ಜೆಡಿಎಸ್ ಸೋಲಿಸಲು ಕುಮಾರಸ್ವಾಮಿ ಸರ್ಕಾರದಿಂದ ಲೂಟಿ ಮಾಡಿದ ಹಣ ಬಳಸುತ್ತಿರುವ ಕಾಂಗ್ರೆಸ್: ರೇವಣ್ಣ

|

Updated on: May 08, 2023 | 3:47 PM

ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಕಾಂಗ್ರೆಸ್ ಅಧ್ಯಕ್ಷರೇ ಕಾರಣ ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರು ಹಾಸನದಲ್ಲಿ ನೇರ ಆರೋಪ ಮಾಡಿದ್ದಾರೆ.

ಜೆಡಿಎಸ್ ಸೋಲಿಸಲು ಕುಮಾರಸ್ವಾಮಿ ಸರ್ಕಾರದಿಂದ ಲೂಟಿ ಮಾಡಿದ ಹಣ ಬಳಸುತ್ತಿರುವ ಕಾಂಗ್ರೆಸ್: ರೇವಣ್ಣ
ಹೆಚ್​ಡಿ ರೇವಣ್ಣ
Follow us on

ಹಾಸನ: ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಕಾಂಗ್ರೆಸ್ (Congress) ಅಧ್ಯಕ್ಷರೇ ಕಾರಣ ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಅವರು ನೇರ ಆರೋಪ ಮಾಡಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸೋಲಿಸಬೇಕು ಎಂದಿಲ್ಲ. ಅವರು ಜೆಡಿಎಸ್​ ಸೋಲಿಸಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕಾಗಿ ಕುಮಾರಸ್ವಾಮಿ (HD Kumaraswamy) ಸರ್ಕಾರದ ಅವಧಿಯಲ್ಲಿ ಲೂಟಿ ಮಾಡಿದ ಹಣವನ್ನು ಖರ್ಚು ಮಾಡುತ್ತಿದ್ದಾರೆ. ಇಂತಹ ದುಷ್ಟ ಶಕ್ತಿಯನ್ನು ಸೋಲಿಸಿ ಮನೆಗೆ ಕಳಿಸಿ ಎಂದು ಮನವಿ ಮಾಡಿದರು.

ಹೊಳೆನರಸೀಪುರದಲ್ಲಿ ಜೆಡಿಎಸ್ ಪರ ದೇವೇಗೌಡ ಪ್ರಚಾರ

ಹೊಳೆನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್​ಡಿ ರೇವಣ್ಣ ಅವರ ಪರ ಪ್ರಚಾರ ನಡೆಸಿದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಮತಯಾಚನೆ ನಡೆಸಿದರು. ಇಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನ ಹಿನ್ನೆಲೆ ನಗರದ ಬಯಲು ರಂಗ ಮಂದಿರ ಆವರಣದಲ್ಲಿ ಆಯೋಜಿಸಿದ ಬೃಹತ್ ಸಭೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾದರು. ಸಮಾವೇಶದಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಬಾಗಿಯಾಗಿದರು.

ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ, ಈ ಕ್ಷೇತ್ರದಲ್ಲಿ ರೇವಣ್ಣ ಸಮಗ್ರ ಅಭಿವೃದ್ಧಿ ಮಾಡಿದಾರೆ. ಎಲ್ಲರಲ್ಲೂ ಕೈ ಮುಗಿದು ಮನವಿ ಮಾಡುತ್ತೇನೆ, ರೇವಣ್ಣ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಮತ ನೀಡಿ ವಿದಾನಸಭೆಗೆ ಕಳುಹಿಸಿ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ