CT Ravi: ಸಿಟಿ ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದ ಕೆಎಸ್ ಈಶ್ವರಪ್ಪ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮಂಗಳವಾರ ಹೇಳಿದರು.

CT Ravi: ಸಿಟಿ ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದ ಕೆಎಸ್ ಈಶ್ವರಪ್ಪ
ಸಿಟಿ ರವಿ
Follow us
|

Updated on:Apr 25, 2023 | 4:40 PM

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಅವರೇ ಮುಂದಿನ ಮುಖ್ಯಮಂತ್ರಿ ಆಗಲಿ (Next CM Of Karnataka) ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಮಂಗಳವಾರ ಹೇಳಿದರು. ಚಿಕ್ಕಮಗಳೂರಿನ ನಿಡಘಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರವಿ ಮುಂದಿನ ಮುಖ್ಯಮಂತ್ರಿ ಆಗಲೆಂದು ಬಹಿರಂಗ ಸಭೆಯಲ್ಲಿಯೇ ಹೇಳಿದರು. ಚಿಕ್ಕಮಗಳೂರಿನಿಂದ ಸಿಟಿ ರವಿ ಅವರಿಗೆ ಮತ ನೀಡಿ ಅವರನ್ನು ಗೆಲ್ಲಿಸಿ. ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು. ಸೋಮವಾರವಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ರವಿ, ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಸಮುದಾಯದವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ಒತ್ತಾಯಗಳ ನಡುವೆ ಇದೀಗ ಈಶ್ವರಪ್ಪ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಮತ್ತೊಂದೆಡೆ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಮುಂದುವರಿಸಬೇಕು ಎಂಬ ಕೂಗೂ ಬಿಜೆಪಿಯ ಒಂದು ವಲಯದಲ್ಲಿ ಕೇಳಿಬರುತ್ತಿದೆ.

ಕೆಎಸ್ ಈಶ್ವರಪ್ಪ ಅವರು ಕೆಲವು ದಿನಗಳ ಹಿಂದಷ್ಟೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದಾಗ್ಯೂ, ಪಕ್ಷದ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿಯೂ ಬಿಜೆಪಿಯನ್ನು ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿಯೂ ಘೋಷಿಸಿದ್ದಾರೆ.

ಇದನ್ನೂ ಓದಿ: KS Eshwarappa: ಚುನಾವಣಾ ರಾಜಕೀಯಕ್ಕೆ ಹಿಂದೂ ಫೈರ್ ಬ್ರಾಂಡ್ ಗುಡ್ ​ಬೈ: ಕೆಎಸ್ ಈಶ್ವರಪ್ಪ ರಿಯಾಕ್ಷನ್ ಹೀಗಿದೆ

‘ದೇಶದ್ರೋಹಿ ಮುಸ್ಲಿಮರ ಮತ ಬೇಡ’

ದೇಶದ್ರೋಹಿ ಮುಸ್ಲಿಮರ ಮತ ನಮಗೆ ಬೇಕಿಲ್ಲ. ಇದನ್ನು ನಿನ್ನೆಯೂ ಹೇಳಿದ್ದೇನೆ. ಇಂದು ಹಾಗೂ ನಾಳೆಹಯೂ ಇದನ್ನೇ ಪುನರುಚ್ಚರಿಸುತ್ತೇನೆ ಎಂದು ಈಶ್ವರಪ್ಪ ಹೇಳಿದರು. ರಾಷ್ಟ್ರಭಕ್ತ ಮುಸ್ಲಿಮರು ಬಿಜೆಪಿ ಜೊತೆಯೇ ಇದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿಯನ್ನು ಜಾತಿವಾದಿ ಎನ್ನುತ್ತಾರೆ. ಒಕ್ಕಲಿಗರು ನನ್ನ ಹಿಂದೆ ಬನ್ನಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಾರೆ. ಸಿದ್ದು-ಡಿಕೆಶಿ ನೇರವಾಗಿ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಗೆ ಕೋಮುವಾದಿ ರಾಜಕಾರಣ ಎನ್ನುತ್ತಾರೆ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸಿಟಿ ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವುದು ನಮ್ಮ ಹೆಮ್ಮೆ. ಅವರು ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದಾರೆ ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Tue, 25 April 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ