ಹುಬ್ಬಳ್ಳಿ: ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Karghe) ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿಯವರನ್ನು ವಿಷಸರ್ಪಕ್ಕೆ ಹೋಲಿಸಿದ ನಂತರ ಅವರ ಜೀವನ ಸಾಧನೆ ಮಣ್ಣುಪಾಲಾಯ್ತು. ಇನ್ನು ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಕೂಡಾ ಪ್ರಧಾನಿ ಮೋದಿಯವರ ಬಗ್ಗೆ ಮಾತಿನಾಡಿದ್ದಾರೆ. ಇದು ಆನೆ ಗಾತ್ರದ ಮೋದಿಯವರ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ ಖರ್ಗೆ ಮಾತನಾಡಿದ ಹಾಗೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ವಾಗ್ದಾಳಿ ಮಾಡಿದ್ದಾರೆ.
ಹುಬ್ಬಳ್ಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ನ ಕೆಲಸವಾಗಿದೆ. ಬಜರಂಗದಳವನ್ನು ನಿಷೇಧ ಮಾಡುವ ವಿಚಾರದಲ್ಲಿ ಅವರಲ್ಲೇ ಗೊಂದಲವಿದೆ. ಭಾರತ ಸಂಸ್ಕೃತಿಯ ರಕ್ಷಣೆಗಿರುವ ಸಂಘಟನೆ ಬಜರಂಗದಳ. ಪಿಎಫ್‌ಐಗೆ ಹೋಲಿಸಿದ್ದು ದೊಡ್ಡ ದುರಂತ. ಹಿಂದುಗಳನ್ನು ಪಕ್ಕಕ್ಕೆ ಸರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಲಿಂಗಾಯತರ ಕ್ಷಮೆ ಕೋರಿದ್ರಾ ಸಿದ್ದರಾಮಯ್ಯ? ವರುಣಾದಲ್ಲಿ ಮಾಜಿ ಸಿಎಂಗೆ ಶುರುವಾಗಿದೆಯಾ ಈ ಒಂದು ಭಯ?
ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರ ಪರಿಸ್ಥಿತಿ ನೋಡಿ ಅಯ್ಯೋ ಪಾಪ ಅನಿಸುತ್ತಿದೆ. ಆರ್‌ಎಸ್‌ಎಸ್, ಹಿಂದುತ್ವ ಬಗ್ಗೆ ವಿಧಾಸನಭೆಯಲ್ಲಿ ಮಾತನಾಡಿದ್ದ ಜಗದೀಶ್ ಶೆಟ್ಟರ್ ಸ್ವಾಭಿಮಾನವನ್ನು ನಾನು ನಿರೀಕ್ಷಿಸುತ್ತಿದ್ದೆ. ಟಿಕೆಟ್‌ಗಾಗಿ ಜಗದೀಶ್ ಶೆಟ್ಟರ್ ಸ್ವಾಭಿಮಾನ ಮಾರಿಕೊಳ್ಳುತ್ತಿದ್ದಾರೆ. ಜಗದೀಶ್ ಶೆಟ್ಟರ್ ಬಹಿರಂಗವಾಗಿ ಕಾಂಗ್ರೆಸ್ ನಿಲುವನ್ನು ಖಂಡಿಸಲಿ. ಒಂದುವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಬಜರಂಗದಳ ನಿಷೇಧ ಮಾಡಿದರೇ, ಜಗದೀಶ್ ಶೆಟ್ಟರ್ ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು.
ಇನ್ನು ಜಗದೀಶ್ ಶೆಟ್ಟರ್ ಅವರು ಎಂದೂ ಸಿದ್ಧಾಂತವನ್ನು ಬಿಟ್ಟು ಹೋಗಿಲ್ಲ. ಜಗದೀಶ್ ಶೆಟ್ಟರ್ ಪ್ರಧಾನಿ ಮೋದಿಯವರ ಫೋಟೋವನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಯಾರೋ ಒಬ್ಬ ವ್ಯಕ್ತಿಯ ಕಾರಣ ಪಕ್ಷ ತೊರೆದಿದ್ದಾಗಿ ಅವರೆ ಹೇಳುತ್ತಿದ್ದಾರೆ. ಇದು ರಾಷ್ಟ್ರೀಯವಾದಿಗಳಿಗೂ ರಾಷ್ಟ್ರ ವಿರೋಧಿಗಳಿಗೂ ನಡುವೆ ನಡೆಯುತ್ತಿರುವ ಚುನಾವಣೆ. ವಿಪಕ್ಷನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾತಿವಾದಿ ರಾಜಕಾರಣಿಗಳು ಎಂದರು.
ಕೆಪಿಸಿಸಿ ಅಧ್ಯಕ್ಷರು ಒಕ್ಕಲಿಗರೆಲ್ಲಾ ನನ್ನ ಹಿಂದೆ ಬನ್ನಿ ಅಂತಾರೆ, ಇವನಿಗಿಂತ ಬೇರೆ ಜಾತಿವಾದಿ ಬೇರೆಯವರು ಬೇಕಾ? ಡಿ.ಕೆ. ಶಿವಕುಮಾರ್ ಹೆಸರು ಯಾಕೆ ಬೇಕು. ಕೆಡಿ ಶಿವಕುಮಾರ್ ಅಂತಾ ಬದಲಾಯಿಸಿಕೊಳ್ಳಿ. ಕರ್ನಾಟಕದಲ್ಲಿ ಜಾತಿ ಹೆಸರಲ್ಲಿ ಬೆಂಕಿ ಹಚ್ಚಿದ್ದೀರಿ. ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕಳೆದುಕೊಳ್ಳುತ್ತೀರಿ. ವೀರಪ್ಪ ಮೊಯ್ಲಿ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಧರ್ಮ ವಿರೋಧಿ, ದೇಶ ವಿರೋಧಿ ಪಕ್ಷ. ಕೂಡಲೆ ಕಾಂಗ್ರೆಸ್‌ನವರು ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ