AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kundapur Election Results: ಕುಂದಾಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್​​ ವಿಜಯ ಬಾವುಟ ಹಾರಿಸುತ್ತ?

Kundapur Assembly Election Result 2023 Live Counting Updates: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಎಂ,ದಿನೇಶ್​​ ಹೆಗ್ಡೆ​​​ ಹಾಗೂ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್​​ ಕೋಡ್ಗಿ, ಜೆಡಿಎಸ್​​​ನಿಂದ ​​ ರಮೇಶ್ ಕುಂದಾಪುರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Kundapur Election Results: ಕುಂದಾಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್​​ ವಿಜಯ ಬಾವುಟ ಹಾರಿಸುತ್ತ?
ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 2:23 PM

Share

Kundapur Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದು ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ (Kundapur Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆಯುತ್ತಿದೆ. ಬಿಜೆಪಿ ಇಲ್ಲಿ ಗೆಲುವು ಸಾಧಿಸುವ ಸಾಧ್ಯತೆಗಳು ಇದೆ. ಏಕೆಂದರೆ  ಕುಂದಾಪುರದಲ್ಲಿ ವಾಜಪೇಯಿ ಎಂದು ಕರೆಸಿಕೊಳ್ಳುವ ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಅವರ ಸತತ 4 ಬಾರಿ ಬಿಜೆಪಿಯಿಂದ ಗೆಲುವು ಸಾಧಿಸಿದವರು. ಆದರೆ ಅಧಿಕಾರಕ್ಕಿಂತ ಜನರ ಅಭಿವೃದ್ಧಿ ಮುಖ್ಯ ಎಂದು ಓಡಾಡಿದರು.   ಆದರೆ ಈ ಬಾರಿ ಅವರು ಚುನಾವಣಾ ನಿವೃತ್ತಿ ಪಡೆದಿದ್ದು, ಹೊಸ ಅಭ್ಯರ್ಥಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಿಜೆಪಿಯನ್ನು ಈ ಬಾರಿ ಗೆಲ್ಲಿಸಬೇಕು ಎಂಬ ಹಠವನ್ನು ಇಟ್ಟುಕೊಂಡು ಹಾಲಾಡಿ ಅವರು ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್​​ ಕೋಡ್ಗಿ ಅವರಿಗೆ ಬೆಂಬಲ ನೀಡಿದ್ದಾರೆ. ಜತೆಗೆ ಅವರ ಪರವಾಗಿ ಪ್ರಚಾರ ನಡೆಸಿದ್ದಾರೆ. ಕಿರಣ್ ಕುಮಾರ್​​ ಕೋಡ್ಗಿ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಕುಂದಾಪುರದಲ್ಲಿ ಕಾಂಗ್ರೆಸ್​​ಗೆ ಭಾರೀ ಪೈಪೋಟಿ ನೀಡುತ್ತಿದ್ದಾರೆ, ಇನ್ನೂ ಕಾಂಗ್ರೆಸ್​​ ಅಭ್ಯರ್ಥಿಯು ಕೂಡ ಗೆಲುವಿನ ಭರವಸೆಯನ್ನು ಹೊಂದಿದ್ದಾರೆ, ಆದರೆ ಕುಂದಾಪುರ ಜನರಿಗೆ ಬಿಜೆಪಿ ಬಗ್ಗೆ ಹೆಚ್ಚಿನ ಒಲವು ಇದ್ದು, ಈ ಬಾರಿ ಕುಂದಾಪುರದಲ್ಲಿ ಮತ್ತೆ ಬಿಜೆಪಿ ಗೆಲ್ಲುವು ಸಾಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನೂ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್​​ ಕೋಡ್ಗಿ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿರುವುದು ಕಾಂಗ್ರೆಸ್​​ನ ಎಂ,ದಿನೇಶ್​​ ಹೆಗ್ಡೆ. ಇವರು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಪೈಪೋಟಿ ನೀಡದಿದ್ದರು, ಇಲ್ಲಿಯು ಜಾತಿ ಆಧಾರದಲ್ಲಿ ಮತಗಳ ಹಂಚಿ ಹೋಗುಬಹುದು, ಇಲ್ಲಿ ಹಾಲಾಡಿ ಅವರು ಪ್ರಬಲ ನಾಯಕರಾಗಿದ್ದ ಕಾರಣ, ಕಾಂಗ್ರೆಸ್​​ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿಲ್ಲ ಎಂದು ಹೇಳಲಾಗಿತ್ತು, ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ನಂತರ ಕಾಂಗ್ರೆಸ್​​ ಸ್ವಲ್ಪ ಮಟ್ಟದಲ್ಲಿ ಬಿಜೆಪಿ ಹೊಡತ ನೀಡಬಹುದು. ಇನ್ನೂ ಇಲ್ಲಿ ಜೆಡಿಎಸ್​ ಕೂಡ ತನ್ನ ಅಭ್ಯರ್ಥಿ ಕಣಕ್ಕಿಳಿಸಿದ್ದಾರೆ, ಜೆಡಿಎಸ್​​ನಿಂದ ರಮೇಶ್ ಕುಂದಾಪುರ ಅವರು ಸ್ಪರ್ಧಿಸುತ್ತಿದ್ದಾರೆ.

ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್​​​ ​​ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:23 am, Sat, 13 May 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ