Kundgol Assembly Election Results 2023: ಕುಂದಗೋಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ (Kundgol Assembly Constituency) ಬಿಜೆಪಿ ಪಕ್ಷ ಅಭ್ಯರ್ಥಿಯಾಗಿ ಎಂ.ಆರ್.ಪಾಟೀಲ್ ಕಣಕ್ಕಿಳಿದಿದ್ದಾರೆ. ಇತ್ತೀಚೆಗೆ ನಟ ಕಿಚ್ಚ ಸುದೀಪ್ ಎಂ.ಆರ್.ಪಾಟೀಲ್ ಪರ ಮತಯಾಚನೆ ಮಾಡುವುದರೊಂದಿಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದು ಹೇಳಿದ್ದರು.
ಇನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕುಸುಮಾವತಿ ಶಿವಳ್ಳಿ ಸ್ಪರ್ಧಿಸಿದ್ದಾರೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ದಿವಂಗತ ಮಾಜಿ ಸಚಿವ ಸಿಎಸ್ ಶಿವಳ್ಳಿ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಎಸ್. ಐ ಚಿಕ್ಕನಗೌಡರ ವಿರುದ್ಧ 634 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಆದರೆ ದುರಾದೃಷ್ಟವಶಾತ್ ಶಿವಳ್ಳಿ ಅವರು 2019 ಮಾರ್ಚ್ 22 ರಂದು ಹೃದಯಾಘಾತದಿಂದ ಸಾವನ್ನಪ್ಪಿದರು. ಶಿವಳ್ಳಿಯವರ ನಿಧನದ ನಂತರ ತೆರವಾಗಿದ್ದ ಸ್ಥಾನಕ್ಕೆ, 2019 ಮೇ ನಲ್ಲಿ ಉಪಚುನಾವಣೆ ನಡೆಯಿತು. ಈ ಉಪ ಚುನಾವಣೆಯಲ್ಲಿ ಶಿವಳ್ಳಿ ಅವರ ಪತ್ನಿ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.
ಹಜರತ್ ಅಲಿ ಅಲ್ಲಾಸಾಬ್ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿದ್ದು, ನಿರಂಜನಯ್ಯ ಮಂಕತಿಮಠ ಆಮ್ ಆದ್ಮಿ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.