DK Shivakumar: ಕಾಂಗ್ರೆಸ್​ಗೆ ಸೇರಿದವರೆಲ್ಲರಿಗೂ ಟಿಕೆಟ್​ ಕೊಡಲು ಆಗುವುದಿಲ್ಲ; ಡಿಕೆ ಶಿವಕುಮಾರ್

ಕಾಂಗ್ರೆಸ್​ಗೆ ಸೇರಿದವರೆಲ್ಲರಿಗೂ ಟಿಕೆಟ್ ಕೊಡಬೇಕು ಎಂದರೆ ಆಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದರು.

Follow us
|

Updated on:Apr 07, 2023 | 7:46 PM

ಬೆಂಗಳೂರು: ಕಾಂಗ್ರೆಸ್​ಗೆ ಸೇರಿದವರೆಲ್ಲರಿಗೂ ಟಿಕೆಟ್ ಕೊಡಬೇಕು ಎಂದರೆ ಆಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಶುಕ್ರವಾರ ಹೇಳಿದರು. ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿರುವ ಸಂದರ್ಭದಲ್ಲೇ ಆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣ ಎಂದರೆ ಫುಟ್ಬಾಲ್ ಅಲ್ಲ, ಚೆಸ್​ ಗೇಮ್​ ಇದ್ದಂತೆ. ಕಾಂಗ್ರೆಸ್​ಗೆ ಸೇರಿಸಿಕೊಳ್ಳುವಾಗ ಟಿಕೆಟ್​ ಕೊಡುವುದಾಗಿ ಹೇಳಿರಲಿಲ್ಲ. ಬೇಷರತ್​ ಆಗಿ ಪಕ್ಷಕ್ಕೆ ಸೇರಿಸಿಕೊಂಡಿದ್ದೆವು. ಪಕ್ಷಕ್ಕೆ ಸೇರಿದವರೆಲ್ಲರಿಗೂ ಟಿಕೆಟ್​ ಕೊಡಲು ಆಗುವುದಿಲ್ಲ. ಅಸಮಾಧಾನ ಇರುವವರನ್ನು ಕರೆದು ಮಾತನಾಡುತ್ತೇವೆ, ಅಸಮಾಧಾನ ಸರಿಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಚಿಕ್ಕಮಗಳೂರಿನ ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ವೈಎಸ್​​ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್ ದೊರೆಯಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಕಡೂರು ಕ್ಷೇತ್ರದಿಂದ ಆನಂದ್ ಅವರಿಗೆ ಟಿಕೆಟ್ ಘೋಷಸಲಾಗಿತ್ತು. ಇದಕ್ಕೆ ದತ್ತಾ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದರು.

ಟಿಕೆಟ್​ ಘೋಷಣೆ ನಂತರ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ. ಟಿಕೆಟ್ ನೀಡುವುದಕ್ಕೂ ಮುಂಚೆ ಬೇರೆ ಕ್ಷೇತ್ರಗಳಲ್ಲಿ ನಡೆಸಿದಂತೆ ನಮ್ಮ ಕ್ಷೇತ್ರದಲ್ಲೂ ಅದೇ ಪ್ರಕ್ರಿಯೆ ನಡೆಸಬಹುದಿತ್ತು. ವರಿಷ್ಠರು ನನ್ನನ್ನು ಸಂಪರ್ಕ ಮಾಡಬಹುದಿತ್ತು, ಆದರೆ ಮಾಡಲಿಲ್ಲ. ದತ್ತಾ ಶಕ್ತಿ ಗೌಣ, ಏನು ತೊಂದರೆ ಆಗಲ್ಲವೆಂದು ಭಾವಿಸಿರಬಹುದು. ಟಿಕೆಟ್​ ಕೈತಪ್ಪಿದ್ದರಿಂದ ನನ್ನ ಅಭಿಮಾನಿಗಳು, ಬೆಂಬಲಿಗರಿಗೆ ನೋವಾಗಿದೆ. ಕಾರ್ಯಕರ್ತರು ಹೇಳಿದ್ದರಿಂದ ನಾನು ಸ್ವಾಭಿಮಾನದ ವಿಚಾರ ಹೇಳಿದ್ದೇನೆ. ನಾನು ಯಾವುದೇ ಷರತ್ತು ಹಾಕಿ ಕಾಂಗ್ರೆಸ್​ ಪಕ್ಷಕ್ಕೆ ಸೇರಿದವನಲ್ಲ. ಸಮೀಕ್ಷೆ, ಜನಾಭಿಪ್ರಾಯದಲ್ಲಿ ನನ್ನ ಹೆಸರು ಬರಬಹುದು ಎಂದು ಭಾವಿಸಿದ್ದೆ. ಸಮೀಕ್ಷೆ ಆಧಾರದಲ್ಲಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾರೆಂದು ತಿಳಿದಿದ್ದೆ. ನಾನು ಸಾಮಾನ್ಯರಲ್ಲಿ ಸಾಮಾನ್ಯ, ನಾನು ಜನರನ್ನು ನಂಬಿಕೊಂಡಿದ್ದೇನೆ. ನನಗೆ ಯಾವುದೇ ರಾಜಕೀಯ ಹಿನ್ನೆಲೆಯಿಲ್ಲ, ಹಣ ಬಲವೂ ಇಲ್ಲ. ಟಿಕೆಟ್ ಕೈತಪ್ಪಿದ್ದರಿಂದ ಅಭಿಮಾನಿಗಳು, ಮಹಿಳೆಯರು ಕಣ್ಣೀರಿಡುತ್ತಿದ್ದಾರೆ ಎಂದು ಯಗಟಿ ಗ್ರಾಮದ ಮನೆಯಲ್ಲಿ ವೈಎಸ್​ವಿ ದತ್ತಾ ಹೇಳಿದ್ದಾರೆ.

ಇದನ್ನೂ ಓದಿ: Karnataka Election: ಕಾಂಗ್ರೆಸ್​ಗೆ ಬಂಡಾಯದ ಬೇಗುದಿ; ಎಲ್ಲೆಲ್ಲಿ ಯಾರೆಲ್ಲ ಸಿಡಿದೆದ್ದರು? ಇಲ್ಲಿದೆ ಪೂರ್ಣ ವಿವರ

ಇದರ ಬೆನ್ನಲ್ಲೇ ದತ್ತಾ ನಿವಾಸಕ್ಕೆ ಕಡೂರು ಕಾಂಗ್ರೆಸ್ ಅಭ್ಯರ್ಥಿ ಆನಂದ್​ ಭೇಟಿ ನೀಡಿದ್ದು ಅಸಮಾಧಾನ ತಣಿಸುವ ಯತ್ನ ಮಾಡಿದ್ದಾರೆ.

ನೊಣವಿನಕೆರೆ ಅಜ್ಜಯ್ಯನ ಮೊರೆ ಹೋದ ಡಿಕೆಶಿ

ಈ ಮಧ್ಯೆ, ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ನಂತರ ಡಿಕೆ ಶಿವಕುಮಾರ್ ನೇರವಾಗಿ ಬಸವೇಶ್ವರನಗರದಲ್ಲಿನ ಅಜ್ಜಯ್ಯನವರ ಪೀಠಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ನೊಣವಿನಕೆರೆ ಪೀಠದ ಅಜ್ಜಯ್ಯನವರ 120ನೇ ಜನ್ಮದಿನಾಚರಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಸಭೆ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿದ್ದ ಶಿವಕುಮಾರ್ 120ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ಇಂದು ಬೆಂಗಳೂರಿಗೆ ಬರುತ್ತಿದ್ದಂತೆ ನೇರವಾಗಿ ಮಠಕ್ಕೆ ಭೇಟಿ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:07 pm, Fri, 7 April 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ