ತಮ್ಮ ವಿರುದ್ಧ ಕನಕಪುರದಲ್ಲಿ ಸಚಿವ ಅಶೋಕ್​ ಸ್ಪರ್ಧೆ ಬಗ್ಗೆ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ

ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್​ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಇದಕ್ಕೆ ಡಿಕೆ ಶಿವಕುಮಾರ್​ ಸ್ವಾಗತಿಸಿದ್ದಾರೆ.

ತಮ್ಮ ವಿರುದ್ಧ ಕನಕಪುರದಲ್ಲಿ ಸಚಿವ ಅಶೋಕ್​ ಸ್ಪರ್ಧೆ ಬಗ್ಗೆ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ
Follow us
ರಮೇಶ್ ಬಿ. ಜವಳಗೇರಾ
|

Updated on: Apr 10, 2023 | 10:46 AM

ಬೆಂಗಳೂರು (ಏ.10): ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023)  ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌(DK Shivakumar) ಅವರನ್ನು ಅವರದ್ದೇ ಕ್ಷೇತ್ರದಲ್ಲಿ ಕಟ್ಟಿ ಹಾಕಲು ಬಿಜೆಪಿ ಹೈಕಮಾಂಡ್​ ಭಾರೀ ಚಿಂತನೆ ನಡೆಸಿದೆ. ಈ ಇಬ್ಬರು ವಿರುದ್ಧ ಪ್ರಬಲ ನಾಯಕರನ್ನ ಕಣಕ್ಕಿಳಿಸುಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸಿದ್ದರಾಮಯ್ಯ ಸ್ಪರ್ಧಿಸುವ ವರುಣಾ ಕ್ಷೇತ್ರದಿಂದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಶಿವಕುಮಾರ್‌ ಪ್ರತಿನಿಧಿಸುವ ಕನಕಪುರ ಕ್ಷೇತ್ರದಿಂದ ಕಂದಾಯ ಸಚಿವ ಆರ್‌.ಅಶೋಕ್‌ ಅವರನ್ನು ಕಣಕ್ಕಿಳಿಸುವ ಸಂಬಂಧ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಗಂಭೀರ ಚರ್ಚೆಯಾಗಿದೆ ಎನ್ನಲಾಗಿದೆ. ಅಶೋಕ್ ಹಾಗೂ ಸೋಮಣ್ಣ ಅವರಿಗೆ ತಮ್ಮ ಮೂಲ ಕ್ಷೇತ್ರದ ಜೊತೆ ಈ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಹೈಕಮಾಂಡ್​ ಒತ್ತಡ ಹೇರುತ್ತಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಹಾಕಿದರೆ ಅವರು ಸ್ವಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಿದ್ದಾರೆ. ಹೀಗಾಗಿ ಬೇರೆ ಕ್ಷೇತ್ರದಲ್ಲಿ ನಾವು ಆಟ ಆಡಬಹುದು ಎನ್ನುವುದು ಬಿಜೆಪಿ ಹೈಕಮಾಂಡ್​ನ ತಂತ್ರವಾಗಿದೆ. ಆದ್ರೆ, ಇದಕ್ಕೆ ಅಶೋಕ್ ಹಾಗೂ ಸೋಮಣ್ಣ ಒಪ್ಪುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ದೆಹಲಿಯಿಂದಲೇ ಸ್ಪಷ್ಟನೆ ಕೊಟ್ಟ ಸೋಮಣ್ಣ

ಈ ಬಗ್ಗೆ ಶೃಂಗೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ರಾಜಕಾರಣದಲ್ಲಿ ಯಾರೇ ಬಂದರೂ ಎದುರಿಸಬೇಕು, ಹೋರಾಡಬೇಕು. ರಾಜಕಾರಣದಲ್ಲಿ ಯಾರು ಯಾರ ವಿರುದ್ಧವಾದರೂ ನಿಲ್ಲಬಹುದು. ಅಶೋಕ್ ಸ್ಪರ್ಧೆ ಮಾಡುವುದಾದರೆ ಅವರಿಗೆ ನನ್ನ ಸ್ವಾಗತವಿದೆ. ಬಿಜೆಪಿಯವರ ಈ ದೊಡ್ಡ ನಿರ್ಧಾರವನ್ನು ನಾನು ಸ್ವಾಗತಿಸುವೆ. ಶಾರದಾಂಭೆ ದರ್ಶನಕ್ಕೆ ಬಂದಿದ್ದೇನೆ. ಇದರಲ್ಲಿ ರಾಜಕಾರಣ ಇಲ್ಲ. ಮೂರನೇ ಪಟ್ಟಿ ಚರ್ಚೆ ಆಗುತ್ತಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದರು.

ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ(ಏಪ್ರಿಲ್ 09) ನವದೆಹಲಿಯಲ್ಲಿ ಇಂದು(ಏಪ್ರಿಲ್ 09) ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಇದು ಸತ್ಯಕ್ಕೆ ದೂರವಾದ ವಿಚಾರ. ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯಾವುದೇ ಚರ್ಚೆ ಮಾಡಿಲ್ಲ. ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವುದು ವದಂತಿ ಎಂದು ಸ್ಪಷ್ಟಪಡಿಸಿದ್ದರು.

ಸಿದ್ದರಾಮಯ್ಯ ನಾವು ಒಟ್ಟಿಗೆ ರಾಜಕೀಯ ಪ್ರವೇಶ ಮಾಡಿದ್ದೇವೆ. ಸಿಎಂ ಆಗಿ ಅವರು ಹಲವು ಕೆಲಸ ಕಾರ್ಯ ಮಾಡಿದ್ದಾರೆ. ಚುನಾವಣೆಯಲ್ಲಿ ಯಾರು ನಿಲ್ಲುವುದು ಬಿಡುವುದು ಬಿಟ್ಟು ಇತಿಹಾಸ ನೋಡಬೇಕು. ಪಕ್ಷ ಯಾರನ್ನ ನಿಲ್ಲಿಸುತ್ತೋ ಅವರು ನಿಲ್ಲಬೇಕು. ಅದು ಸಾಂಕೇತಿಕವಾಗಿ ನಡೆಯುತ್ತಿರುತ್ತದೆ. ನಾನು ಸ್ಪರ್ಧೆ ಮಾಡುವ ಬಗ್ಗೆ ಪ್ರಶ್ನೆನೇ ಇಲ್ಲ ಎಂದು ಹೇಳಿದ್ದರು.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್