KR Pete Election Results: ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜೆಡಿಎಸ್-ಬಿಜೆಪಿ ನಡುವೆ ಪ್ರಬಲ ಪೈಪೋಟಿ
Krishnarajpete Assembly Election Result 2023 Live Counting Updates: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಬಿ.ಎಲ್. ದೇವರಾಜು, ಬಿಜೆಪಿಯಿಂದ ಕೆಸಿ ನಾರಯಣಗೌಡ, ಜೆಡಿಎಸ್‌ನಿಂದ ಎಚ್‌ಟಿ ಮಂಜುನಾಥ್ ಅಖಾಡದಲ್ಲಿದ್ದಾರೆ. ಮತ ಎಣಿಕೆಯ ವಿವರ ಇಲ್ಲಿದೆ.

KR Pete Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ (Krishnarajpete Assembly constituency) ಬಿಜೆಪಿಯಿಂದ ಕೆಸಿ ನಾರಯಣಗೌಡ ಕಣದಲ್ಲಿದ್ದಾರೆ. ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಿ.ಎಲ್. ದೇವರಾಜು ಕೈ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ ಎಚ್‌ಟಿ ಮಂಜುನಾಥ್ ಅವರು ಸ್ಪರ್ಧಿಸಿದ್ದಾರೆ.
ಹೇಮಾವತಿ ನದಿ ಹರಿಯುವ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳುವ ಮೂಲಕ ಇತಿಹಾಸ ಬರೆದಿದೆ. ಹೇಳಿ ಕೇಳಿ ಜೆಡಿಎಸ್ ಭದ್ರಕೋಟೆಯಂತಿದ್ದ ಕ್ಷೇತ್ರದಲ್ಲಿ ಕಳೆದ ಉಪ ಚುನಾವಣೆಯಲ್ಲಿ ಕೆ.ಸಿ. ನಾರಾಯಣಗೌಡರು ಬಿಜೆಪಿಯಿಂದ ಆಯ್ಕೆಯಾಗಿದ್ದರು.
ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಡಾ.ನಾರಾಯಣ ಗೌಡರು ಗೆಲುವು ಸಾಧಿಸಿದ್ದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪರಿಣಾಮ ಉಪಚುನಾವಣೆ ನಡೆದಿತ್ತು. ಈ ಸಂದರ್ಭ ಡಾ.ನಾರಾಯಣಗೌಡರು ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಪಡೆಯುವುದರೊಂದಿಗೆ ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆದು ಗಮನಸೆಳೆದಿದ್ದರು.
ಜೆಡಿಎಸ್ ನಾಯಕರು ಏನೇ ಆಗಲಿ ಕೆ.ಆರ್.ಪೇಟೆಯಲ್ಲಿ ಗೆದ್ದೇ ಗೆಲ್ಲಬೇಕು. ಅಷ್ಟೇ ಅಲ್ಲದೆ ಪಕ್ಷಕ್ಕೆ ದ್ರೋಹ ಮಾಡಿರುವ ಡಾ.ನಾರಾಯಣಗೌಡ ಅವರನ್ನು ಸೋಲಿಸಿಯೇ ತೀರಬೇಕೆಂಬ ಪಣತೊಟ್ಟಿರುವುದು ಗೊತ್ತೇ ಇದೆ.