Kundapur Election 2023 Winner: ಹಾಲಾಡಿ ಶ್ರೀನಿವಾಸ್ ಶೆಟ್ಟಿ ಶಿಷ್ಯ ಕಿರಣ್ ಕುಮಾರ್ ಕೋಡ್ಗಿ ಗೆಲುವು
ಬಿಜೆಪಿ ಭದ್ರಕೋಟೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದೆ. ಕುಂದಾಪುರದಲ್ಲಿ ವಾಜಪೇಯಿ ಎಂದು ಕರೆಸಿಕೊಳ್ಳುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಶಿಷ್ಯ ಕಿರಣ್ ಕುಮಾರ್ ಕೋಡ್ಗಿ ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ.
ಕುಂದಾಪುರ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದು ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ, ಕುಂದಾಪುರದಲ್ಲಿ ಮತ್ತೆ ಬಿಜೆಪಿ ತೆಕ್ಕೆಗೆ ಹೋಗಿದೆ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ (Kundapur Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆಯುತ್ತಿದೆ. ಬಿಜೆಪಿ ಭದ್ರಕೋಟೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದೆ. ಕುಂದಾಪುರದಲ್ಲಿ ವಾಜಪೇಯಿ ಎಂದು ಕರೆಸಿಕೊಳ್ಳುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಶಿಷ್ಯ ಕಿರಣ್ ಕುಮಾರ್ ಕೋಡ್ಗಿ ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಕುಂದಾಪುರದಲ್ಲಿ ಕಾಂಗ್ರೆಸ್ಗೆ ಭಾರೀ ಪೈಪೋಟಿ ನೀಡಿದ್ದು, ಈ ಬಾರಿ ಕುಂದಾಪುರದ ಜನ ಬಿಜೆಪಿ ಕೈಹಿಡಿದ್ದಿದ್ದಾರೆ.
ಇನ್ನೂ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೋಡ್ಗಿ ಅವರಿಗೆ ಪ್ರಬಲ ಪೈಪೋಟಿ ನೀಡಿದ ಕಾಂಗ್ರೆಸ್ನ ಎಂ,ದಿನೇಶ್ ಹೆಗ್ಡೆ ಅವರು ಸೋತಿದ್ದಾರೆ. ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿಲ್ಲ ಎಂದು ಹೇಳಲಾಗಿತ್ತು, ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ನಂತರ ಕಾಂಗ್ರೆಸ್ ಸ್ವಲ್ಪ ಮಟ್ಟದಲ್ಲಿ ಬಿಜೆಪಿ ಹೊಡತ ನೀಡಬಹುದು ಎಂದಿತ್ತು ಆದರೆ ಹೆಚ್ಚು ಮತಗಳಿಂದ ಕಿರಣ್ ಕುಮಾರ್ ಕೋಡ್ಗಿ ಗೆದ್ದಿದ್ದಾರೆ. ಜೆಡಿಎಸ್ನಿಂದ ರಮೇಶ್ ಕುಂದಾಪುರ ಸೋತಿದ್ದಾರೆ.