಬ್ಬಳ್ಳಿಗೆ ಆಗಮಿಸಿದ ಕಿಚ್ಚ, ಹುಬ್ಬಳಿ-ಧಾರವಾಡ ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್​ ಟೆಂಗಿನಕಾಯಿ ಪರ ಜನಗಳಲ್ಲಿ ಮತಯಾಚನೆ ಮಾಡಿದರು. ಈ ವೇಳೆ ಟಿವಿ9 ಜೊತೆ ಮಾಡಿದ್ದ, ಸಿನಿಮಾ, ರಾಜಕೀಯ ಪ್ರಚಾರದ ನಡುವೆ ವ್ಯತ್ಯಾಸ ಇಲ್ಲ. ಹೊಸ ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದೇವೆ.​​ ಜನರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಪ್ರೀತಂ ಗೌಡ ಸುಳ್ಳನ್ನೇ ತೀರ್ಥವೆಂದು ಕಣ್ಣಿಗೊತ್ತಿರುವ ಕಾಂಗ್ರೆಸ್; ಜೆಡಿಎಸ್ ವಾಗ್ದಾಳಿ

ಸದ್ಯ ರಾಜಕೀಯದ ಬಗ್ಗೆ ನಾನು ಮಾತಾಡುವುದಿಲ್ಲ. ನನಗೆ ಸಿನಿಮಾದಲ್ಲಿ ಕೆಲಸ ಮಾಡಲು ಸಾಕಷ್ಟು ಕೆಲಸಗಳು ಇವೆ. ಸಿಎಂ ಬೊಮ್ಮಾಯಿ ಸರ್ಕಾರ ನಡೆಸುತ್ತಿದ್ದಾರೆ, ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮಧ್ಯಾಹ್ನ 12.20ಕ್ಕೆ ಧಾರವಾಡ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರ ಜೊತೆ ನಟ ಸುದೀಪ್ ರೋಡ್ ಶೋ ನಡೆಸಿದರು. ಅಮ್ಮಿನಬಾವಿ ಗ್ರಾಮದಲ್ಲಿ ರೋಡ್ ಶೋ ನಡೆಸುವ ಮೂಲಕ ಅಮೃತ್ ದೇಸಾಯಿ ಪರ ಸುದೀಪ್​​ ಮತಯಾಚನೆ ಮಾಡಿದರು.

ನಾನು ರಾಜಕಾರಣಿಯಲ್ಲ

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅಳ್ನಾವರದಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜ್ ಛಬ್ಬಿ ಪರ ಸುದೀಪ್ ಪ್ರಚಾರ ಮಾಡಿದ್ದು, ನಾನು ರಾಜಕಾರಣಿಯಲ್ಲ, ಕಲಾವಿದನಾಗಿ ಪ್ರಚಾರಕ್ಕೆ ಬಂದಿರುವೆ. ರಾಜಕಾರಣಿಗಳು ಗೆದ್ದ ಮೇಲೆ ಜನರನ್ನು ಮರೆಯಬಾರದು. ಚೆನ್ನಾಗಿ ಕೆಲಸ ಮಾಡಿದರೆ ಜನರನ್ನು ನೋಡಲು ಬರುವೆ. ಕೆಲಸ ಮಾಡದಿದ್ದರೆ ನಾಗರಾಜ್​ರನ್ನು ಬಂದು ನೋಡುವೆ. ಈ ಬಾರಿ ನಾಗರಾಜ್​ರನ್ನು ಗೆಲ್ಲಿಸುವಂತೆ ಸುದೀಪ್ ಮನವಿ ಮಾಡಿದರು.

ಇದನ್ನೂ ಓದಿ: ತೇಜಸ್ವಿನಿ ಅನಂತಕುಮಾರ್​​ಗೆ ಟಿಕೆಟ್​ ಕೈತಪ್ಪಲು ಬಿಎಲ್​ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್

ಗೀತಾ ಅಕ್ಕಗೆ ಆಲ್​ ದಿ ಬೆಸ್ಟ್ ಹೇಳಿದ ಕಿಚ್ಚ

ಗೀತಾ ಶಿವರಾಜ್​ಕುಮಾರ್​ ಕಾಂಗ್ರೆಸ್​ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಗೀತಾ ಅಕ್ಕಗೆ ಆಲ್​ ದಿ ಬೆಸ್ಟ್ ಹೇಳುತ್ತೇನೆ. ಗೀತಾ ಅಕ್ಕ ಕೈಗೊಂಡಿರುವ ನಿರ್ಧಾರದ ಹಿಂದೆ ಒಳ್ಳೆಯ ಚಿಂತನೆ ಇರುತ್ತೆ. ಗೀತಾ ಅಕ್ಕಗೆ ಒಳ್ಳೆಯದಾಗಲಿ ಎಂದು ಕೋರುತ್ತೇನೆ ಎಂದು ಹೇಳಿದ್ದಾರೆ.

ಕಿಚ್ಚ ಸುದೀಪ್​ ಹೊರತು ಪಡಿಸಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ನಟಿ ಅನುಪ್ರಭಾಕರ್ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು. ಬಿರುಬಿಸಿಲಲ್ಲೂ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಪ್ರಚಾರ ಮಾಡಿದ್ದಾರೆ. ಅದೇ ರೀತಿಯಾಗಿ ನಟಿ, ಶೃತಿ, ಹರ್ಷಿಕ ಪೊಣ್ಣಚ ಕೂಡ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ