Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumta-Honnavara Election Results: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟಿದ್ದು, ಯಾರಿಗೆ ಒಲಿಯಲಿದ್ದಾನೆ ಮತದಾರ?

Kumata-Honnavar Assembly Election Result 2023 Live Counting Updates: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ದಿನಕರ​ ಶೆಟ್ಟಿ​, ಕಾಂಗ್ರೆಸ್​ನಿಂದ ನಿವೇದಿತ್​ ಆಳ್ವಾ​ ಹಾಗೂ ಜೆಡಿಎಸ್​ನಿಂದ ಸೂರಜ್ ನಾಯಕ್ ಸೋನಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Kumta-Honnavara Election Results: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟಿದ್ದು, ಯಾರಿಗೆ ಒಲಿಯಲಿದ್ದಾನೆ ಮತದಾರ?
ದಿನಕರ ಶೆಟ್ಟಿ, ಸೂರಜ್ ನಾಯಕ್ ಸೋನಿ, ನಿವೇದಿತ್​ ಆಳ್ವಾ​ ​
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 11:30 AM

Kumta-Honnavara Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ (Kumata Honnavar Assembly Constituency) ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ದಿನಕರ ಶೆಟ್ಟಿ ಸ್ಪರ್ಧಿಸಿದ್ದಾರೆ. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 59392 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಇವರು ಮತ್ತೊಮ್ಮೆ ಗೆಲ್ಲುವ ಭರವಸೆಯಲ್ಲಿದ್ದಾರೆ. ಇನ್ನು ಇದೀಗ ಜೆಡಿಎಸ್​ನ ಸೂರಜ್ ನಾಯಕ್ ಸೋನಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್​​ನಿಂದ ಇದೇ ಮೊದಲ ಬಾರಿಗೆ ಮಾಜಿ ರಾಜ್ಯಪಾಲರು ಆಗಿದ್ದ ಮಾರ್ಗರೇಟ್​ ಆಳ್ವಾ ಅವರ ಮಗ ನಿವೇದಿತ ಆಳ್ವಾಗೆ ಟಿಕೆಟ್​ ನೀಡಿದ್ದಾರೆ. ಇನ್ನು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಶಾರದಾ ಶೆಟ್ಟಿ ಎಂಬುವವರು ಕಾಂಗ್ರೆಸ್​ ಪರವಾಗಿ ಕಣದಲಿದ್ದು, 26642 ಮತಗಳನ್ನ ಪಡೆದು ಭಾರೀ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಕುಮಟಾ-ಹೊನ್ನಾವರ ಕ್ಷೇತ್ರದಲ್ಲಿ ಈ ಹಿಂದೆ ಬಿಜೆಪಿ ಕಾಂಗ್ರೆಸ್ ನಡುವೆ​ ನೇರಾನೇರ ಸ್ಪರ್ಧೆ ಏರ್ಪಟಿದ್ದು, ಈ ಬಾರಿ ಜೆಡಿಎಸ್​ನಿಂದ ಸೂರಜ್ ನಾಯಕ್ ಸೋನಿ ಸ್ಪರ್ಧಿಸಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಸೂರಜ್ ನಾಯಕ್ ಸೋನಿ ಅವರು ಹಿಂದೂ ಕಾರ್ಯಕರ್ತ ಕೂಡ ಹೌದು, ಹಲವಾರು ಹಿಂದೂ ಸಂಘಟನೆಗಳಿಂದ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:15 am, Sat, 13 May 23

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ