Koppal: ಕಾಂಗ್ರೆಸ್​ ಟಿಕೆಟ್ ವಂಚಿತ ಎಚ್​ಆರ್ ಶ್ರೀನಾಥ್ ಮನೆಗೆ ಭೇಟಿ ನೀಡಿದ ಜನಾರ್ಧನ ರೆಡ್ಡಿ

|

Updated on: Apr 09, 2023 | 9:41 AM

ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ನಿಂದ ವಂಚಿತರಾಗಿರುವ ಎಚ್​​ಆರ್ ಶ್ರೀನಾಥ್​ಗೆ ಜನಾರ್ಧನ ರೆಡ್ಡಿ ಗಾಳ ಹಾಕಿದ್ದಾರೆ. ಎಚ್​ಆರ್​ ಶ್ರೀನಾಥ್​ಗೆ ಟಿಕೆಟ್ ಕೈತಪ್ಪುತ್ತಿದ್ದಂತೆಯೇ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Koppal: ಕಾಂಗ್ರೆಸ್​ ಟಿಕೆಟ್ ವಂಚಿತ ಎಚ್​ಆರ್ ಶ್ರೀನಾಥ್ ಮನೆಗೆ ಭೇಟಿ ನೀಡಿದ ಜನಾರ್ಧನ ರೆಡ್ಡಿ
ಜನಾರ್ಧನ ರೆಡ್ಡಿ, ಎಚ್​ಆರ್ ಶ್ರೀನಾಥ್
Follow us on

ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ನಿಂದ ವಂಚಿತರಾಗಿರುವ ಎಚ್​​ಆರ್ ಶ್ರೀನಾಥ್​ಗೆ ಜನಾರ್ಧನ ರೆಡ್ಡಿ ಗಾಳ ಹಾಕಿದ್ದಾರೆ.
ಎಚ್​ಆರ್​ ಶ್ರೀನಾಥ್​ಗೆ ಟಿಕೆಟ್ ಕೈತಪ್ಪುತ್ತಿದ್ದಂತೆಯೇ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು ಅವರು ಮಧ್ಯಾಹ್ನ ಶ್ರೀನಾಥ್ ಅವರನ್ನು ಭೇಟಿಯಾದ ಬೆನ್ನಲ್ಲೇ ಜನಾರ್ಧನ ರೆಡ್ಡಿ ಕೂಡ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶ್ರೀನಾಥ್ ಟಿಕೆಟ್ ಆಕಾಂಕ್ಷಿಯಾಗಿದ್ದಾಗ ಬೇರೆ ಯಾವ ಪಕ್ಷಗಳ ಯಾವ ನಾಯಕರೂ ಅವರನ್ನು ಭೇಟಿಯಾಗಿರಲಿಲ್ಲ, ಇದೀಗ ಟಿಕೆಟ್ ಕೈತಪ್ಪುತ್ತಿದ್ದಂತೆ ಬೇರೆ ಪಕ್ಷಗಳಿಂದ ಓಲೈಕೆ ಶುರುವಾಗಿದೆ. ರಾತ್ರೋರಾತ್ರಿ ಜನಾರ್ಧನ ರೆಡ್ಡಿ ಶ್ರೀನಾಥ್ ಮನೆಗೆ ಭೇಟಿ ನೀಡಿದ್ದಾರೆ. ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಇಕ್ಬಾಲ್ ಅನ್ಸಾರಿಗೆ ಟಿಕೆಟ್ ಘೋಷಣೆ ಹಿನ್ನೆಲೆ ಶ್ರೀನಾಥ್​ಗೆ ಟಿಕೆಟ್ ತಪ್ಪಿದೆ.

ಮತ್ತಷ್ಟು ಓದಿ: ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ, ಬ್ಲ್ಯಾಕ್​ಮೇಲ್​​ ನನ್ನ ಹತ್ತಿರ ನಡೆಯಲ್ಲ: ಭವಾನಿ ರೇವಣ್ಣಗೆ ಕುಮಾರಸ್ವಾಮಿ ಟಾಂಗ್

ಎಚ್​ ಆರ್ ಶ್ರೀನಾಥ್ ಅವರು ಕಾಂಗ್ರೆಸ್​ ಮೇಲೆ ಅಸಮಾಧಾನಗೊಂಡಿದ್ದು, ಈ ಸಂದರ್ಭದ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ ಹಿಂದಿನ ಇಂದಿರಾಗಾಂಧಿ ಕಾಂಗ್ರೆಸ್ ಈಗ ಇಲ್ಲ, ಇದು ಸಿದ್ದರಾಮಯ್ಯ ಕಾಂಗ್ರೆಸ್ ಎಂದು ಶ್ರೀನಾಥ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲ್ಲ: ಶ್ರೀನಾಥ್
ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಶ್ರೀನಾಥ್ ಜಿಲ್ಲೆಯಲ್ಲಿ ಕಾಂಗ್ರೆಸ್​ನ ಯಾವ ಅಭ್ಯರ್ಥಿ ಪರವೂ ಪ್ರಚಾರ ಮಾಡುವುದಿಲ್ಲ, ಹೊರ ಜಿಲ್ಲೆಗಳಲ್ಲಿ ಅಲ್ಲಿನ ಅಭ್ಯರ್ಥಿಗಳ ಪರವಾಗಿ ಮತ ಕೇಳುತ್ತೇನೆ ಎಂದಿದ್ದಾರೆ.
ಗಂಗಾವತಿಯಲ್ಲಿ ಟಿಕೆಟ್​ಗಾಗಿ ಇಕ್ಬಾಲ್​ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಹಾಗೂ ಎಚ್​ಆರ್ ಶ್ರೀನಾಥ್ ನಡುವೆ ಸ್ಪರ್ಧೆ ಇತ್ತು.
ಪಕ್ಷ ಅನ್ಸಾರಿ ಅವರಿಗೆ ಟಿಕೆಟ್ ನೀಡಿದೆ.

ಅನ್ಸಾರಿಗೆ ಟಿಕೆಟ್ ನೀಡಿದರೆ ಪಕ್ಷ ಸೋಲುತ್ತದೆ ಎಂದು ಆಂತರಿಕ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಇದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ, ಅನ್ಸಾರಿಗೆ ಟಿಕೆಟ್ ನೀಡಿದ್ದರಿಂದ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಹೇಳಿದ್ದಾರೆ.

ಇದರ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿರುವ ಶ್ರೀನಾಥ್ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ, ಟಿಕೆಟ್ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರೇ ಕೆಲಸ ಮಾಡಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ