ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್(Congress) ಭರ್ಜರಿ ಸಿದ್ಧತೆ ನಡೆಸಿದೆ. ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸಭೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಹಂಚಿಕೆಗೆ ಸಮಿತಿ ರಚನೆ ಮಾಡಿದೆ. 36 ಮಂದಿಯನ್ನು ಒಳಗೊಂಡ ಕೆಪಿಸಿಸಿ ಚುನಾವಣಾ ಸಮಿತಿ ರಚಿಸಿದೆ. ಈ ಮೂಲಕ ಕಾಂಗ್ರೆಸ್, ಟಿಕೆಟ್ ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
36 ಸದಸ್ಯರನ್ನು ಒಳಗೊಂಡ ಕೆಪಿಸಿಸಿ ಚುನಾವಣಾ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ ಎನ್ನುವ ಪಟ್ಟಿಯನ್ನು ಇಂದು(ಡಿಸೆಂಬರ್ 14) ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಿಸಿದ್ದಾರೆ. ಈಗಾಗಲೇ ಟಿಕೆಟ್ಗಾಗಿ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಈ ಸಮಿತಿ ಪರಿಶೀಲನೆ ಮಾಡಲಿದ್ದು, ಬಳಿಕ ಪ್ರತಿ ಕ್ಷೇತ್ರದಲ್ಲಿ 1 ರಿಂದ 3 ಹೆಸರು ಶಿಫಾರಸು ಮಾಡಲಿದೆ.
ಟಿಕೆಟ್ ಬಯಸಿ ಒಟ್ಟು 1,450 ಅರ್ಜಿಗಳು ಸಲ್ಲಿಕೆಯಾಗಿದ್ದು, ಒಟ್ಟು 25 ಕೋಟಿ ರೂ. ಮೊತ್ತ ಸಂಗ್ರಹವಾಗಿದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರು ಅರ್ಜಿ ಶುಲ್ಕ 5 ಸಾವಿರ ರೂ. ಜೊತೆಗೆ ಡಿಡಿ ಮೂಲಕ ಕಟ್ಟಡ ನಿರ್ಮಾಣ ನಿಧಿ 2 ಲಕ್ಷ ರೂಪಾಯಿ ನಿಗದಿ ಮಾಡಲಾಗಿತ್ತು. ಇನ್ನು ಎಸ್‌ಸಿ, ಎಸ್‌ಟಿಗಳಿಗೆ 1 ಲಕ್ಷ ರೂಪಾಯಿ ನಿಗದಿಪಡಿಸಲಾಗಿತ್ತು.
ಸಮಿತಿಯಲ್ಲಿರುವ ನಾಯಕರ ಹೆಸರುಗಳು
ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಎಂ.ವೀರಪ್ಪ ಮೊಯ್ಲಿ, ಡಾ.ಜಿ.ಪರಮೇಶ್ವರ್, ಆರ್.ವಿ.ದೇಶಪಾಂಡೆ, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಆರ್.ಧ್ರುವನಾರಾಯಣ, ಸಲಿಂ ಅಹ್ಮದ್, ರೆಹಮಾನ್ ಖಾನ್, ಮಾರ್ಗರೇಟ್ ಆಳ್ವಾ, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಕೆ.ಗೋವಿಂದರಾಜ್, ಡಾ.ಹೆಚ್.ಸಿ.ಮಹದೇವಪ್ಪ, ಎನ್.ಚಲುವರಾಯಸ್ವಾಮಿ, ಬಸವರಾಜ ರಾಯರೆಡ್ಡಿ, ಬಿ.ಕೆ.ಸುರೇಶ್, ಎಲ್.ಹನುಮಂತಯ್ಯ, ನಾಸಿರ್ ಹುಸೇನ್, ಎಂ.ಆರ್.ಸೀತಾರಾಮ್, ಶಿವರಾಜ್ ತಂಗಡಗಿ, ವಿನಯ್ ಕುಲಕರ್ಣಿ, ವಿ.ಎಸ್.ಉಗ್ರಪ್ಪ, ಭೋಸರಾಜ್, ಶರಣಪ್ಪ ಸುನಗಾರ್
ವಿನಯ್ ಕುಮಾರ್, ಜಿ.ಪದ್ಮಾವತಿ, ಶಾಮನೂರು ಶಿವಶಂಕರಪ್ಪ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಕಿಕ್ಕಿಸಿ
Published On - 11:34 pm, Wed, 14 December 22